Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯಾದ್ಯಂತ ಏಕರೂಪದ ವಾರ್ಡ್ ಸಮಿತಿ...

ರಾಜ್ಯಾದ್ಯಂತ ಏಕರೂಪದ ವಾರ್ಡ್ ಸಮಿತಿ ರಚನೆಗೆ ಪಿಐಎಲ್ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ23 Oct 2021 10:25 PM IST
share

ಮಂಗಳೂರು, ಅ.23: ರಾಜ್ಯದ ಹಲವು ಸಂಸ್ಥೆಗಳನ್ನು ಒಳಗೊಂಡ ನಾಗರಿಕ ಗುಂಪುಗಳ ಸಮೂಹವು ರಾಜ್ಯಾದ್ಯಂತ ಏಕರೂಪದ ಮತ್ತು ಹೆಚ್ಚು ಪರಿಣಾಮಕಾರಿ ವಾರ್ಡ್ ಸಮಿತಿಗಳು ಮತ್ತು ಪ್ರದೇಶ ಸಭೆಗಳನ್ನು ರಚಿಸಲು ಮಾರ್ಗಸೂಚಿ ಕೋರಿ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದೆ.

‘ಸಿವಿಕ್ ಬೆಂಗಳೂರು’ ಇದರ ಕ್ಯಾಥ್ಯಾಯಿನಿ ಚಾಮರಾಜ್ ಮುಖ್ಯ ಅರ್ಜಿದಾರರಾಗಿ ಮತ್ತು ಬೆಂಗಳೂರು ನಾಗರಿಕ ಶಕ್ತಿಯ ನರೇಂದ್ರ ಕುಮಾರ್, ಮಂಗಳೂರು ಸಿವಿಕ್ ಗ್ರೂಪ್‌ನ ನೈಜೆಲ್ ಅಲ್ಬುಕರ್ಕ್ ಮತ್ತು ಅಜೋಯ್ ಡಿಸಿಲ್ವ, ಮೈಸೂರು ಜಾಗೃತ ನಾಗರಿಕರ ವೇದಿಕೆ, ಬೆಳಗಾವಿ ಮತ್ತು ಕಲಬುರಗಿಯ ಜನಪರ ಸೇವಾ ಸಂಸ್ಥೆಗಳು, ಬಳ್ಳಾರಿ, ಹುಬ್ಬಳ್ಳಿ-ಧಾರವಾಡ ನಗರಗಳ ಕರ್ನಾಟಕ ವಾರ್ಡ್ ಸಮಿತಿ ವೇದಿಕೆ ಸದಸ್ಯರು ಸಹ-ಅರ್ಜಿದಾರರಾಗಿ ಪಿಐಎಲ್ ಸಲ್ಲಿಸಿದ್ದಾರೆ.

ಪ್ರಾಥಮಿಕ ಪರಿಶೀಲನೆಯ ನಂತರ ಅರ್ಜಿಯನ್ನು ಸ್ವೀಕರಿಸಿದ ಹೈಕೋರ್ಟ್, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ ಮತ್ತು ರಾಜ್ಯದ 11 ಮಹಾನಗರ ಪಾಲಿಕೆಗಳ ಆಯುಕ್ತರು (ಬಿಬಿಎಂಪಿ ಸೇರಿ) ಒಳಗೊಂಡಂತೆ ಎಲ್ಲ ಪ್ರತಿವಾದಿಗಳಿಗೆ ಈಗಾಗಲೇ ನೋಟಿಸ್ ನೀಡಿದೆ. ನ್ಯಾಯಾಲಯವು ಪ್ರತಿವಾದಿಗಳಿಗೆ ಸಲಹೆ ಗಳನ್ನು ಪಡೆಯಲು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅನುವು ಮಾಡಿಕೊಡಲು ಎಲ್ಲ ದಾಖಲೆಗಳನ್ನು ಸರಕಾರಿ ವಕೀಲರಿಗೆ ಹಸ್ತಾಂತರಿಸುವಂತೆ ನಿರ್ದೇಶಿಸಿದೆ.

ರಾಜ್ಯದ 11 ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ವಾರ್ಡ್ ಸಮಿತಿ ಸದಸ್ಯರು ಮತ್ತು ಪ್ರದೇಶ ಸಭೆಯ ಪ್ರತಿನಿಧಿಗಳ ಆಯ್ಕೆಗೆ ಏಕರೂಪದ ಮತ್ತು ಹೆಚ್ಚು ಪರಿಣಾಮಕಾರಿ ಮಾರ್ಗಸೂಚಿಗಳನ್ನು ಕೋರಿ ರಾಜ್ಯದ ವಿವಿಧ ನಾಗರಿಕ ಗುಂಪುಗಳು ಸರಕಾರಕ್ಕೆ ಈ ಹಿಂದೆ ಮಾಡಿದ ಹಲವು ಪ್ರಾತಿನಿಧ್ಯಗಳನ್ನು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದ ಪ್ರತಿ ಮುನ್ಸಿಪಲ್ ಕಾರ್ಪೊರೇಶನ್ ತನ್ನದೇ ಆದ ನಾಮನಿರ್ದೇಶನವನ್ನು ಅನುಸರಿಸುತ್ತಿರುವುದು ಕಂಡುಬಂದ ಕಾರಣ ಪಿಐಎಲ್ ಅಗತ್ಯವಾಗಿತ್ತು. ರಾಜ್ಯದಲ್ಲಿ ವಿವಿಧ ಕಾನೂನುಗಳನ್ನು ಉಲ್ಲೇಖಿಸಿ ಇಂತಹ ನಾಮ ನಿರ್ದೇಶನಗಳನ್ನು ಮಾಡಲಾಗುತ್ತಿತ್ತು. ಪ್ರಸ್ತುತ ಪರಿಸ್ಥಿತಿಯು ಅಸಮಂಜಸವಾಗಿದ್ದು, ತರ್ಕಬದ್ಧವಾಗಿಲ್ಲ ಎಂದು ಪಿಐಎಲ್‌ನಲ್ಲಿ ನಮೂದಿಸಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಸಾಂಸ್ಥಿಕಗೊಳಿಸುವ ವಿಷಯಗಳಲ್ಲಿ ಕೆಎಂಸಿ (ತಿದ್ದುಪಡಿ) ಕಾಯ್ದೆ 2011 ಮತ್ತು ಬಿಬಿಎಂಪಿ ಕಾಯ್ದೆ 2020ನ್ನು ಕರ್ನಾಟಕ ನಗರಪಾಲಿಕೆಗಳು (ತಿದ್ದುಪಡಿ) ಕಾಯ್ದೆ 2020ರಂತೆಯೇ ತಿದ್ದುಪಡಿ ಮಾಡಬೇಕು. ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜನರ ಸಹಭಾಗಿತ್ವದ ವ್ಯವಸ್ಥೆಗಳು ಮತ್ತು ವಿಧಾನಗಳು ಏಕರೂಪ, ಪಾರದರ್ಶಕ, ನ್ಯಾಯೋಚಿತ ಮತ್ತು ಪ್ರಜಾಸತ್ತಾತ್ಮಕವಾಗಿರಬೇಕು ಎಂದು ಒತ್ತಾಯಿಸಿರುವುದಾಗಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X