ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ನರೇಂದ್ರ ಮೋದಿ

photo: The new indian express
ಕುಶಿನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಇದು ವಿಶ್ವದಾದ್ಯಂತ ಬೌದ್ಧ ಯಾತ್ರಾ ಸ್ಥಳಗಳನ್ನು ಸಂಪರ್ಕಿಸಲು ಹಾಗೂ ಭಗವಾನ್ ಬುದ್ಧನ ಅಂತಿಮ ವಿಶ್ರಾಂತಿ ಸ್ಥಳಕ್ಕೆ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲ ಕಲ್ಪಿಸುವ ಪ್ರಯತ್ನವಾಗಿದೆ.
ವಿಮಾನ ನಿಲ್ದಾಣವನ್ನು ಅಂದಾಜು 260 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಹೊಸ ಟರ್ಮಿನಲ್ ಕಟ್ಟಡವು 3,600 ಚದರ ಮೀಟರ್ಗಳಲ್ಲಿ ಹರಡಿದೆ.
ಇದನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (ಎಎಐ) ಉತ್ತರ ಪ್ರದೇಶ ಸರಕಾರದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
ವಿಮಾನ ನಿಲ್ದಾಣವು ಕುಶಿನಗರಕ್ಕೆ ದೇಶ ಮತ್ತು ವಿದೇಶಗಳಿಂದ ಬೌದ್ಧ ಧರ್ಮದ ಹೆಚ್ಚಿನ ಅನುಯಾಯಿಗಳನ್ನು ಆಕರ್ಷಿಸಲು ಸಹಾಯ ಮಾಡುತ್ತದೆ ಹಾಗೂ ಬೌದ್ಧ ಥೀಮ್ ಆಧಾರಿತ ಸರ್ಕ್ಯೂಟ್ನ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ.
Next Story