Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಸ್ಲಾಮಿನಲ್ಲಿ ಪತ್ನಿಗೆ ವಿಚ್ಛೇದನ...

ಇಸ್ಲಾಮಿನಲ್ಲಿ ಪತ್ನಿಗೆ ವಿಚ್ಛೇದನ ನೀಡಿದಾಕ್ಷಣ ಜೀವನಾಂಶ ಕೊಡುವುದರಿಂದ ತಪ್ಪಿಸಿಕೊಳ್ಳಲಾಗದು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ20 Oct 2021 8:26 PM IST
share
ಇಸ್ಲಾಮಿನಲ್ಲಿ ಪತ್ನಿಗೆ ವಿಚ್ಛೇದನ ನೀಡಿದಾಕ್ಷಣ ಜೀವನಾಂಶ ಕೊಡುವುದರಿಂದ ತಪ್ಪಿಸಿಕೊಳ್ಳಲಾಗದು: ಹೈಕೋರ್ಟ್

ಬೆಂಗಳೂರು, ಅ.20: ಇಸ್ಲಾಮಿನಲ್ಲಿ ಮದುವೆ ಸಾಮಾಜಿಕ ಒಪ್ಪಂದ, ಕಾನೂನು ಒಪ್ಪಂದವೆಂದು ಪರಿಗಣಿಸಲಾಗುತ್ತದೆ ಮತ್ತು ಇಸ್ಲಾಂನಲ್ಲಿ ಮದುವೆ ಒಂದು ಸಂಸ್ಕಾರವಲ್ಲ, ಒಪ್ಪಂದ. ಹಾಗೆಂದು ವಿಚ್ಛೇದನ ನೀಡಿದಾಕ್ಷಣ ಪತ್ನಿಗೆ ಜೀವನ ನಿರ್ವಹಣೆಗೆ ಜೀವನಾಂಶ ನೀಡುವ ಬಾಧ್ಯತೆಯಿಂದ ತಪ್ಪಿಸಿಕೊಳ್ಳಲಾಗದು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪತ್ನಿಗೆ ಜೀವನಾಂಶ ನೀಡುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪತಿ ಎಜಾಜುರ್ ರೆಹಮಾನ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ವೇಳೆ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. 

ಪೀಠ ತನ್ನ ಆದೇಶದಲ್ಲಿ ಮುಸ್ಲಿಂ ವಿವಾಹ ಒಂದು ಸಂಸ್ಕಾರವಲ್ಲ. ಎರಡು ಕುಟುಂಬಗಳ ನಡುವಿನ ಒಪ್ಪಂದದಂತೆ ಇಬ್ಬರು ವಿವಾಹ ಒಪ್ಪಂದಕ್ಕೆ ಒಳಪಡುತ್ತಾರೆ. ಇಂತಹ ವಿವಾಹವು ವಿಚ್ಛೇದನದಿಂದ ಬೇರ್ಪಟ್ಟಾಗ ಪತಿಯಾದ ವ್ಯಕ್ತಿ ತನ್ನೆಲ್ಲಾ ಬಾಧ್ಯತೆಗಳಿಂದ ಮುಕ್ತನಾಗುವುದಿಲ್ಲ. ಮೆಹರ್ ನೀಡಿದಾಕ್ಷಣ ಒಪ್ಪಂದ ಮುಕ್ತಾಯವಾಗುವುದಿಲ್ಲ. ಬದಲಿಗೆ ಕೆಲವು ನ್ಯಾಯಯುತ ಹೊಣೆಗಾರಿಕೆಗಳನ್ನು ಸೃಷ್ಟಿಸುತ್ತದೆ. ವಿಚ್ಛೇದನದಿಂದ ನಿರ್ಗತಿಕಳಾಗುವ ಮಾಜಿ ಪತ್ನಿಗೆ ಪತಿ ಜೀವನಾಂಶ ನೀಡಬೇಕಾಗುತ್ತದೆ ಎಂದು ಪೀಠ ಹೇಳಿದೆ.

*ಕುರಾನ್‍ನಲ್ಲಿ ಇರುವ ಹಲವು ಅಂಶಗಳನ್ನು ಉಲ್ಲೇಖಿಸಿರುವ ಪೀಠ*, ವಿಚ್ಛೇದಿತ ಪತ್ನಿ ಮರು ಮದುವೆಯಾಗದಿದ್ದರೆ ಅಥವಾ ಅಶಕ್ತಳಾಗಿದ್ದರೆ ಆಕೆಗೆ ಜೀವನಾಂಶ ನೀಡಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದೇ ವೇಳೆ ಮೊದಲ ಪತ್ನಿಗೆ ತಲಾಕ್ ನೀಡುವ ವೇಳೆ ಮೆಹರ್ ನೀಡಿರುವುದರಿಂದ ಜೀವನಾಂಶ ನೀಡಲು ಸಾಧ್ಯವಿಲ್ಲ. ಎರಡನೇ ಪತ್ನಿ ಹಾಗೂ ಮಕ್ಕಳ ನಿರ್ವಹಣೆಗೆ ವೆಚ್ಚ ಭರಿಸಬೇಕು ಎಂಬ ಪತಿಯ ಕಾರಣಗಳನ್ನು ತಿರಸ್ಕರಿಸಿರುವ ಪೀಠ, ನಿಮ್ಮ ವಾದ ಸರಣಿ ನೈತಿಕತೆಗೆ ವಿರುದ್ಧವಾದುದು ಎಂದಿದೆ. 

ಜೊತೆಗೆ ಅರ್ಜಿದಾರ ಪತಿ ರೆಹಮಾನ್‍ಗೆ 25 ಸಾವಿರ ದಂಡ ವಿಧಿಸಿ ಅದನ್ನು ಪತ್ನಿಗೆ ಕೊಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿ, ಅರ್ಜಿ ವಜಾಗೊಳಿಸಿದೆ. 

ಏನಿದು ಪ್ರಕರಣ: ಬೆಂಗಳೂರಿನ ಭುವನೇಶ್ವರಿ ನಗರದ ಎಜಾಜುರ್ ರೆಹಮಾನ್ 1991ರಲ್ಲಿ ಸಾಯಿರಾಬಾನು ಎಂಬುವರನ್ನು ಮದುವೆಯಾಗಿದ್ದರು. 8 ತಿಂಗಳ ಬಳಿಕ 5 ಸಾವಿರ ಮೆಹರ್ ನೀಡಿ ತಲಾಕ್ ನೀಡಿದ್ದರು. ಕೆಲ ವರ್ಷಗಳ ಬಳಿಕ 2002ರ ಆ. 24ರಂದು ಸಾಯಿರಾಬಾನು ಜೀವನಾಂಶ ಕೋರಿ ಸಿವಿಲ್ ಪ್ರಕರಣ ದಾಖಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನಗರದ ಕೌಟುಂಬಿಕ ನ್ಯಾಯಾಲಯ 2011ರ ಆ.12ರಂದು ತಿಂಗಳಿಗೆ ಮೂರು ಸಾವಿರದಂತೆ ಜೀವನಾಂಶ ನೀಡಲು ರೆಹಮಾನ್‍ಗೆ ಆದೇಶಿಸಿತ್ತು. ಜೀವನಾಂಶ ನೀಡಲು ನಿರಾಕರಿಸಿದ್ದ ರೆಹಮಾನ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X