ಕತ್ತಲಾದ ಮೇಲೆ ಪೊಲೀಸ್ ಠಾಣೆಗೆ ತೆರಳದಂತೆ ಮಹಿಳೆಯರಿಗೆ ಬಿಜೆಪಿ ನಾಯಕಿ ಬೇಬಿ ರಾಣಿ ಸಲಹೆ

Photo: Twitter
ಲಕ್ನೊ: ಕತ್ತಲಾದ ಮೇಲೆ ಮಹಿಳೆಯರು ಪೊಲೀಸ್ ಠಾಣೆಗೆ ಹೋಗಬಾರದು ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷೆ ಬೇಬಿ ರಾಣಿ ಮೌರ್ಯ ವಿಚಿತ್ರ ಸಲಹೆ ನೀಡಿದ್ದಾರೆ.
ಬೇಬಿ ರಾಣಿಯವರ ಈ ಹೇಳಿಕೆಯಿಂದ ಪಕ್ಷವು ಮುಜುಗರಕ್ಕೀಡಾಗಿದೆ. ಇದರೊಂದಿಗೆ ಉತ್ತರಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆಯೂ ಪ್ರಶ್ನೆಯನ್ನು ಹುಟ್ಟುಹಾಕಿದೆ.’
ಈ ಹಿಂದೆ ಉತ್ತರಾಖಂಡದ ರಾಜ್ಯಪಾಲೆಯಾಗಿದ್ದ ಬೇಬಿ ರಾಣಿ ಶುಕ್ರವಾರ ಸಂಜೆ ವಾರಾಣಸಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಇಂತಹ ಸಲಹೆ ನೀಡಿದ್ದಾರೆ.
ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಇರುತ್ತಾದರೂ ಸಂಜೆ 5ರ ನಂತರ ಮಹಿಳೆಯರು ಅಲ್ಲಿಗೆ ಹೋಗದಿರುವುದೇ ಒಳ್ಳೆಯದು. ಪೊಲೀಸ್ ಠಾಣೆಗೆ ಹೋಗಲೇಬೇಕಿದ್ದರೆ ಅಣ್ಣ,ಅಪ್ಪ, ಪತಿ ಯಾರನ್ನಾದರೂ ಜೊತೆಗೆ ಕರೆದುಕೊಂಡು ಹೋಗಿ ಎಂದು ಅವರು ಸಲಹೆ ನೀಡಿದ್ದಾರೆ.
Next Story