ಉತ್ತರ ಪ್ರದೇಶ: ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆ

ಸಾಂದರ್ಭಿಕ ಚಿತ್ರ
ಲಕ್ನೊ: ಉತ್ತರ ಪ್ರದೇಶದಲ್ಲಿ ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ದಾಖಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ರೋಗಿಯು ಭಾರತೀಯ ವಾಯುಪಡೆಯ ಅಧಿಕಾರಿಯಾಗಿದ್ದು ಕಾನ್ಪುರದ ಪೋಖರ್ಪುರ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಝಿಕಾ ವೈರಸ್ ಪ್ರಾಥಮಿಕವಾಗಿ ಈಡಿಸ್ ಸೊಳ್ಳೆಗಳಿಂದ ಹರಡುತ್ತದೆ. ಜ್ವರ, ದದ್ದುಗಳು, ತಲೆನೋವು ಹಾಗೂ ಕೀಲು ನೋವು ಸೋಂಕಿನ ಲಕ್ಷಣಗಳಾಗಿವೆ.
ಅಧಿಕಾರಿ ಹಲವಾರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಹಾಗೂ ಜಿಲ್ಲೆಯ ವಾಯುಪಡೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಾನ್ಪುರದ ಮುಖ್ಯ ವೈದ್ಯಾಧಿಕಾರಿ ನೇಪಾಲ್ ಸಿಂಗ್ ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿದೆ.
ಅಧಿಕಾರಿಯ ರಕ್ತದ ಮಾದರಿಯನ್ನು ಪುಣೆಗೆ ಪರೀಕ್ಷೆಗೆ ಕಳುಹಿಸಲಾಗಿದ್ದು. ನಂತರ ಅವರಿಗೆ ಝಿಕಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಸಿಂಗ್ ಹೇಳಿದರು.
Next Story