Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಾಟಾ ಸಹಯೋಗದಲ್ಲಿ 150 ಐಟಿಐಗಳು 4,636...

ಟಾಟಾ ಸಹಯೋಗದಲ್ಲಿ 150 ಐಟಿಐಗಳು 4,636 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ: ಡಾ.ಸಿ.ಎನ್.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ21 Oct 2021 11:28 PM IST
share
ಟಾಟಾ ಸಹಯೋಗದಲ್ಲಿ 150 ಐಟಿಐಗಳು 4,636 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು, ಅ.21: ‘ಉದ್ಯೋಗ’ ಕಾರ್ಯಕ್ರಮದಡಿ ಟಾಟಾ ಕಂಪನಿಯ ಸಹಯೋಗದಲ್ಲಿ 4,636 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗಿರುವ 150 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ) ಇನ್ನೆರಡು ವಾರದಲ್ಲಿ ಉದ್ಘಾಟನೆಯಾಗಲಿದ್ದು, ಆಧುನಿಕ ಕೋರ್ಸ್‍ಗಳನ್ನು ಒಳಗೊಂಡ ತರಬೇತಿಯು ಈ ಕೇಂದ್ರಗಳಲ್ಲಿ ನ.1ರಿಂದ ಆರಂಭವಾಗಲಿದೆ ಎಂದು ಕೌಶಾಲಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಗುರುವಾರ ನಗರದ ಪೀಣ್ಯದಲ್ಲಿ ಮೇಲ್ದರ್ಜೆಗೇರಿಸಿರುವ ಸರಕಾರಿ ಐಟಿಐ ಕೇಂದ್ರವನ್ನು ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹೊಸ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.

ಉದ್ಯಮಗಳ ಈಗಿನ ಬೇಡಿಕೆಗೆ ತಕ್ಕಂತೆ ಹೊಸ ಪಠ್ಯಕ್ರಮ ರೂಪಿಸಲಾಗಿದೆ. ಅಡ್ವಾನ್ಸ್ಡ್ ಸಿ.ಎನ್.ಸಿ. ಮಷೀನಿಂಗ್, ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವಚ್ರ್ಯುಯಲ್ ವೆರಿಫಿಕೇಷನ್, ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್, ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್, ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್ ಮತ್ತು ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ ಇವುಗಳಲ್ಲಿ ಸೇರಿವೆ ಎಂದು ಅವರು ವಿವರಿಸಿದರು.

ಈ ಸಂಸ್ಥೆಗಳಲ್ಲಿ ಜೆಟಿಒಗಳಿಗೆ ಹೊಸ ತಾಂತ್ರಿಕತೆಗಳಲ್ಲಿ ತರಬೇತಿ ನೀಡಲಾಗುತ್ತದೆ. ಇದರಿಂದ ಪ್ರತಿವರ್ಷ 20,000 ಜೆಟಿಒಗಳಿಗೆ ಅನುಕೂಲವಾಗುತ್ತದೆ. ಇದರ ಜೊತೆಗೆ ಐಟಿಐ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಸುಮಾರು 1 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಪ್ರಯೋಜನವಾಗುತ್ತದೆ ಎಂದು ಅವರು ಹೇಳಿದರು.

ಟಾಟಾ ಕಂಪನಿಯೊಂದಿಗೆ ದೀರ್ಘಾವಧಿ ಸಹಭಾಗಿತ್ವ ಹೊಂದುವ ಉದ್ದೇಶವಿದ್ದು ಮೊದಲ ಎರಡು ವರ್ಷಗಳಿಗಾಗಿ 300 ಹಾಗೂ ಮೂರನೇ ವರ್ಷಕ್ಕಾಗಿ 150 ವಿಷಯ ಪರಿಣತರನ್ನು ನಿಯೋಜಿಸಲಾಗುತ್ತದೆ. ಇದರಿಂದ ಜೆಟಿಒಗಳಿಗೆ ಹಾಗೂ ಐಟಿಐ ಬೋಧಕ ಸಿಬ್ಬಂದಿಗೆ ಹೊಸ ರೀತಿಯ ತರಬೇತಿಗಳ ಬಗ್ಗೆ ಮಾರ್ಗದರ್ಶನ ನೀಡಲು ಸಾಧ್ಯವಾಗುತ್ತದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಯಂತ್ರೋಪಕರಣಗಳನ್ನು ಸುಸಜ್ಜಿತ ಸ್ಥಿತಿಯಲ್ಲಿ ಇರಿಸುವುದಕ್ಕಾಗಿ 5 ವರ್ಷಗಳ ನಿರ್ವಹಣಾ ಒಪ್ಪಂದವನ್ನು ಇದು ಒಳಗೊಂಡಿದೆ. ಅಗತ್ಯಬಿದ್ದರೆ ಇದನ್ನು ಇನ್ನೂ 5 ವರ್ಷಗಳಿಗೆ ಹೆಚ್ಚಿಸಲಾಗುತ್ತದೆ. ಹಾಗೆಯೇ ಈ 150 ಸಂಸ್ಥೆಗಳಿಗೆ ಅಳವಡಿಸಿರುವ 11 ದೀರ್ಘಾವಧಿ ತರಬೇತಿ ಹಾಗೂ 23 ಅಲ್ಪಾವಧಿ ತರಬೇತಿ ಕೋರ್ಸ್‍ಗಳನ್ನು ಕ್ರಮೇಣ ಎಲ್ಲ ಐಟಿಐಗಳಿಗೆ ವಿಸ್ತರಿಸಲಾಗುತ್ತದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.
ಸಚಿವರು ಸಂಸ್ಥೆಯಲ್ಲಿ ಹೊಸದಾಗಿ ಸ್ಥಾಪಿಸಿರುವ ಪ್ರಯೋಗಾಲಯವನ್ನು ವೀಕ್ಷಿಸಿದರು. ಎಲೆಕ್ಟ್ರಿಕ್ ವಾಹನವನ್ನು ನೋಡಿದ್ದಷ್ಟೇ ಅಲ್ಲದೆ ಅದರ ಚಾಲನೆಯನ್ನೂ ಮಾಡಿದರು. ಆಧುನಿಕ ವೆಲ್ಡಿಂಗ್ ವಿಧಾನದ ಬಗ್ಗೆ ಖುದ್ದು ವೀಕ್ಷಿಸಿ ಮಾಹಿತಿ ಪಡೆದರು. ಇದೇ ವೇಳೆ, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳ ಜತೆ ಸಂವಾದ ನಡೆಸಿದರು.

ಒಟ್ಟು 4,636 ಕೋಟಿ ಯೋಜನಾ ವೆಚ್ಚದ ಪೈಕಿ ರಾಜ್ಯ ಸರಕಾರ ಶೇ.12ರಷ್ಟನ್ನು ಹಾಗೂ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಶೇ.88ರಷ್ಟನ್ನು ಭರಿಸುತ್ತಿವೆ. ಜೊತೆಗೆ ರಾಜ್ಯ ಸರಕಾರವು ಭೌತಿಕ ಮೂಲಸೌಕರ್ಯಗಳಿಗಾಗಿ 220 ಕೋಟಿ ರೂ.ವೆಚ್ಚ ಮಾಡುತ್ತಿದೆ. ತಾಂತ್ರಿಕ ಉನ್ನತೀಕರಣಕ್ಕಾಗಿ ಆಧುನಿಕ ಸಿ.ಎನ್.ಸಿ. ಯಂತ್ರ, ಲೇಸರ್ ಕಟಿಂಗ್ ಯಂತ್ರ, ಆಡಿಟೀವ್ ಮ್ಯಾನುಫ್ಯಾಕ್ಟರಿಂಗ್, 3ಡಿ ಪ್ರಿಂಟಿಂಗ್ ಮಷೀನ್, ಕೈಗಾರಿಕಾ ರೊಬೋಟ್, ವಿನೂತನ ತಂತ್ರಾಂಶಗಳು ಐಟಿಐಗಳಿಗೆ ಸೇರ್ಪಡೆಯಾಗಲಿವೆ. ಈ ಸಂದರ್ಭದಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಹರೀಶ್ ಕುಮಾರ್ ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X