ಸಿದ್ದರಾಮಯ್ಯರನ್ನು ಅಫ್ಘಾನಿಸ್ಥಾನಕ್ಕೆ ಕಳುಹಿಸಬೇಕು: ಸಂಸದ ಶ್ರೀನಿವಾಸ ಪ್ರಸಾದ್

ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಫ್ಘಾನಿಸ್ಥಾನಕ್ಕೆ ಕಳುಹಿಸಬೇಕು ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಅಡಿದ ಅವರು, ಉಪ ಚುನಾವಣೆಯಲ್ಲಿ ರಾಜ್ಯ ನಾಯಕರುಗಳ ಮಾತು ಮಿತಿಮೀರಿದೆ. ನಾನು ಚುನಾವಣಾ ಕ್ಷೇತ್ರಗಳಿಗೆ ಹೋಗದಿದ್ದರೂ ಪೇಪರ್ ಮತ್ತು ಟಿವಿ ಮೂಲಕ ತಿಳಿದುಕೊಂಡಿದ್ದೇನೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ಈ ರೀತಿಯ ಮಿತಿಮೀರಿದ ಹೇಳಿಕೆಗಳನ್ನು ಯಾರೂ ನೀಡಬಾರದು. ಪ್ರತಿಪಕ್ಷಗಳ ನಾಯಕರ ಹೇಳಿಕೆಗಳಂತು ಬಹಳ ಉದ್ಧಟತನದಿಂದ ಕೂಡಿದೆ ಎಂದು ಹೇಳಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜವಾಬ್ದಾರಿ ಮರೆತು ಮಾತನಾಡುತ್ತಿದ್ದಾರೆ. ಪ್ರಧಾನಮಂತ್ರಿಗಳಿಗೆ ಒಂದು ಗೌರವ ಇದೆ. ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಬಾರದು.ಸಿದ್ದರಾಮಯ್ಯ ಅವರನ್ನು ಒಂದು ತಿಂಗಳು ತಾಲೀಬಾನ್ ಗೆ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದರು.
ಸಿದ್ದರಾಮಯ್ಯ ಒಂದು ತಿಂಗಳು ತಾಲಿಬಾನ್ ಗೆ ಹೋಗಿ ಬಂದರೆ ಅಲ್ಲಿನ ಪರಿಸ್ಥಿತಿ ಅರ್ಥವಾಗುತ್ತದೆ. ಈ ರೀತಿಯ ಹೇಳಿಕೆಗಳನ್ನು ನೀಡುವ ಮೊದಲು ಯೋಚಿಸಬೇಕು ಎಂದು ಹೇಳಿದರು







