Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು; ಅಕ್ರಮ ಮರಳುಗಾರಿಕೆ: ಪೊಲೀಸರ...

ಮಂಗಳೂರು; ಅಕ್ರಮ ಮರಳುಗಾರಿಕೆ: ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನಿಸಿದ ದುಷ್ಕರ್ಮಿಗಳು!

ವಾರ್ತಾಭಾರತಿವಾರ್ತಾಭಾರತಿ20 Oct 2021 10:54 PM IST
share
ಮಂಗಳೂರು; ಅಕ್ರಮ ಮರಳುಗಾರಿಕೆ: ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನಿಸಿದ ದುಷ್ಕರ್ಮಿಗಳು!

ಮಂಗಳೂರು, ಅ.20: ಅಕ್ರಮ ಮರಳುಗಾರಿಕೆಯ ತಪಾಸಣೆಯ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನಿಸಿದ್ದಾರೆ ಎನ್ನಲಾದ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.

ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್, ಆಲ್ಟೋ ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಎರಡು ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ವಿವರ: ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಬಂದ ಮಾಹಿತಿಯ ಮೇರೆಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ನಸುಕಿನ ಜಾವ ಅಡ್ಯಾರ್ ಸಮೀಪದ ಕಾಲೇಜು ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ನಸುಕಿನ ಜಾವ 2:30ರ ಸುಮಾರಿಗೆ ಅಡ್ಯಾರ್ ಸಮೀಪದ ನೇತ್ರಾವತಿ ನದಿ ಹಾಗೂ ಮರಳು ಧಕ್ಕೆ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ-73 ಕಡೆಗೆ ಟಿಪ್ಪರ್ ಲಾರಿಯೊಂದು ಬರುತ್ತಿತ್ತು. ವಾಹನವನ್ನು ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ.

ಈ ವೇಳೆಗೆ ಟಿಪ್ಪರ್ ಲಾರಿಯ ಹಿಂಬದಿಯಿಂದ ಆಲ್ಟೋ ಕಾರೊಂದು ಬಂದಿದ್ದು, ಅದರಲ್ಲಿನ ದುಷ್ಕರ್ಮಿಗಳು ಟಿಪ್ಪರ್ ಲಾರಿಯನ್ನು ನಿಲ್ಲಿಸದಂತೆ ಟಿಪ್ಪರ್ ಲಾರಿ ಚಾಲಕನಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಪೊಲೀಸ್ ಅಧಿಕಾರಿಗಳ ಸೂಚನೆ ಧಿಕ್ಕರಿಸಿ, ಫರಂಗಿಪೇಟೆ ಕಡೆಯ ರಸ್ತೆಯಲ್ಲಿ ವಾಹನ ಚಲಾಯಿಸಿಕೊಂಡು ತೆರಳಿದರು. ಈ ವಾಹನಗಳನ್ನು ಬೆನ್ನಟ್ಟಿದರೂ ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಹೋಗಿ ತಪ್ಪಿಸಿಕೊಂಡಿದ್ದರು.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಸಹಕಾರದೊಂದಿಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಟಿಪ್ಪರ್ ಲಾರಿ, ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲೂ ಪ್ರಕರಣ: ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್‌ನಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ಫರಂಗಿಪೇಟೆಯತ್ತ ತೆರಳುತ್ತಿದ್ದ ವಾಹನಗಳು ಸಹಿತ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಬುಧವಾರ ನಸುಕಿನ ಜಾವ ಫರಂಗೀಪೇಟೆ ಚೆಕ್‌ಪೋಸ್ಟ್‌ನಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಟಿಪ್ಪರ್ ಲಾರಿಯೊಂದು ಬರುತ್ತಿದ್ದು, ಬ್ಯಾಟನ್ ಹಾಗೂ ಟಾರ್ಚ್‌ಲೈಟ್ ಸಹಾಯದಿಂದ ಟಿಪ್ಪರ್ ಲಾರಿ ನಿಲ್ಲಿಸಲು ಪೊಲೀಸರು ಸೂಚಿಸಿದ್ದಾರೆ. ಆದಾಗ್ಯೂ, ಟಿಪ್ಪರ್ ಲಾರಿ ಚಾಲಕನು ಲಾರಿಯನ್ನು ವೇಗವಾಗಿ ಚಲಾಯಿಸಿ, ಪೊಲೀಸರ ಮೇಲೆಯೇ ವಾಹನ ಹತ್ತಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವೇಳೆ ಪೊಲೀಸರು ತಪ್ಪಿಸಿಕೊಂಡು ಬದಿಗೆ ಸರಿದಿದ್ದಾರೆ. ನಂತರ ಲಾರಿಯನ್ನು ಚಾಲಕನು ಚೆಕ್‌ಪೋಸ್ಟ್‌ನ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದಿದ್ದಾನೆ. ಲಾರಿಯ ಹಿಂದೆಯೇ ಮಂಗಳೂರು ಕಡೆಯಿಂದ ಆಲ್ಟೋ ಕಾರೊಂದನ್ನು ಅದರ ಚಾಲಕನು ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಅದು ಕೂಡ ಪೊಲೀಸರ ಸೂಚನೆಗೆ ನಿಲ್ಲಿಸದೇ ಇದ್ದು, ಆ ಕಾರು ಚಾಲಕನ ಪಕ್ಕದಲ್ಲಿ ಕುಳಿತ್ತಿದ್ದ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರನ್ನು ನಿಲ್ಲಿಸದೇ ಹೋಗಿದ್ದಾರೆ. ದುಷ್ಕರ್ಮಿಗಳು ಪೊಲೀಸರು ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರ ಮೇಲೆ ಲಾರಿಯನ್ನು ಹತ್ತಿಸಿ ಕೊಲೆ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲದೇ ಇಲಾಖಾ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆಸಿ, ಜಖಂಗೊಳಿಸಿ 2000 ರೂ. ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X