Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಅವರ ಭಾಗ್ಯದ ಯೋಜನೆಗಳು...

ಸಿದ್ದರಾಮಯ್ಯ ಅವರ ಭಾಗ್ಯದ ಯೋಜನೆಗಳು ಮಧ್ಯವರ್ತಿಗಳ ಪಾಲು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ22 Oct 2021 6:23 PM IST
share
ಸಿದ್ದರಾಮಯ್ಯ ಅವರ ಭಾಗ್ಯದ ಯೋಜನೆಗಳು ಮಧ್ಯವರ್ತಿಗಳ ಪಾಲು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾನಗಲ್, ಅ.22: ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಘೋಷಣೆ ಮಾಡಿದ ಭಾಗ್ಯಗಳು ಜನರ ಮನೆ ಬಾಗಿಲಿಗೆ ತಲುಪದೇ ಮಧ್ಯವರ್ತಿಗಳ ಪಾಲಾದವು. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ಪ್ರತಿ ಪಕ್ಷದಲ್ಲಿ ಕೂರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಶುಕ್ರವಾರ ಹಾನಗಲ್ ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಜಾರಿ ಮಾಡಿದ ನಂತರವೇ ಜನ ಅಕ್ಕಿ ನೋಡಿದ್ದಾರೆ ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾರೆ. ಈ ಅಕ್ಕಿಯಲ್ಲಿ ಕೇಂದ್ರದ ಪಾಲು ಹೆಚ್ಚು. ರಾಜ್ಯ ಸರಕಾರದ ಪಾಲು ಪ್ರತಿ ಕೆಜಿಗೆ ಕೇವಲ 3 ರೂಪಾಯಿ. ಆದರೆ ಅನ್ನಭಾಗ್ಯ ಯೋಜನೆ ತಮ್ಮದೆಂದು ಹೇಳಿಕೊಳ್ಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರಕಾರ ರೈತರ ಪರವಾಗಿರಲಿಲ್ಲ, ರೈತರನ್ನು ಉದ್ಧಾರ ಮಾಡುವ ಮನಸ್ಥಿತಿ ಅವರಿಗಿಲ್ಲ. ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಕೆ ಮಾಡಿಕೊಳ್ಳುವುದೇ ಕಾಂಗ್ರೆಸ್ ಕೆಲಸ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ನವರು ಈ ಹಿಂದೆ ಗೆದ್ದಾಗಲೆಲ್ಲ ಸಂಘಟನೆಯಿಂದ ಗೆದ್ದಿದ್ದೇವೆ ಎಂದು ಬೀಗುತ್ತಿದ್ದರು. ಅದೇ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಜಯಗಳಿಸಿದರೆ ಅದು ಹಣದಿಂದ ಎಂದು ಡಿ.ಕೆ.ಶಿವಕುಮಾರ್ ಆರೋಪಿಸುತ್ತಾರೆ. ಅವರು ಹತಾಶರಾಗಿದ್ದು, ಸೋಲಿನ ಭಯದಿಂದ ಈ ತರಹದ ಮಾತುಗಳನ್ನು ಆಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಹಾನಗಲ್ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಜನಶಕ್ತಿ ನಮ್ಮೊಂದಿಗಿದೆ ಬಿಜೆಪಿ ಅಭ್ಯರ್ಥಿಗೆ ಗೆಲುವು ಖಚಿತ ಇದೇ ಕಾರಣಕ್ಕಾಗಿ ಗಾಬರಿಯಿಂದ ಕಾಂಗ್ರೆಸ್ ಪಕ್ಷದವರು ಮಾತನಾಡುತ್ತಿದ್ದಾರೆ. ವಿರೋಧ ಪಕ್ಷದ ಎಲ್ಲ ಟೀಕೆ-ಟಿಪ್ಪಣಿಗಳಿಗೆ ನಾನು ಉತ್ತರಕೊಡಲು  ಬಯಸುವುದಿಲ್ಲ, ನಮ್ಮ ಮೂಲಮಂತ್ರ ಅಭಿವೃದ್ಧಿಯಾಗಿದ್ದು ಕಾಂಗ್ರೆಸ್ ಪಕ್ಷದವರು ತಮಗೆ ಬೇಕಾದ ಅಜೆಂಡಾ ಇಟ್ಟುಕೊಳ್ಳಲಿ. ಆದರೆ ಬಿಜೆಪಿಯ ಏಕೈಕ ಅಜೆಂಡಾ ಅಭಿವೃದ್ಧಿ. ಕಾಂಗ್ರೆಸ್ ಪಕ್ಷ ಮಾಡುವಂತಹ ಎಲ್ಲ ಟೀಕೆಗಳಿಗೆ ಹಾನಗಲ್ ಕ್ಷೇತ್ರದ ಮತದಾರರು ಉತ್ತರ ಕೊಡಲಿದ್ದಾರೆ ಎಂದು ಅವರು ನುಡಿದರು.

ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ಯಡಿಯೂರಪ್ಪ ಕಾಲಿಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ. ಬಿಜೆಪಿ ಸರಕಾರದ ಅವಧಿಯಲ್ಲಿ ಯಡಿಯೂರಪ್ಪ ಪರಿಚಯಿಸಿದ ಎಲ್ಲ ಯೋಜನೆಗಳ ಹಿಂದೆ ಬಲವಾದ ಸಾಮಾಜಿಕ ಅಭಿವೃದ್ಧಿಗೆ ಕಳಕಳಿ ಮತ್ತು ಕಾಳಜಿ ಇತ್ತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ಸರಕಾರವಿದ್ದಾಗ ಜನಪರ ಕಾಳಜಿ ಹೆಚ್ಚಿತ್ತು, ಜನರಿಗೆ ಅಗತ್ಯದ ಯೋಜನೆಗಳು ಸರಕಾರ ರೂಪಿಸಿತು. ಅಲ್ಲದೆ ಮನೆಗೆ ತಲುಪುವಂತೆ ನೋಡಿಕೊಂಡಿತು. ಹೆಣ್ಣು ಮಕ್ಕಳು ಹುಟ್ಟಿದರೆ ಶಾಪ ಅನ್ನುವಂತಹ ಕಾಲದಲ್ಲಿ ಯಡಿಯೂರಪ್ಪ ಭಾಗ್ಯಲಕ್ಷ್ಮಿ ಯೋಜನೆಯನ್ನು ಪರಿಚಯಿಸಿದರು. ಇಡೀ ಭಾರತದಲ್ಲಿಯೇ ಮೊಟ್ಟಮೊದಲ ಬಾರಿಗೆ ಯೋಜನೆಯನ್ನು ಪರಿಚಯಿಸಿದ ಹೆಮ್ಮೆ ಬಿಜೆಪಿ ಸರಕಾರದ್ದು ಎಂದು ಅವರು ಹೇಳಿದರು.

ನಮ್ಮ ರೈತರು ಅಭಿವೃದ್ಧಿ ಹೊಂದಬೇಕು ಹಣ ಗಳಿಸಬೇಕು ಕಾಲಿನಲ್ಲಿ ಜೂರ್ಕಿ ಚಪ್ಪಲಿ, ರೇಷ್ಮೆ ಜುಬ್ಬಾ ಹಾಕಬೇಕು,ರೇಷ್ಮೆ ರುಮಾಲು ಹಾಕಬೇಕು, ಕೈಯಲ್ಲಿ ಬಾರಕೋಲು ಹಿಡಿದುಕೊಳ್ಳಬೇಕು ಇದು ಬಿಜೆಪಿ ಅಭಿವೃದ್ಧಿಯ ಕನಸು. ರೈತ ಜೀವನ ಸುಧಾರಿಸುವುದೇ ನಮ್ಮ ಉದ್ದೇಶ, ರೈತನ ಬಾಳು ಹಸನಾಗಬೇಕು ಎಂದು ಮುಖ್ಯಮಂತ್ರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X