Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರಿ...

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರಿ ಹೂಡಿಕೆ: ಸಚಿವ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ20 Oct 2021 9:52 PM IST
share
ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರಿ ಹೂಡಿಕೆ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು, ಅ.20: ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ಹೂಡಿಕೆದಾರರು ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಬಂಡವಾಳ ಹೂಡಲಿದ್ದು, ಸೂಕ್ತ ಒಡಂಬಡಿಕೆಗಳನ್ನು ಮಾಡಿಕೊಳ್ಳಲು ನವಂಬರ್‍ನಲ್ಲಿ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎಂದು ಐಟಿ, ಬಿಟಿ, ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ರಾಜ್ಯ ಸರಕಾರದ ನಿಯೋಗದ ಭಾಗವಾಗಿ ತಾವು ಕೈಗೊಂಡಿದ್ದ ನಾಲ್ಕು ದಿನಗಳ ದುಬೈ ಪ್ರವಾಸವನ್ನು ಮುಗಿಸಿಕೊಂಡು ಬಂದ ಹಿನ್ನೆಲೆಯಲ್ಲಿ ಅವರು ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಹೂಡಿಕೆಗೆ ಕರ್ನಾಟಕವು ಪ್ರಶಸ್ತ ತಾಣವೆನ್ನುವುದು ಯುಎಇ, ಖತಾರ್, ಈಜಿಪ್ಟ್ ಮತ್ತು ಸೌದಿ ಅರೇಬಿಯಾದ ಉದ್ಯಮಿಗಳಿಗೆ ಮನದಟ್ಟಾಗಿದೆ. ಇದರ ಫಲವಾಗಿ ಬೆಂಗಳೂರಿನಲ್ಲಿ ಸದ್ಯದಲ್ಲೇ ಒಂದು ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ವಿಶ್ವ ದರ್ಜೆಯ `ಡಿಸೈನ್ ಡಿಸ್ಟ್ರಿಕ್ಟ್’ ಮೈದಾಳಲಿದೆ. ಇದು ಗುಣಮಟ್ಟದಲ್ಲಿ ದುಬೈ ಕೇಂದ್ರಕ್ಕಿಂತಲೂ ಉತ್ಕೃಷ್ಟವಾಗಿರಲಿದೆ ಎಂದು ಅವರು ಮಾಹಿತಿ ನೀಡಿದರು.

ಉದ್ದೇಶಿತ ಡಿಸೈನ್ ಡಿಸ್ಟ್ರಿಕ್ಟ್ 100ರಿಂದ 150 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿದೆ. ಇದರಲ್ಲಿ ಉದ್ಯಮರಂಗಕ್ಕೆ ಬೇಕಾಗುವ ಪ್ರತಿಯೊಂದೂ ವಸ್ತುವನ್ನೂ ಜಾಗತಿಕ ಮಟ್ಟದಲ್ಲಿ ವಿನ್ಯಾಸಗೊಳಿಸಲಾಗುವುದು. ಇದು ಔದ್ಯಮಿಕ ವಿನ್ಯಾಸ, ಕಲೆ ಮತ್ತು ಫ್ಯಾಷನ್ ಸಂಸ್ಕೃತಿಗಳ ಸಂಗಮವಾಗಲಿದ್ದು, ಇಲ್ಲಿ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಹಮ್ಮಿಕೊಳ್ಳಲಾಗುವುದು ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ವಾಟರ್ ಥೀಮ್ ಪಾರ್ಕ್ ಸ್ಥಾಪಿಸುವ ಸಂಬಂಧ ದುಬೈನ ಭೂ ಅಭಿವೃದ್ಧಿ ಸಚಿವರೊಂದಿಗೆ ನಡೆಸಿರುವ ಮಾತುಕತೆ ಕೂಡ ಫಲಪ್ರದವಾಗಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಎವೊಲೆನ್ಸ್ ಸಮೂಹ, ಕ್ರೆಸೆಂಟ್, ಡೆಕರ್ ಅಂಡ್ ಹಲಾಬಿ, ಆಸ್ಟರ್ ಡಿಎಂ ಹೆಲ್ತ್ ಕೇರ್ ಮತ್ತು ಮೈತ್ರಾ ಹೈಟೆಕ್ ಆಸ್ಪತ್ರೆಗಳ ಸಮೂಹಗಳು ರಾಜ್ಯದಲ್ಲಿ ಸದ್ಯದಲ್ಲೇ ಹೂಡಿಕೆ ಮಾಡಲಿವೆ. ಇದರಿಂದ ಸರಕು ಸಾಗಣೆ, ಆರೋಗ್ಯ, ಶಿಕ್ಷಣ, ಬಂದರು, ಯೋಗಕ್ಷೇಮ ಮುಂತಾದ ಕ್ಷೇತ್ರಗಳಲ್ಲಿ ಸಾವಿರಾರು ಸಂಖ್ಯೆಯ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ನುಡಿದರು.

ಅಲ್ಲಿನ ಇಸ್ಲಾಮಿಕ್ ಇನ್ವೆಸ್ಟ್ಮೆಂಟ್ ಗ್ರೂಪ್ ಸಮೂಹವು ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಹಂತಹಂತವಾಗಿ 3,500 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರ ಜತೆಗೆ ಈ ಸಮೂಹವು ಬೆಂಗಳೂರಿನಲ್ಲಿ ತನ್ನ ಕಚೇರಿಯನ್ನು ಸದ್ಯದಲ್ಲೇ ಆರಂಭಿಸಲಿದೆ. ಈ ಸಂಬಂಧದ ಒಡಂಬಡಿಕೆಗೆ ದುಬೈನಲ್ಲೇ ಅಂಕಿತ ಹಾಕಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಹೆಸರಾಂತ ಮೈತ್ರಾ ಆಸ್ಪತ್ರೆಗಳ ಸಮೂಹವು ಬೆಂಗಳೂರಿನಲ್ಲಿ ರೋಬೋಟಿಕ್ ತಂತ್ರಜ್ಞಾನವುಳ್ಳ ಹೈಟೆಕ್ ಆಸ್ಪತ್ರೆಯನ್ನು ಸ್ಥಾಪಿಸಲು ಮುಂದೆ ಬಂದಿದೆ. ಇದರಿಂದಾಗಿ ಅಮೆರಿಕ ಸೇರಿದಂತೆ ಹಲವು ವಿದೇಶಗಳ ಜನರು ಕೂಡ ಅತ್ಯುತ್ತಮ ಚಿಕಿತ್ಸೆಗಾಗಿ ನಮ್ಮ ರಾಜಧಾನಿಗೆ ಬರುವಂತಾಗುತ್ತದೆ.  ಇದರ ಜತೆಗೆ ಆಸ್ಟರ್ ಸಮೂಹವು ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಲ್ಲಿ ಅತ್ಯುತ್ತಮ ಆಸ್ಪತ್ರೆಗಳನ್ನು ಸ್ಥಾಪಿಸಲು ಒಲವು ತೋರಿದೆ ಎಂದು ಅವರು ಹೇಳಿದರು.

ಯುಎಇ ಉದ್ಯಮಿಗಳು ಭಾರತದಲ್ಲಿ ಸದ್ಯದಲ್ಲೇ 125 ಲಕ್ಷ ಕೋಟಿ ರೂಪಾಯಿ ಬಂಡವಾಳವನ್ನು ಹೂಡಲಿದ್ದಾರೆ. ಇದರಲ್ಲಿ ಕರ್ನಾಟಕಕ್ಕೆ ಸಿಂಹಪಾಲು ಹರಿದು ಬರಲಿದೆ. ಈ ಹೂಡಿಕೆದಾರರಲ್ಲಿ ಉದ್ಯಮಿಗಳ ಜೊತೆಗೆ ವೆಂಚರ್ ಕ್ಯಾಪಿಟಲಿಸ್ಟ್ಸ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಇದಷ್ಟೇ ಅಲ್ಲದೆ, ಶಿಕ್ಷಣ ರಂಗದಲ್ಲಿ ರಾಜ್ಯವು ಮಾಡಿರುವ ಸಾಧನೆಗಳಿಂದ ಹಲವು ವಿದೇಶ ವಿ.ವಿ.ಗಳು ಪ್ರಭಾವಿತವಾಗಿವೆ. ಹೀಗಾಗಿ ಅವು ವಿಶೇಷವಾಗಿ ಬೆಂಗಳೂರಿನಲ್ಲಿ ತಮ್ಮ ಕ್ಯಾಂಪಸ್ ತೆರೆಯಲು ಮುಂದೆ ಬಂದಿವೆ. ಈ ಸಂಬಂಧ ಶೀಘ್ರದಲ್ಲೇ ಒಡಂಬಡಿಕೆಗಳನ್ನು ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X