Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಯುವಕನ ಸಂಶಯಾಸ್ಪದ ಸಾವು;...

ಕುಂದಾಪುರ: ಯುವಕನ ಸಂಶಯಾಸ್ಪದ ಸಾವು; ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ22 Oct 2021 6:55 PM IST
share
ಕುಂದಾಪುರ: ಯುವಕನ ಸಂಶಯಾಸ್ಪದ ಸಾವು; ದೂರು ದಾಖಲು

ಕುಂದಾಪುರ, ಅ.22: ಕುಂದಾಪುರದ ಹೊಟೇಲೊಂದರಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಬೈಂದೂರು ತಾಲೂಕು ಜಡ್ಕಲ್ ಗ್ರಾಮ ಕೋರಿಜೆಡ್ಡುನ ಪ್ರಶಾಂತ್ (19) ಅ.21ರ ಮುಂಜಾನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಆತ್ಮಹತ್ಯೆಯ ಬಗ್ಗೆ ಸಂಶಯವಿರುವುದಾಗಿ ಪೋಷಕರು ತಿಳಿಸಿದ್ದು, ಅದರಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಲಾಗುತ್ತಿದೆ.

ಪ್ರಶಾಂತ್ ತಾನು ವಾಸ ಮಾಡಿಕೊಂಡಿದ್ದ ರೂಮಿನಲ್ಲಿ ಅ.21ರ  ಮುಂಜಾನೆ 2 ರಿಂದ 3 ಗಂಟೆಯ ಮಧ್ಯೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಆತನ ಮೊಬೈಲ್‌ನ್ನು ಪರಿಶೀಲಿಸಿದಾಗ ಅದರಲ್ಲಿ ಕೆಲವೇ ಗಂಟೆ ಮೊದಲು ‘ಏನೂ ಇಲ್ಲದವನ ಮುಂದೆ ಎಲ್ಲ ಇದ್ದವರ ಆಟ’ ಎಂದು ಬರೆದಿದ್ದು, ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ವೊಲೀಸರು ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಜಡ್ಕಲ್ ಸಮೀಪದ ಮುದೂರು ಬಸ್ರಿಬೇರುನಲ್ಲಿ ಕೂಲಿ ಕೆಲಸ ಮಾಡಿ ಕೊಂಡಿರುವ ಲಚ್ಚು ನಾಯ್ಕ್, ಗೌರಿ ದಂಪತಿಗಳ ಮೂರು ಮಕ್ಕಳಲ್ಲಿ ಕೊನೆಯವನಾದ ಪ್ರಶಾಂತ್ ಎಸೆಸೆಲ್ಸಿ ವಿದ್ಯಾಭ್ಯಾಸದ ಬಳಿಕ ಮನೆ ಜವಾಬ್ದಾರಿ ಹೊತ್ತು ಹೋಟೆಲ್ ಕೆಲಸಕ್ಕೆ ಸೇರಿದ್ದ. ಆತನಿಗೆ ಯಾವುದೇ ಸಮಸ್ಯೆ ಇದ್ದಿರಲಿಲ್ಲ. ಅ.20ರ ಸಂಜೆ ವೇಳೆಗೆ ಮನೆಗೆ ಕರೆ ಮಾಡಿ ಲವಲವಿಕೆಯಿಂದಲೇ ಮಾತನಾಡಿದ್ದಲ್ಲದೇ ಸಹೋದರನ ಖಾತೆಗೆ 5000 ರೂ. ಹಣ ಜಮಾ ಮಾಡಿದ್ದ ಎಂದು ಪೋಷಕರು ತಿಳಿಸಿದ್ದಾರೆ.

ಮನೆಯ ನಿರ್ವಹಣೆಗೆ ಆತ ಮೊದಲಿನಿಂದಲೂ ಕೈಜೋಡಿಸುತಿದ್ದ. ಬುಧವಾರ ಕೂಡ ಹಣ ಕಳುಹಿಸಿ ಒಳ್ಳೇ ರೀತಿ ಮಾತನಾಡಿದ್ದ. ಆತ ಆತ್ಮಹತ್ಯೆ ಮಾಡಿಕೊಳ್ಳುವ ಯುವಕನಲ್ಲ. ಏನೋ ನಡೆದಿದೆ ಎಂಬ ಅನುಮಾನವಿದೆ. ಹೀಗಾಗಿ ಪೊಲೀಸರು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಪ್ರಶಾಂತ್ ಪೋಷಕರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X