Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಸೌಧದಿಂದ ತಳಹಂತದವರೆಗೂ ಬೆಟ್ಟಿಂಗ್,...

ವಿಧಾನಸೌಧದಿಂದ ತಳಹಂತದವರೆಗೂ ಬೆಟ್ಟಿಂಗ್, ಮಟ್ಕಾ ಕಬಂಧಬಾಹುಗಳು ಚಾಚಿವೆ: ಕುಮಾರಸ್ವಾಮಿ ಆರೋಪ

ವಾರ್ತಾಭಾರತಿವಾರ್ತಾಭಾರತಿ21 Oct 2021 8:54 PM IST
share
ವಿಧಾನಸೌಧದಿಂದ ತಳಹಂತದವರೆಗೂ ಬೆಟ್ಟಿಂಗ್, ಮಟ್ಕಾ ಕಬಂಧಬಾಹುಗಳು ಚಾಚಿವೆ: ಕುಮಾರಸ್ವಾಮಿ ಆರೋಪ

ಸಿಂದಗಿ, ಅ.21: ವಿಜಯಪುರ ಜಿಲ್ಲೆಯೂ ಸೇರಿ ರಾಜ್ಯದ ಅನೇಕ ಕಡೆ ಮಟ್ಕಾ, ಬೆಟ್ಟಿಂಗ್ ದಂಧೆಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಅನೇಕ ಬಡ ಕುಟುಂಬಗಳು ಬೀದಿ ಪಾಲಾಗಿವೆ. ಆದರೂ ರಾಜ್ಯದ ಬಿಜೆಪಿ ಸರಕಾರ ಚಕಾರ ಎತ್ತದೇ ಮೌನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಸಿಂದಗಿ ಕ್ಷೇತ್ರದ ಉಪ ಚುಣಾವಣೆ ನಿಮಿತ್ತ ಪ್ರಚಾರ ಕೈಗೊಂಡಿರುವ ಅವರು ಕ್ಷೇತ್ರದ ಯಂಕಂಚಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ಈ ದಂಧೆಯ ಕಬಂಧಬಾಹುಗಳು ವಿಧಾನಸೌಧದಿಂದ ತಳಹಂತದವರೆಗೂ ವ್ಯಾಪಕವಾಗಿ ಚಾಚಿಕೊಂಡಿದ್ದು, ಸರಕಾರ ಕೈಕಟ್ಟಿ ಕೂತಿದೆ. ಬಡಕುಟುಂಬಗಳು ಇಂಥ ದಂಧೆಗಳಿಗೆ ಸಿಕ್ಕಿ ಬಲಿಯಾಗುತ್ತಿವೆ. ಆ ಕುಟುಂಬಗಳ ಮಕ್ಕಳು ಹೆಚ್ಚು ಬಡ್ಡಿಗೆ ಸಾಲ ಮಾಡಿಕೊಂಡು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.

ವಿಜಯಪುರ ಜಿಲ್ಲೆಯಲ್ಲಿ ಈ ದಂಧೆ ಮಿತಿಮೀರಿ ನಡೆಯುತ್ತಿದೆ. ಹಣ ಕೊಟ್ಟು ಜಿಲ್ಲೆಗೆ ಪೋಸ್ಟಿಂಗ್ ಮಾಡಿಸಿಕೊಂಡು ಬಂದಿರುವ ಅಧಿಕಾರಿಗಳಿಗೆ ‘ಮಂತ್ಲಿ’ ತಪ್ಪದೇ ಹೋಗುತ್ತಿದೆ. ದೊಡ್ಡದೊಂದು ಗ್ಯಾಂಗ್ ಜಿಲ್ಲೆಯಲ್ಲಿ ಈ ದಂಧೆಗಳನ್ನು ವ್ಯಾಪಕ ಮಟ್ಟದಲ್ಲಿ ಆಪರೇಟ್ ಮಾಡುತ್ತಿದ್ದು, ಜನರೇ ಬೀದಿಬೀದಿಗಳಲ್ಲಿ ನಿಂತು ಮಾತನಾಡುತ್ತಾ ಈ ಪೀಡೆಯನ್ನು ಹತ್ತಿಕ್ಕದ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ಲಾಟರಿಗಳನ್ನು ನಿಷೇಧ ಮಾಡಿದ್ದೆ. ಇಂಥ ದಂಧೆಗಳಿಗೆ ಕಠಿಣವಾಗಿ ಕಡಿವಾಣ ಹಾಕಿದ್ದೆ. ಆದರೆ, ಈಗ ಅವೆಲ್ಲ ಬೇರೆ ಬೆರೆ ರೂಪಗಳಲ್ಲಿ ಅನಧಿಕೃತವಾಗಿ ಮತ್ತೆ ಕಾಣಿಸಿಕೊಂಡಿದ್ದು, ಪೊಲೀಸ್ ಇಲಾಖೆ ಕುಮ್ಮಕ್ಕು ನೀಡುತ್ತಿದೆ. ದೊಡ್ಡ ದೊಡ್ಡ ಹಂತದಲ್ಲಿ ಇದರಲ್ಲಿ ಶಾಮೀಲಾಗಿದ್ದಾರೆಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿರುವ, ಯುವಕರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿರುವ ಈ ದಂಧೆಗಳು ಸ್ವೇಚ್ಛಾಚಾರದಿಂದ ನಡೆಯುತ್ತಿವೆ. ಶ್ರಮಜೀವಿಗಳ ಹಣ ಹಾಳಾಗುತ್ತಿದೆ. ಸರಕಾರ ಅವುಗಳನ್ನು ಹತ್ತಿಕ್ಕುವ ಬದಲು ಸುಮ್ಮನಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.

ಬಿಜೆಪಿಯವರೆಂದೂ ಕಾಮನ್‍ಮ್ಯಾನ್‍ಗಳಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದೂ ಕಾಮನ್‍ಮ್ಯಾನ್ ಆಗಲು ಸಾಧ್ಯವೇ ಇಲ್ಲ. ಮುಖ್ಯಮಂತ್ರಿಗಳು ಸಂಚಾರ ಮಾಡುವ ರಸ್ತೆಗಳಲ್ಲಿ ಹಂಪ್ಸ್‍ಗಳನ್ನು ತೆಗೆಯಲಾಗಿದೆ, ರಾತ್ರಿ ಹೊತ್ತು ಅವರಿಗೆ ಎಸ್ಕಾರ್ಟ್ ಕೊಡಲಾಗುತ್ತಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಬಗ್ಗೆ ನನಗೂ ಮಾಹಿತಿ ಬಂದಿದೆ ಎಂದರು.

ಬಿಜೆಪಿ ಅವರು ಹಿಂದೆ ಐದು ವರ್ಷ ಆಡಳಿತ ನಡೆಸಿದ್ದನ್ನು ನೋಡಿದ್ದೇವೆ. ನನ್ನ ನೇತೃತ್ವದ ಸಮ್ಮಿಶ್ರ ಸರಕಾರವನ್ನು ಪತನ ಮಾಡಿ ಸರಕಾರ ಮಾಡಿ ಈಗ ಆಡಳಿತ ನಡೆಸುತ್ತಿರುವುದನ್ನು ನೋಡಿದ್ದೇವೆ. ಅವರೆಂದು ಜನಸಾಮಾನ್ಯರ ಪರ ಅಲ್ಲ. ತೈಲ ಬೆಲೆಗಳನ್ನು, ಅಗತ್ಯ ವಸ್ತುಗಳ ಬೆಲೆಗಳನ್ನು ಏರಲು ಬಿಟ್ಟು ಜನಸಾಮಾನ್ಯರ ಜೀವನವನ್ನು ನರಕ ಮಾಡಿರುವ ಇವರು ಕಾಮನ್ ಮ್ಯಾನ್‍ಗಳಾ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಆರ್ಥಿಕ ತೊಂದರೆ ಇದೆ ಎನ್ನುವ ನೆಪವೊಡ್ಡಿ ಸರಕಾರ ನೀರಾವರಿ ಇಲಾಖೆಯ ಎಲ್ಲ ಕಾಮಗಾರಿಗಳನ್ನು ಸ್ಥಗಿತ ಮಾಡಿರುವ ಮಾಹಿತಿಯೂ ಬಂದಿದೆ. ಈ ಬಗ್ಗೆ ಪತ್ರಿಕೆಯಲ್ಲಿ ವರದಿ ಬಂದಿದೆ. ಇನ್ನೂ 6000 ಕೋಟಿ ರೂ.ಗಳಷ್ಟು ಹಣವನ್ನೂ ಬಿಡುಗಡೆ ಮಾಡಿಲ್ಲ ಅನ್ನುವ ಮಾಹಿತಿ ಇದೆ. ಇವರಿಗೆ ಭ್ರಷ್ಟಾಚಾರ ಮಾಡಲು ಹಣವಿದೆ, ಯೋಜನೆಗಳಿಗೆ ಕೊಡಲು ಇಲ್ಲ ಎಂದರೆ ಹೇಗೆ ಎಂದು ಅವರು ಪ್ರಶ್ನಿಸಿದರು.

ಸರ್ಟಿಫಿಕೇಟ್ ಕೊಡೋಕೆ ಸಿದ್ದರಾಮಯ್ಯ ಯಾರು?: ಜೆಡಿಎಸ್ ಸೆಕ್ಯೂಲರ್ ಅಲ್ಲ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಸೆಕ್ಯೂಲರ್ ಪಕ್ಷ ಹೌದೋ ಅಲ್ಲವೋ ಎಂಬ ಬಗ್ಗೆ ಸರ್ಟಿಫಿಕೇಟ್ ಕೊಡಲು ಸಿದ್ದರಾಮಯ್ಯ ಯಾರು? ನಮ್ಮದು ಎಲ್ಲರನ್ನೂ ಒಳಗೊಂಡ, ಎಲ್ಲರನ್ನೂ ಪ್ರತಿನಿಧಿಸುವ ಪಕ್ಷ ಎಂದರು.

ಸಿದ್ದರಾಮಯ್ಯ ಅವರಿಂದ ನಾವು ಹಿತೋಪದೇಶ ಪಡೆಯುವ ಅಗತ್ಯವಿಲ್ಲ. ಸಿದ್ದರಾಮಯ್ಯ ಬಂದಿದ್ದು ಎಲ್ಲಿಂದ? ಇದೇ ಪಕ್ಷದಿಂದ. ಇವತ್ತು ಒಂಭತ್ತು ಜನ ಅಲ್ಪಸಂಖ್ಯಾತ ನಾಯಕರಾಗಿ ಹೊರಹೊಮ್ಮಿದ್ದರೆ ಅದು ಪಕ್ಷ ಮತ್ತು ದೇವೇಗೌಡರ ಕೊಡುಗೆ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X