ರಾಜ್ಯಾದ್ಯಂತ 349 ಕೊರೋನ ಪ್ರಕರಣ ದೃಢ: 14 ಮಂದಿ ಸಾವು

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 349 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 14 ಜನರು ಸೋಂಕಿಗೆ ಬಲಿಯಾಗಿದ್ದು, 399 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,84,022ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,967ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 9,100ಕ್ಕೆ ಏರಿಕೆಯಾಗಿದ್ದು, ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
14 ಸೋಂಕಿತರ ಬಲಿ: ಬೆಂಗಳೂರು ನಗರ 5, ದಕ್ಷಿಣ ಕನ್ನಡ 1, ಧಾರವಾಡ 1, ಕೊಡಗು 1, ಮೈಸೂರು 1, ತುಮಕೂರು 1, ಉಡುಪಿ 3 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 349 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 161, ಬೀದರ್ 1, ಚಾಮರಾಜನಗರ 1, ಚಿಕ್ಕಮಗಳೂರು 8, ಚಿತ್ರದುರ್ಗ 4, ದಕ್ಷಿಣ ಕನ್ನಡ 24, ದಾವಣಗೆರೆ 1, ಧಾರವಾಡ 2, ಹಾಸನ 23, ಕೊಡಗು 4, ಕೋಲಾರ 5, ಕೊಪ್ಪಳ 2, ಮಂಡ್ಯ 4, ಮೈಸೂರು 37, ರಾಯಚೂರು 1, ರಾಮನಗರ 4, ಶಿವಮೊಗ್ಗ 12, ತುಮಕೂರು 14, ಉಡುಪಿ 12, ಉತ್ತರ ಕನ್ನಡ 19, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.







