Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ದಲಿತ ಕುಟುಂಬದ ಮೇಲೆ...

ಚಿಕ್ಕಮಗಳೂರು: ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ; ಆರೋಪ

ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರು: ಚಂದ್ರಶೇಖರ್ ► ಆರೋಪಿಗಳ ಬಂಧನಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Oct 2021 10:47 PM IST
share
ಚಿಕ್ಕಮಗಳೂರು: ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ; ಆರೋಪ

ಚಿಕ್ಕಮಗಳೂರು, ಅ.22: ಜಿಲ್ಲೆಯ ಕೊಪ್ಪ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಜಮೀನು ಕಬಳಿಸುವ ಉದ್ದೇಶದಿಂದ ಬಡ ದಲಿತ ಕುಟುಂಬವೊಂದಕ್ಕೆ ಸವರ್ಣೀಯರು ಕಿರುಕುಳ ನೀಡುತ್ತಿರುವುದಲ್ಲದೆ ಕುಟುಂಬದ ಬುದ್ಧಿಮಾಂದ್ಯ ಯುವತಿಯೊಬ್ಬಳ ಮೇಲೆ ತೀವ್ರವಾಗಿ ಹಲ್ಲೆ ಮಾಡಿ ದೌರ್ಜನ್ಯ ನಡೆಸಿದ್ದಾರೆ. ಮನೆಗೆ ಪೆಟ್ರೋಲ್ ಸುರಿದು ಎಲ್ಲರನ್ನೂ ಸಾಯಿಸುವುದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಕೊಪ್ಪ ಠಾಣೆಗೆ ದೂರು ನೀಡಿದ್ದರೂ ಆರೋಪಿಗಳ ವಿರುದ್ಧ ಪೊಲೀಸರು ಯಾವುದೇ ಕಾನೂನು ಕ್ರಮಕೈಗೊಂಡಿಲ್ಲ. ದೌರ್ಜನ್ಯ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಲೀಲಾ, ನಾಗೇಶ್ ಎಂಬ ಪರಿಶಿಷ್ಟ ಸಮುದಾಯದ ದಂಪತಿ ಮುಕ್ಕಾಲು ಎಕರೆ ಜಮೀನು ಹೊಂದಿದ್ದು, ಜಮೀನು ಸಕ್ರಮಕ್ಕಾಗಿ ಫಾರ್ಮ್ ನಂ.57ರಲ್ಲಿ ಅರ್ಜಿ ಸಲ್ಲಿಸಿದ್ದು, ಹಕ್ಕುಪತ್ರ ಸಿಕ್ಕಿಲ್ಲ. ದಂಪತಿಯ ಇಬ್ಬರು ಹೆಣ್ಣು ಮಕ್ಕಳ ಪೈಕಿ ಓರ್ವ ಯುವತಿ ಬುದ್ಧಿಮಾಂದ್ಯಳಾಗಿದ್ದು, ದಂಪತಿ ಕೂಲಿ ಕೆಲಸ ಮಾಡಿಕೊಂಡು ಸಂಕಷ್ಟದಲ್ಲೇ ಜೀವನ ನಡೆಸುತ್ತಿದ್ದಾರೆ. ದಲಿತ ಕುಟುಂಬದ ಜಮೀನಿನ ಅಕ್ಕಪಕ್ಕದಲ್ಲಿ ಮೇಲ್ವರ್ಗದ ಸವರ್ಣೀಯರು ವಾಸವಾಗಿದ್ದು, ಈ ಜಮೀನನ್ನು ಕಬಳಿಸುವ ಉದ್ದೇಶದಿಂದ ಮೇಲ್ವರ್ಗದವರು ಹಿಂದಿನಿಂದಲೂ ಕಿರುಕುಳ ನೀಡುತ್ತಿದ್ದಾರೆ. ಬಡಕುಟುಂಬವನ್ನು ಗ್ರಾಮದಿಂದ ಓಡಿಸಲು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಕಳೆದ ಆ.3ರಂದು ಕಲ್ಕೆರೆ ಗ್ರಾಮದ ಮೇಲ್ವರ್ಗದವರಾದ ರವೀಂದ್ರ, ಅನಿಲ, ಸುಶೀಲಾ, ನಾಗೇಶ, ಶ್ರೀನಿವಾಸ್, ದಿನೇಶ್ ಎಂಬವರು ಇದೇ ಜಾಗದ ವಿಚಾರದಲ್ಲಿ ವಿನಾಕಾರಣ ದಲಿತ ಮಹಿಳೆ ಲೀಲಾ ಅವರ ಮನೆಗೆ ನುಗ್ಗಿ ದಾಂಧಲೆ, ಹಲ್ಲೆ ಮಾಡಿದ್ದಾರೆಂದು ಆರೋಪಿಸಿರುವ ಅವರು, ಸುಶೀಲಾ ಎಂಬವರು ಲೀಲಾ ಅವರ ಬುದ್ಧಿಮಾಂದ್ಯ ಮಗಳ ತಲೆಗೆ ಕತ್ತಿಯಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ನಂತರ ಮೇಲ್ವರ್ಗದವರೇ ಕೊಪ್ಪ ಪೊಲೀಸರಿಗೆ ದೂರು ನೀಡಿ ಸುಳ್ಳು ಆರೋಪ ಹೊರಿಸಿದ್ದಾರೆ. ಠಾಣೆಗೆ ಕರೆಸಿದ ಪೊಲೀಸರು ಒಪ್ಪಂದ ಮಾಡಿ ಕಳಿಸಿದ್ದಾರೆ. ಆದರೆ ಮಾರನೆ ದಿನ ಸಂಜೆ ಮೇಲ್ವರ್ಗದವರು ಮತ್ತೆ ಲೀಲಾ ಮನೆಗೆ ಕಲ್ಲು ಹೊಡೆದು ದಾಳಿ ಮಾಡಿದ್ದಾರೆ ಎಂದು ದೂರಿದರು.

ರಸ್ತೆಯಲ್ಲಿ ತಿರುಗಾಡಿದರೆ ಕೊಚ್ಚಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬೆದರಿಕೆ ಹಿನ್ನೆಲೆಯಲ್ಲಿ ಜೀವಭಯದಿಂದ ದಲಿತ ಕುಟುಂಬ ಕೊಪ್ಪ ಠಾಣೆ ಪೊಲೀಸರಿಗೆ ದೂರು ನೀಡಿ ಅಟ್ರಾಸಿಟಿ ದೂರು ದಾಖಲಿಸಿದ್ದಾರೆ. ದೂರು ನೀಡಿ ತಿಂಗಳಾಗಿದ್ದರೂ ಪೊಲೀಸರು ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ.

ಪೊಲೀಸರೂ ಸೇರಿದಂತೆ ಯಾವ ಇಲಾಖೆಯವರೂ ಸ್ಥಳಕ್ಕೆ ಭೇಟಿ ನೀಡಿ ನೊಂದ ದಲಿತ ಕುಟುಂಬಕ್ಕೆ ನ್ಯಾಯ ಕೊಡಿಸಲು ಮುಂದಾಗಿಲ್ಲ ಎಂದು ಆಪಾದಿಸಿದರು.

ದಲಿತ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ತಪ್ಪಿದಲ್ಲಿ ಅ.28ರಂದು ಚಿಕ್ಕಮಗಳೂರು ನಗರದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ನಡೆಸಲಾಗುವುದು ಎಂದರು.

ಗೋಷ್ಠಿಯಲ್ಲಿ ಕಲ್ಕೆರೆ ಗ್ರಾಮದ ದಲಿತ ಸಮುದಾಯದ ಸಂತ್ರಸ್ತರು ಸೇರಿದಂತೆ ದಸಂಸ ಮುಖಂಡರಾದ ಪುಟ್ಟಸ್ವಾಮಿ, ದಿವಾಕರ್, ಗಣೇಶ್, ಹಾದಿಹಳ್ಳಿ ಅಶೋಕ್, ಪೂವಯ್ಯ ಇದ್ದರು.

ಚಿಕ್ಕಮಗಳೂರು ಜಿಲ್ಲಾದ್ಯಂತ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಜಿಲ್ಲಾಡಳಿತ ಕಡಿವಾಣ ಹಾಕಬೇಕು. ಜಿಲ್ಲಾದ್ಯಂತ ಸಾಗುವಳಿ ಜಮೀನುಗಳ ಸಕ್ರಮಕ್ಕೆ ಫಾರ್ಮ್ ನಂ.57ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಕ್ಕುಪತ್ರ ನೀಡಿ, ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಬೇಕು. ಜಿಲ್ಲಾದ್ಯಂತ ಭೂಮಾಲಕರು ಒತ್ತುವರಿ ಮಾಡಿರುವ ಜಮೀನು ತೆರವು ಮಾಡಿ ಭೂರಹಿತರಿಗೆ ಹಂಚಿಕೆ ಮಾಡಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಬ್ಯಾಂಕ್‌ಗಳು ಸಾಲ ನೀಡಲು ಸತಾಯಿಸುತ್ತಿದ್ದು, ಸರಕಾರ ಪ್ರತ್ಯೇಕ ಆದೇಶ ಹೊರಡಿಸಿ ಎಲ್ಲ ಫಲಾನುಭವಿಗಳಿಗೂ ಸಾಲ ನೀಡುವಂತೆ ಕ್ರಮ ವಹಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X