ರಾಹುಲ್ ಗಾಂಧಿ ವಿರುದ್ಧ ನಳಿನ್ ಕುಮಾರ್ ಹೇಳಿಕೆ ಸರಿಯಲ್ಲ: ಯಡಿಯೂರಪ್ಪ

ವಿಜಯಪುರ, ಅ.20: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್ ಎಂದು ನಳಿನ್ ಕುಮಾರ್ ಕಟೀಲು ಹೇಳಿರುವುದು ಸರಿಯಲ್ಲ. ಆ ರೀತಿ ಅಗೌರವದಿಂದ ಯಾರೂ ಮಾತನಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಿಂದಗಿ ತಾಲೂಕಿನ ಮೊರಟಗಿ ಯಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಯಾರೂ ಯಾರ ಬಗ್ಗೆಯೂ ಈ ರೀತಿ ಅಗೌರವದಿಂದ ಮಾತನಾಡಬಾರದು. ರಾಹುಲ್ ಗಾಂಧಿ ಬಗ್ಗೆ ಗೌರವ ಇದೆ ಎಂದು ಹೇಳಿದರು.
ಎಚ್.ಡಿ.ಕುಮಾರ ಸ್ವಾಮಿ, ಸಿದ್ದರಾಮಯ್ಯ ಅವರು ಅನಗತ್ಯವಾಗಿ ಆರೆಸ್ಸೆಸ್ಸನ್ನು ಎಳೆದು ತರುತ್ತಿದ್ದಾರೆ. ಇದರಿಂದ ಅವರಿಗೆ ಯಾವುದೇ ಲಾಭವಿಲ್ಲ ಎಂದರು. ಅವರಿಬ್ಬರಿಗೆ ಜನ ಉಪಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
Next Story





