Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಅಡ್ರೆಸ್ ಪಕ್ಕಕ್ಕಿರಲಿ,...

ಕಾಂಗ್ರೆಸ್ ಅಡ್ರೆಸ್ ಪಕ್ಕಕ್ಕಿರಲಿ, ಮೊದಲು ಯಡಿಯೂರಪ್ಪ ತಮ್ಮ ಅಡ್ರೆಸ್ ಹುಡುಕಿಕೊಳ್ಳಲಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Oct 2021 7:22 PM IST
share
ಕಾಂಗ್ರೆಸ್ ಅಡ್ರೆಸ್ ಪಕ್ಕಕ್ಕಿರಲಿ, ಮೊದಲು ಯಡಿಯೂರಪ್ಪ ತಮ್ಮ ಅಡ್ರೆಸ್ ಹುಡುಕಿಕೊಳ್ಳಲಿ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಅಡ್ರೆಸ್ ಪಕ್ಕಕ್ಕಿರಲಿ, ಮೊದಲು ಯಡಿಯೂರಪ್ಪ ತಮ್ಮ ಅಡ್ರೆಸ್ ಹುಡುಕಿಕೊಳ್ಳಲಿ: ಡಿ.ಕೆ.ಶಿವಕುಮಾರ್ 

ಸಿಂದಗಿ, ಅ.23: ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಜನರೇ ಅದನ್ನು ವಿಸರ್ಜನೆ ಮಾಡಲಿದ್ದು, ವಿಳಾಸ ಹುಡುಕುವಂತಾಗಿದೆ ಎಂಬ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಕಾಂಗ್ರೆಸ್ ವಿಳಾಸ ಪಕ್ಕಕ್ಕಿರಲಿ, ಈಗ ಬಿಜೆಪಿಯವರು ಯಡಿಯೂರಪ್ಪಗೆ ಏನಾದರೂ ವಿಳಾಸ ಕೊಟ್ಟಿದ್ದಾರಾ? ಅವರ ವಿಳಾಸ ಏನು ಎಂದು ಮೊದಲು ಹುಡುಕಿಕೊಳ್ಳಲಿ, ಅದನ್ನು ಅವರು ಅರ್ಥ ಮಾಡಿಕೊಳ್ಳಲಿ’ ಎಂದು ಛೇಡಿಸಿದರು.

ಶನಿವಾರ ಸಿಂದಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜಾತಿ ಮೇಲೆ ಹೋರಾಟ ಮಾಡುತ್ತಿಲ್ಲ, ನೀತಿ ಮೇಲೆ ಹೋರಾಟ ಮಾಡುತ್ತಿದ್ದೇವೆ. ಇಲ್ಲಿರುವವರೆಲ್ಲ ರೈತರು. ಈ ಚುನಾವಣೆ ಎರಡು ವಿಚಾರಗಳ ಮೇಲೆ ನಡೆಯುತ್ತಿದೆ. ಬಿಜೆಪಿಯ ಡಬಲ್ ಇಂಜಿನ್ ಸರಕಾರ ಬಂದು 2 ವರ್ಷವಾಯಿತು. ಅವರು ಹೇಳಿದಂತೆ ರೈತರ ಆದಾಯ ಡಬಲ್ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

ಕೋವಿಡ್ ಸಮಯದಲ್ಲಿ ಘೋಷಿಸಿದ ಪರಿಹಾರ ಪ್ಯಾಕೇಜ್ ಜನರಿಗೆ ತಲುಪಿದೆಯಾ? ಎಂಬುದಷ್ಟೇ ಇಲ್ಲಿ ಮುಖ್ಯ. ಜನ ಇದನ್ನು ನೋಡಿ ನಂತರ ಮತ ಹಾಕುತ್ತಾರೆ. ಇದನ್ನು ಹೊರತು ಪಡಿಸಿ ಯಾವ ಪಕ್ಷ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ ಎಂಬುದು ಮುಖ್ಯವಲ್ಲ ಎಂದು ಶಿವಕುಮಾರ್ ಹೇಳಿದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 140 ಸೀಟು ಗೆಲ್ಲಿಸಿ ಮತ್ತೆ ಅಧಿಕಾರಕ್ಕೆ ತರುತ್ತೇನೆ ಎಂದು ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಹಳ ಸಂತೋಷ, ಇನ್ನುಳಿದ ಕ್ಷೇತ್ರಗಳನ್ನು ಅವರು ಯಾಕೆ ಬಿಟ್ಟಿದ್ದಾರೆ? ಯಡಿಯೂರಪ್ಪ ಗುರಿ 140 ಸೀಟುಗಳಾದರೆ, ನನ್ನ ಗುರಿ 224 ಸೀಟು ಎಂದರು.

ಯಡಿಯೂರಪ್ಪಗೆ ಅವರ ನೋವು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಣ್ಣೀರು ಯಾಕೆ ಬರುತ್ತದೆ ಹೇಳಿ. ಯಾರಿಗೆ ನೋವಾಗಿರುತ್ತದೆಯೋ ಅವರಿಗೆ ಕಣ್ಣೀರು ಬರುತ್ತದೆ. ಯಡಿಯೂರಪ್ಪ ರಾಜ್ಯಪಾಲರಿಗೆ ರಾಜೀನಾಮೆ ನೀಡುವಾಗ ಹಾಕಿದ ಕಣ್ಣೀರಲ್ಲೇ ಈ ಬಿಜೆಪಿ ಪಕ್ಷ ಹಾಗೂ ಅದರ ಸರಕಾರ ಕೊಚ್ಚಿಹೋಗಲಿದೆ ಎಂದು ಶಿವಕುಮಾರ್ ಹೇಳಿದರು.

ರಾಜಾಹುಲಿ ಯಡಿಯೂರಪ್ಪ ಜತೆ ಮತ್ತೊಂದು ಹುಲಿ ಬೊಮ್ಮಾಯಿ ಸೇರಿದ್ದಾರೆ, ಈಗ ಕಾಂಗ್ರೆಸ್ ನವರು ಇಲಿಗಳಾಗಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು, ‘ಇಲಿಯೇ ಅಲ್ಲವೇ ಗಣಪತಿಯನ್ನು ಹೊತ್ತು ತಿರುಗುವುದು’ ಎಂದು ಟಾಂಗ್ ಕೊಟ್ಟರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X