Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಚಾರಣೆ ನಡೆಸಲು ಮಾರ್ಗಸೂಚಿ ಪ್ರಕಟಿಸಿದ...

ವಿಚಾರಣೆ ನಡೆಸಲು ಮಾರ್ಗಸೂಚಿ ಪ್ರಕಟಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ23 Oct 2021 7:28 PM IST
share
ವಿಚಾರಣೆ ನಡೆಸಲು ಮಾರ್ಗಸೂಚಿ ಪ್ರಕಟಿಸಿದ ಹೈಕೋರ್ಟ್

ಬೆಂಗಳೂರು, ಅ.23: ಅಪರಾಧ ಪ್ರಕರಣಗಳ ಸಂಬಂಧ ಆರೋಪಿಗಳನ್ನು ವಿಚಾರಣೆ ನಡೆಸುವ ಸಂದರ್ಭದಲ್ಲಿ ಪ್ರಶ್ನಾವಳಿ ಸಿದ್ಧಪಡಿಸುವಾಗ ಅನುಸರಿಸಬೇಕಿರುವ ಕ್ರಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ಪ್ರಕಟಿಸಿದೆ.

ಮೈಸೂರಿನ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣವೊಂದರ ಆರೋಪಿಗಳಿಬ್ಬರಿಗೆ ವಿಚಾರಣಾ ನ್ಯಾಯಾಲಯ ಸೂಕ್ತ ರೀತಿ ಪ್ರಶ್ನೆ ಕೇಳದ ಮತ್ತು ಅವರಿಗೆ ಅವಕಾಶ ನೀಡದ ಪ್ರಕರಣದಲ್ಲಿ ನ್ಯಾಯಮೂರ್ತಿ ಹರೀಶ್‍ಕುಮಾರ್ ಅವರಿದ್ದ ಪೀಠ ಈ ಮಾರ್ಗಸೂಚಿ ರೂಪಿಸಿದೆ.

ಆರೋಪಿ ನೀಡಿದ ಉತ್ತರ ಮತ್ತು ವಿವರಣೆಯನ್ನು ವಿಚಾರಣಾ ನ್ಯಾಯಾಲಯ ದಾಖಲಿಸಿಕೊಳ್ಳಬೇಕೆ ಹೊರತು ಸತ್ಯ ಮತ್ತು ಸುಳ್ಳು ಎಂಬ ಏಕರೂಪದ ಉತ್ತರ ಪಡೆದುಕೊಳ್ಳಬಾರದು ಎಂಬುದು ಸೇರಿ ಹಲವು ಮಾರ್ಗಸೂಚಿಗಳನ್ನು ಹೈಕೋರ್ಟ್ ಉಲ್ಲೇಖಿಸಿದೆ.

ಪ್ರಮುಖವಾಗಿ ಮೌಖಿಕ ಹಾಗೂ ಲಿಖಿತ ಸಾಕ್ಷ್ಯಗಳಿಂದ ದೋಷಾರೋಪ ಸಾಕ್ಷ್ಯಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬಹುದು. ಸಾಮಾನ್ಯ ಭಾಷೆಯಲ್ಲಿ ಸಾಧ್ಯವಾದಷ್ಟು ಚಿಕ್ಕ ವಾಕ್ಯಗಳ ಪ್ರಶ್ನೆ ಸಿದ್ಧಪಡಿಸಬೇಕು. ಸಾಕ್ಷಿದಾರ ಕೆಲವೊಮ್ಮೆ ಎರಡು ಮತ್ತು ಅದಕ್ಕಿಂತ ಹೆಚ್ಚು ಆರೋಪಿಗಳ ಕೃತ್ಯದ ಬಗ್ಗೆ ಸಾಕ್ಷ್ಯ ಹೇಳುವಾಗ ಒಂದೇ ಪ್ರಶ್ನೆ ಸಿದ್ಧಪಡಿಸಬೇಕು.

ಪ್ರತಿ ಆರೋಪಿಯನ್ನು ವೈಯಕ್ತಿಕವಾಗಿ ಪ್ರಶ್ನೆ ಮಾಡಿ ಅವರ ಉತ್ತರವನ್ನು ಪ್ರತ್ಯೇಕವಾಗಿಯೇ ದಾಖಲಿಸಬೇಕು. ಎರಡು ಅಥವಾ ಅದಕ್ಕಿಂತ ಹೆಚ್ಚು ಸಾಕ್ಷಿದಾರರು ಆರೋಪಿಗಳ ಕೃತ್ಯದ ಬಗ್ಗೆ ಸಾಮೂಹಿಕ ಸಾಕ್ಷ್ಯ ನುಡಿಯುವಾಗ ಸಾಧ್ಯತೆ ಇರುವಾಗ ಒಂದೇ ಪ್ರಶ್ನೆ ಕೇಳಬಹುದು.

ದೋಷಾರೋಪಣೆಗಳು ಇರುವ ಸಂದರ್ಭದಲ್ಲಿ ಪಟ್ಟಿ ಮಾಡಲಾಗಿರುವ ದಾಖಲೆ ಮತ್ತು ವಸ್ತುಗಳ ಕುರಿತು ಆರೋಪಿಗಳ ಗಮನ ಸೆಳೆಯಬೇಕು. ಔಪಚಾರಿಕ ಸಾಕ್ಷಿಗಳು ನೀಡಿದ ಸಾಕ್ಷ್ಯದ ಬಗ್ಗೆ ಆರೋಪಿಯನ್ನು ಪ್ರಶ್ನೆ ಮಾಡುವ ಅಗತ್ಯವಿಲ್ಲ. ಎರಡು ಅಥವಾ ಅದಕ್ಕಿಂತ ಹೆಚ್ಚು ಆರೋಪಿಗಳು ಇದ್ದು, ಅವರು ಸಾಮೂಹಿಕ ಅಪರಾಧಕೃತ್ಯ ಎಸಗಿದ ಸಂದರ್ಭದಲ್ಲಿ ಆರೋಪಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಶ್ನಾವಳಿ ಗುಚ್ಛ ಸಿದ್ಧಪಡಿಸುವ ಅಗತ್ಯವಿಲ್ಲ. 

ಒಂದು ಪ್ರಶ್ನಾವಳಿ ಸಿದ್ಧಪಡಿಸಿದರೆ ಸಾಕು. ನಿರ್ದಿಷ್ಟ ಆರೋಪಿಗೆ ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಪ್ರಶ್ನೆ ಕೇಳಬಹುದು. ಆರೋಪಿಯು ನೀಡಿದ ಉತ್ತರ-ವಿವರಣೆ ದಾಖಲಿಸಿಕೊಳ್ಳಬೇಕೇ ವಿನಃ ಉತ್ತರವನ್ನು ಸತ್ಯ ಅಥವಾ ಸುಳ್ಳು ಎಂಬ ಒಂದೇ ಪದದ ಉತ್ತರ ನೀಡುವಂತೆ ಸೂಚಿಸಬಾರದು ಎಂದು ಹೈಕೋರ್ಟ್ ಹೇಳಿದೆ.

ಸಿಆರ್‍ಪಿಸಿ ಸೆಕ್ಷನ್ 313ಕ್ಕೆ 2009ರಲ್ಲಿ ತಿದ್ದುಪಡಿ ತಂದಿರುವ ಪ್ರಕಾರ ಆರೋಪಿಗಳಿಗೆ ಕೇಳಬಹುದಾದ ಪ್ರಶ್ನೆಗಳನ್ನು ಸಿದ್ಧಪಡಿಸಿ ಕೊಡಲು ಸರಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚಿಸಬಹುದು. ಅವರು ಸಿದ್ಧಪಡಿಸಿಕೊಟ್ಟ ನಂತರ ಅಗತ್ಯವಿದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು. ಆರೋಪಿಗೆ ಪ್ರಶ್ನೆಗಳನ್ನು ಕೇಳಿ ಉತ್ತರ ದಾಖಲಿಸಿಕೊಳ್ಳುವ ಬದಲು ಆರೋಪಿಗೆ ಲಿಖಿತ ಉತ್ತರ ದಾಖಲಿಸುವಂತೆಯೂ ಸೂಚಿಸಬಹುದು ಎಂದು ಉಲ್ಲೇಖಿಸಿದೆ.

ಅಷ್ಟೇ ಅಲ್ಲದೆ, ಪ್ರಶ್ನಾವಳಿ ಸಿದ್ಧಪಡಿಸುವ ವೇಳೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ರಾಜ್ಯದ ಎಲ್ಲ ವಿಚಾರಣಾ ನ್ಯಾಯಾಲಯಗಳಿಗೆ ಈ ಆದೇಶದ ಪ್ರತಿಯನ್ನು ಕಳುಹಿಸಬೇಕು. ರಾಜ್ಯ ನ್ಯಾಯಾಂಗ ಅಕಾಡೆಮಿ ಮಾದರಿ ಪ್ರಶ್ನಾವಳಿ ಸಿದ್ಧಪಡಿಸಿ, ಮಾರ್ಗದರ್ಶನ ನೀಡಲು ಎಲ್ಲ ವಿಚಾರಣಾ ನ್ಯಾಯಾಲಯಗಳಿಗೆ ಕಳುಹಿಸಿಕೊಡಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X