Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೆಸೆಸ್ಸ್, ಬಿಜೆಪಿ ಮುಖಂಡ ಆರೋಪಿ...

ಆರೆಸೆಸ್ಸ್, ಬಿಜೆಪಿ ಮುಖಂಡ ಆರೋಪಿ ನಾರಾಯಣ ರೈ ಬಂಧಿಸದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ-ವಿಶ್ವನಾಥ

ಪುತ್ತೂರು; ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 Oct 2021 4:04 PM IST
share
ಆರೆಸೆಸ್ಸ್, ಬಿಜೆಪಿ ಮುಖಂಡ ಆರೋಪಿ ನಾರಾಯಣ ರೈ ಬಂಧಿಸದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ-ವಿಶ್ವನಾಥ

ಪುತ್ತೂರು: ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮತ್ತು ವೈದ್ಯಾಧಿಕಾರಿಗಳು ನೈಜತೆಯನ್ನು ಮರೆಮಾಚಿದ್ದು, ಪ್ರಕರಣದ ನೈಜ ಆರೋಪಿಯನ್ನು ಈತನಕ ಬಂಧಿಸಿಲ್ಲ. ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮೊಗೇರ ಸಂಘದ ರಾಜ್ಯಾಧ್ಯಕ್ಷ ವಿಶ್ವನಾಥ ಅವರು ಎಚ್ಚರಿಸಿದ್ದಾರೆ.

ಅವರು ಗುರುವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಕರಣಕ್ಕೆ ಸಂಬಂಧಿಸಿ ಈತನಕ ಯಾವುದೇ ಸ್ಪಂಧನೆ ದೊರಕಿಲ್ಲ. ಇಲ್ಲಿನ ಶಾಸಕರು, ಮಹಿಳಾ ಕಲ್ಯಾಣ ಇಲಾಖೆಗಳು, ಸ್ಥಳೀಯ ಪಂಚಾಯತ್‍ಗಳು ಕೂಡಾ ಈ ಬಗ್ಗೆ ಯಾವುದೇ ಪರಿಶೀಲನೆ ನಡೆಸಿಲ್ಲ. ಅಲ್ಲದೆ ಬಿಜೆಪಿ, ಕಾಂಗ್ರೆಸ್ ಯಾವ ಪಕ್ಷಗಳು ಮಾತನಾಡುತ್ತಿಲ್ಲ. ಪ್ರಕರಣದ ಆರೋಪಿಯಾಗಿರುವ ನಾರಾಯಣ ರೈ ಎಂಬಾತ ಆರೆಸೆಸ್ಸ್ ಹಾಗೂ ಬಿಜೆಪಿ ಮುಖಂಡರಾಗಿರುವ ಕಾರಣ ಪ್ರಕರಣವನ್ನು ತಿರುಚಿ  ಸಂತ್ರಸ್ತ ಬಾಲಕಿಯ ಸಹೋದರನನ್ನೇ ಆರೋಪಿ ಎಂದು ಬಿಂಬಿಸಿ ಬಂಧಿಸಲಾಗಿದೆ.

ಆರೆಸೆಸ್ಸ್ ಮತ್ತು ಬಿಜೆಪಿಗೆ ನೈಜ ಜನಪರವಾದ ಕಾಳಜಿಯಿದ್ದಲ್ಲಿ ತಕ್ಷಣವೇ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಸಂತ್ರಸ್ತೆಯ ಜಾತಿಯನ್ನು ನೋಡದೆ ಆಕೆಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ದಲಿತ ಸಂಘಟನೆಗಳ ಸಮನ್ವಯ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಮಿತ್ತಬೈಲು ಮಾತನಾಡಿ ಈ ಪ್ರಕರಣವು ಅತ್ಯಂತ ನಾಚಿಗೆಗೇಡಿನ ವಿಚಾರವಾಗಿದ್ದು, ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ದಲಿತರ ಮೇಲೆ ನಿರಂತರ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ. ಕೋಮು ವಿಚಾರಗಳಲ್ಲಿ ಪ್ರತಿಭಟನೆ, ಹೋರಾಟ ನಡೆಸುತ್ತಿರುವ ಪರಿವಾರ ಸಂಘಟನೆಗಳು ಈ ವಿಚಾರದಲ್ಲಿ ಮಾತ್ರ ಚಕಾರವೆತ್ತಿಲ್ಲ. ದಲಿತರನ್ನು ಓಟು ಬ್ಯಾಂಕ್‍ಗಳಾಗಿ ಕಾಣುತ್ತಿರುವವರು ಅವರ ನೋವಿಗೆ ಸ್ಪಂಧನೆ ನೀಡುತ್ತಿಲ್ಲ. ಈ ಪ್ರಕರಣದಲ್ಲಿ ನೈಜ ಆರೋಪಿಯನ್ನು ತಕ್ಷಣವೇ ಬಂಧಿಸಬೇಕು. ವಾರದ ಒಳಗಾಗಿ ಆರೋಪಿಯ ಬಂಧನವಾಗದಿ ದ್ದಲ್ಲಿ ಡಿವೈಎಸ್‍ಪಿ ಕಚೇರಿ ಮುಂಭಾಗದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಮೇಶ್ ಕೋಟ್ಯಾನ್, ಜಯಪ್ರಕಾಶ್ ಕನ್ಯಾಡಿ, ಅಶೋಕ್ ಕೊಂಚಾಡಿ, ಸೀತಾರಾಮ ಕೊಂಚಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X