Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಠ್ಯದಲ್ಲಿ ಚಾರಿತ್ರಿಕ ಸತ್ಯ ತಿರುಚಿದರೆ...

ಪಠ್ಯದಲ್ಲಿ ಚಾರಿತ್ರಿಕ ಸತ್ಯ ತಿರುಚಿದರೆ ರಾಜ್ಯದೆಲ್ಲೆಡೆ ಪ್ರತಿರೋಧ: ದುಂಡುಮೇಜಿನ ಸಭೆಯಲ್ಲಿ ಪ್ರಗತಿಪರರ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ23 Oct 2021 8:29 PM IST
share
ಪಠ್ಯದಲ್ಲಿ ಚಾರಿತ್ರಿಕ ಸತ್ಯ ತಿರುಚಿದರೆ ರಾಜ್ಯದೆಲ್ಲೆಡೆ ಪ್ರತಿರೋಧ: ದುಂಡುಮೇಜಿನ ಸಭೆಯಲ್ಲಿ ಪ್ರಗತಿಪರರ ನಿರ್ಣಯ

ಬೆಂಗಳೂರು, ಅ.23: ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಸಮಿತಿ ಈ ಹಿಂದೆ ಪರಿಷ್ಕರಣೆ ಮಾಡಿರುವ ಪಠ್ಯಪುಸ್ತಕಗಳ ಅಪಪ್ರಚಾರ ಅಥವಾ ಚಾರಿತ್ರಿಕ ಸತ್ಯ ತಿರುಚಿದರೆ ರಾಜ್ಯದೆಲ್ಲೆಡೆ ಪ್ರತಿರೋಧದ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಪ್ರಗತಿಪರ ಹೋರಾಟಗಾರರು ಒಕ್ಕೂರಲಿನಿಂದ ಕರೆಕೊಟ್ಟರು.

ಶನಿವಾರ ನಗರದ ಕುಮಾರಕೃಪಾದಲ್ಲಿರುವ ಗಾಂಧಿ ಭವನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಜಂಟಿ ವೇದಿಕೆ ಸಹಯೋಗದೊಂದಿಗೆ ದುಂಡುಮೇಜಿನ ಸಭೆ ನಡೆಸಲಾಯಿತು.

ಸಾಹಿತಿ ಬಂಜಗೆರೆ ಜಯಪ್ರಕಾಶ್, ಚಿಂತಕ ಎಸ್.ಜಿ. ಸಿದ್ಧರಾಮಯ್ಯ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಹೋರಾಟಗಾರ ಗುರುಪ್ರಸಾದ್ ಕೆರಗೋಡು, ಶಿಕ್ಷಣ ತಜ್ಞ ಬಿ.ಶ್ರೀಪಾದ ಭಟ್, ರಾಜಶೇಖರಮೂರ್ತಿ ಸೇರಿದಂತೆ ಹಲವು ಚಿಂತಕರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಭಿಪ್ರಾಯ ಮಂಡಿಸಿ, ಪಠ್ಯ ಪುಸ್ತಕ ಪರಿಷ್ಕರಣೆ ಹಿಂದೆ ರಾಜಕಾರಣ ಅಡಗಿದೆ. ಈ ಹುನ್ನಾರವನ್ನು ಸರಕಾರ ಮುಂದುವರಿಸಿದರೆ, ಚಾರಿತ್ರಿಕ ಸತ್ಯಗಳನ್ನು ತಿರುಚಿದರೆ ಪ್ರತಿರೋಧ ಒಡ್ಡಲಾಗುವುದು ಎಂದು ಪ್ರಕಟಿಸಿದರು.

ಸಭೆ ಬಳಿಕ ನಿರ್ಣಯ ಪತ್ರವೊಂದನ್ನು ಬಿಡುಗಡೆ ಮಾಡಿದ್ದು, ಪರಿಷ್ಕರಣೆಗೊಂಡ ಪಠ್ಯ ಪುಸ್ತಕಗಳು ಜಾರಿಗೆ ಬಂದು ನಾಲ್ಕು ಶೈಕ್ಷಣಿಕ ವರ್ಷಗಳು ಮುಗಿದ ಬಳಿಕ ಎಬ್ಬಿಸುತ್ತಿರುವ ವಿವಾದದ ಹಿಂದೆ ಶೈಕ್ಷಣಿಕ ಕಾರಣಗಳು ಕಾಣಿಸುತ್ತಿಲ್ಲ. ಒಂದು ವೇಳೆ ದೋಷಗಳಿದ್ದರೆ ಅವುಗಳನ್ನು ತಿದ್ದುಪಡಿ ಮಾಡುವ ಕೆಲಸ ಮಾಡುವವರು ಆಯಾ ವಿಷಯಗಳಿಗೆ ಸಂಬಂಧಿಸಿದ ಶಿಕ್ಷಣ ತಜ್ಞರೇ ಹೊರತು ರಾಜಕೀಯ ಪಕ್ಷದ ಜೊತೆ ಸಂಪೂರ್ಣ ಗುರುತಿಸಿಕೊಂಡವರಲ್ಲ. ಅದರಲ್ಲೂ ಮೂಲಭೂತವಾದಿಗಳಂತೂ ಅಲ್ಲವೇ ಅಲ್ಲ ಎಂದು ಉಲ್ಲೇಖಿಸಲಾಗಿದೆ.

ಈಗ ಮೂಲಭೂತವಾದಿಗಳ ಕೈಗೆ ಮಕ್ಕಳ ಭವಿಷ್ಯ ಕೊಡುವ ಹುನ್ನಾರ ಮುಂದುವರಿದರೆ ಹೋರಾಟ ಅನಿವಾರ್ಯವಾಗಲಿದೆ. ಮುಖ್ಯಮಂತ್ರಿ, ಶಿಕ್ಷಣ ಸಚಿವರು ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನು ನಿಯೋಗದೊಂದಿಗೆ ಭೇಟಿ ಮಾಡಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಲಿಖಿತವಾಗಿ ಸಲ್ಲಿಸಲಾಗುವುದು ಎಂದು ತಿಳಿಸಲಾಗಿದೆ.

ಮತ್ತೊಂದೆಡೆ, ಈ ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಕುರಿತಂತೆ ಕ್ಷುಲ್ಲಕ ಹಾಗೂ ಮತೀಯ ರಾಜಕೀಯ ಮಾಡಲಾಗುತ್ತಿದೆ. ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಇತಿಹಾಸ ತಿರುಚಲು ಹೊರಟಿರುವ ಮುನ್ಸೂಚನೆ ಕಾಣಿಸುತ್ತಿದೆ. ಸಾರ್ವಜನಿಕರು ಗಂಭೀರವಾಗಿ ಗಮನಿಸಿದ್ದರೆ ಹಲ್ಲೆ ಮಾಡುತ್ತಿದ್ದರು ಎಂದು ಶಿಕ್ಷಣ ಸಚಿವರೇ ಹೇಳುವ ಮೂಲಕ ಪರಿಷ್ಕರಣೆ ಮಾಡಿದವರ ಮೇಲೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ. 

ಪಠ್ಯ ಪುಸ್ತಕ ಪರಿಷ್ಕರಣೆ ಪರಿಶೀಲಿಸಲು ಈಗ ನೇಮಕಗೊಂಡಿರುವ ಅಧ್ಯಕ್ಷರು ಎಲ್ಲ ಪುಸ್ತಕಗಳನ್ನು ಸಮಗ್ರವಾಗಿ ಪರಿಶೀಲಿಸುವ ಮೊದಲೇ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಹಿಂದಿನ ಅಧ್ಯಕ್ಷರ ವಿರುದ್ಧ ವೈಯಕ್ತಿಕ ತೇಜೋವಧೆಗೆ ಮುಂದಾಗಿದ್ದಾರೆ. ಈ ಎಲ್ಲಾ ಪ್ರವೃತ್ತಿಗಳನ್ನು ಸಭೆ ಖಂಡಿಸುತ್ತದೆ ಎಂದೂ ಪತ್ರದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X