Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್...

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ: ಸಿಎಂ ಬಸವರಾಜ ಬೊಮ್ಮಾಯಿ ಆರೋಪ

ವಾರ್ತಾಭಾರತಿವಾರ್ತಾಭಾರತಿ21 Oct 2021 9:40 PM IST
share
ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ: ಸಿಎಂ ಬಸವರಾಜ ಬೊಮ್ಮಾಯಿ ಆರೋಪ

ಹಾನಗಲ್, ಅ.21: ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಮನುಷ್ಯ-ಮನಸ್ಸುಗಳ ಮಧ್ಯ ಅಶಾಂತಿ ಸೃಷ್ಟಿ ಮಾಡಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. 

ಇಂದು ಹಾನಗಲ್ ವಿಧಾನಸಭಾ ಕ್ಷೇತ್ರದ ಮಕರವಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರಗಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಜಾತಿ-ಜಾತಿಗಳ ನಡುವೆ ದ್ವೇಷವನ್ನು ಬಿತ್ತಿ, ಜಾತಿಗಳಲ್ಲಿ ನೂರಾರು ಉಪಜಾತಿಗಳನ್ನು ಸೃಷ್ಟಿ ಮಾಡಿ ಸಮಾಜದಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಿದ್ದಾರೆ. ಮನುಷ್ಯರು ಮನಸುಗಳ ಮಧ್ಯೆ ಗೋಡೆಯನ್ನು ಸೃಷ್ಟಿಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆರೋಪ ಮಾಡಿದರು. 

ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಹಾನಗಲ್ ಅಭಿವೃದ್ಧಿಗೆ ಕೊಡುಗೆ ಶೂನ್ಯ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿ ಇದ್ದಾಗ, ನಾನು ಜಲಸಂಪನ್ಮೂಲ ಸಚಿವ ಇದ್ದಾಗ ಮತ್ತು ಉದಾಸಿ ಅವರು ಲೋಕೋಪಯೋಗಿ ಇಲಾಖೆಯ ಸಚಿವರಾಗಿದ್ದಾಗ ತಿಳವಳ್ಳಿ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದೇವೆ. ನಂತರದಲ್ಲಿ ಬಂದ ಕಾಂಗ್ರೆಸ್ ಸರಕಾರ ಯಾವುದೇ ಕೆಲಸವನ್ನು ಮಾಡಲಿಲ್ಲ ಈ ಕ್ಷೇತ್ರಕ್ಕೆ ಕನಿಷ್ಠ ಪಕ್ಷ ಒಂದು ಸಣ್ಣ ಶಾಲೆಯನ್ನು ಸಹ ಅವರಿಂದ ಕಟ್ಟಲಾಗಿಲ್ಲ. ಸುಮಾರು 513 ಕೋಟಿ ಮೊತ್ತದ ಕಾಮಗಾರಿಗೆ ಅಡಿಗಲ್ ಹಾಕಲು ಕಾಂಗ್ರೆಸ್‍ನವರು ಮುಂದಾಗಿದ್ದರು, ಆ ಅನುದಾನದಲ್ಲಿ ರೂ.425 ಕೋಟಿ ಸಿಎಂ ಉದಾಸಿ ಅನುಮೋದನೆ ನೀಡಿದ್ದ ಅನುದಾನವಾಗಿತ್ತು. ಅಧಿಕಾರದಲ್ಲಿದ್ದಾಗ ಇಲ್ಲಿನ ಜನರನ್ನು ಇಲ್ಲಿನ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಿದ ಕಾಂಗ್ರೆಸ್ ಪಕ್ಷ ಚಿನ್ನದ ತಟ್ಟೆಯಲ್ಲಿ ನಿಮಗೆ ಅಭಿವೃದ್ಧಿ ತೊರಿಸುವ ಸುಳ್ಳು ಆಶ್ವಾಸನೆ ಹೊತ್ತು ತಂದಿದ್ದಾರೆ.

ಎಲ್ಲೋ ಮೂಲೆಯಲ್ಲಿ ಕಾಂಗ್ರೆಸ್ ಕಿಟ್ ವಿತರಿಸಿದೆ: ಎಲ್ಲೋ ಮೂಲೆಯಲ್ಲಿ ಕಿಟ್ ವಿತರಿಸಿ ಕೋವಿಡ್ ಸಂದರ್ಭದಲ್ಲಿ ಅದ್ಭುತವಾದ ಕೆಲಸವನ್ನು ಮಾಡಿದ್ದೇವೆ ಎಂದು ಬಿಂಬಿಸುತ್ತಿದ್ದಾರೆ. ಕೋವಿಡ್ ಸಂಕಷ್ಟವನ್ನು ಸನ್ಮಾನ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮರ್ಥವಾಗಿ ಎದುರಿಸಿದ್ದೇವೆ. ಸಿಎಂ ಉದಾಸಿ ಅವರ ನೇತೃತ್ವದಲ್ಲಿ 15 ಸಾವಿರಕ್ಕೂ ಹೆಚ್ಚು ಕೀಟಗಳನ್ನು ಹಾನಗಲ್ ತಾಲೂಕಿನಲ್ಲಿ ವಿತರಿಸಿದ್ದೇವೆ ಎಂದು ಅವರು ಹೇಳಿದರು.

ಹಾನಗಲ್‍ನಲ್ಲಿ ಶೇಕಡ 80ರಷ್ಟು ಮೊದಲ ಹಂತದ ಲಸಿಕೆಯನ್ನು ನೀಡಲಾಗಿದೆ. ಕೋವಿಡ್ ಸಮಯದಲ್ಲಿ ಉಚಿತವಾಗಿ ಪಡಿತರ ಹಾಗೂ ದೇಶದ ಜನತೆಗೆ ಉಚಿತವಾಗಿ ವ್ಯಾಕ್ಸಿನೇಷನ್ ನೀಡಿದ್ದು ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಸರಕಾರ. ಎಂದು ಅವರು ಹೇಳಿದರು. 

ನಿಮ್ಮ ಮತಕ್ಕೆ ಗೌರವವಿದೆ: ನೀವು ನೀಡುವ ಪ್ರತಿಯೊಂದು ಮತಕ್ಕೂ ಗೌರವವಿದೆ, ಅದಕ್ಕೆ ಬೆಲೆ ಬರಬೇಕು. ನಿಮ್ಮ ಮತದ ಗೌರವವನ್ನು ಭಾರತೀಯ ಜನತಾ ಪಕ್ಷ ಕಾಪಾಡುತ್ತದೆ. ಶಿವರಾಜ್ ಸಜ್ಜನ್ ಅವರಿಗೆ ಹಾನಗಲ್ ಅಭಿವೃದ್ಧಿಗೆ ಇಲ್ಲಿನ ಜನಸಾಮಾನ್ಯರ ಸೇವೆ ಮಾಡಲು ಅವಕಾಶ ನೀಡಿ ಎಂದು ಹಾನಗಲ್ ಕ್ಷೇತ್ರದ ಜನತೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X