Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಪ.ಜಾತಿ,ಪ.ಪಂಗಡ ಯೋಜನೆ ಶೇ.100ರಷ್ಟು...

​ಪ.ಜಾತಿ,ಪ.ಪಂಗಡ ಯೋಜನೆ ಶೇ.100ರಷ್ಟು ಅನುಷ್ಠಾನಗೊಳಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಕರೆ

ವಾರ್ತಾಭಾರತಿವಾರ್ತಾಭಾರತಿ21 Oct 2021 9:21 PM IST
share
​ಪ.ಜಾತಿ,ಪ.ಪಂಗಡ ಯೋಜನೆ ಶೇ.100ರಷ್ಟು ಅನುಷ್ಠಾನಗೊಳಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಕರೆ

ಉಡುಪಿ, ಅ.21: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಅನುದಾನವನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಮಣಿಪಾಲದ ತಮ್ಮ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿವಿಧ ಇಲಾಖೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪ.ಜಾತಿ ಮತ್ತು ಪ.ಪಂಗಡಗಳ ಜನರ ಸಮಗ್ರ ಅಭಿವೃದ್ಧಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ವಿವಿಧ ಫಲಾನುಭವಿಗಳಿಗೆ ತಲುಪಿಸುವುದರೊಂದಿಗೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜನ ಸಾಮಾನ್ಯರಿಗೆ ಸರಳ ವಾಗಿ ಅರ್ಥವಾಗುವ ರೀತಿಯಲ್ಲಿ ಹೆಚ್ಚು ಪ್ರಚಾರಪಡಿಸುವುದರ ಜೊತೆಗೆ ಸಹಾಯವಾಣಿಗಳನ್ನು ತೆರೆಯುವ ಮೂಲಕ ಯೋಜನೆಗಳ ಇತರೆ ಮಾಹಿತಿ ಯನ್ನು ನೀಡಬೇಕು ಎಂದ ಅವರು, ಎಲ್ಲಾ ಇಲಾಖೆಗಳ ಯೋಜನಾ ಕಾರ್ಯಕ್ರಮಗಳ ಮಾಹಿತಿಯ ಮಡಿಕೆ ಪತ್ರಗಳನ್ನು ತಯಾರಿಸಿ ಗ್ರಾಪಂ ಸದಸ್ಯರು ಸೇರಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು ಎಂದರು.

ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿ ಸುವಾಗ ಅಗತ್ಯವಿರುವ ದಾಖಲೆಗಳನ್ನು ಮಾತ್ರ ಪಡೆದು ಅರ್ಹ ಫಲಾನುಭವಿ ಗಳ ಆಯ್ಕೆ ಮಾಡಬೇಕು. ಈ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ಸಮಸ್ಯೆಗಳು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಉದ್ಭವಿಸಿದಾಗ ಅವುಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಶೀಘ್ರದಲ್ಲಿಯೇ ಅವುಗಳನ್ನು ಬಗೆಹರಿಸಿ ಅನುಷ್ಟಾನಗೊಳಿಸಬೇಕು ಎಂದರು.

ಪ್ರತೀ ಇಲಾಖೆಯಲ್ಲೂ ಯೋಜನೆಗಳ ಅನುಷ್ಠಾನಕ್ಕಾಗಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಬಗೆಹರಿಸಲು ನೊಡೆಲ್ ಅಧಿಕಾರಿಗಳನ್ನು ನೇಮಕ ಮಾಡುವುದರೊಂದಿಗೆ, ಬಂದಂತಹ ಅಹವಾಲುಗಳನ್ನು ಆಗ್ಗಿಂದಾಗ್ಗೆ ಇತ್ಯರ್ಥ ಪಡಿಸಬೇಕು ಎಂದು ಅವರು ಸೂಚನೆಗಳನ್ನು ನೀಡಿದರು.

ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಬೇಕಾಗಿದೆ. ಆಯ್ದ ಹಾಸ್ಟೆಲ್‌ಗಳಿಗೆ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿ ಗಳೊಂದಿಗೆ ಸಮಾಲೋಚನೆ ನಡೆಸುವುದರೊಂದಿಗೆ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಒತ್ತು ನೀಡುವಂತೆ ಉತ್ತೇಜಿಸಬೇಕು ಎಂದರು.

ಪ.ಜಾತಿ/ಪ.ಪಂಗಡದವರು ವಾಸಿಸುವ ಕಾಲೋನಿಗಳಲ್ಲಿ ಅಗತ್ಯ ಮೂಲ ಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದ ಅವರು ಗ್ರಾ.ಪಂ ಮಟ್ಟದಲ್ಲೂ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಾಮಾನ್ಯ ಯೋಜನೆಗಳಲ್ಲಿ ಪ.ಜಾತಿ/ಪ.ಪಂಗಡದ ಜನಸಂಖ್ಯೆಯಲ್ಲಿ ಬಾಕಿ ಉಳಿದ ಫಲಾನುಭವಿಗಳ ಮಾಹಿತಿಯನ್ನು ಪಡೆದು ಅರ್ಹತೆ ಹೊಂದಿರುವ ಪ್ರತಿಯೊಬ್ಬರಿಗೂ ಯೋಜನೆಗಳ ಸೌಲಭ್ಯವನ್ನು ತಲುಪಿಸುವ ಕಾರ್ಯ ಮಾಡಬೇಕು ಎಂದರು.

ಕಾಲೋನಿಗಳ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಗುಣಮಟ್ಟ ದಲ್ಲಿ ಆದ್ಯತೆಯ ಮೇರೆಗೆ ಕೈಗೊಂಡು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದ ಡಿಸಿ, ಗಂಗಾಕಲ್ಯಾಣ ಯೋಜನೆಯ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುದ್ದೀಕರಣಗೊಳಿಸುವ ಕಾರ್ಯ ಸಹ ನಿಗದಿತ ಕಾಲಾವಧಿಯಲ್ಲಿ ಪೂರ್ಣ ಗೊಳಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಸದಾಶಿವ ಪ್ರಭು, ಜಿಪಂ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ಜಿಲ್ಲಾ ಮಟ್ಟದ ಅನುಷ್ಟಾನಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X