Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ ಹೋಂಸ್ಟೇಯಲ್ಲಿ ಯುವತಿ ಸಾವು:...

ಮಡಿಕೇರಿ ಹೋಂಸ್ಟೇಯಲ್ಲಿ ಯುವತಿ ಸಾವು: ಪೊಲೀಸರಿಂದ ತನಿಖೆ

ವಾರ್ತಾಭಾರತಿವಾರ್ತಾಭಾರತಿ25 Oct 2021 7:11 PM IST
share
ಮಡಿಕೇರಿ ಹೋಂಸ್ಟೇಯಲ್ಲಿ ಯುವತಿ ಸಾವು: ಪೊಲೀಸರಿಂದ ತನಿಖೆ

ಮಡಿಕೇರಿ: ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದ ಬಳ್ಳಾರಿ ಮೂಲದ ಯುವತಿಯೊಬ್ಬಳು ಹೋಂಸ್ಟೇಯೊಂದರ ಬಾತ್ ರೂಂನಲ್ಲಿ ಕುಸಿದು ಬಿದ್ದು ಸಾವನಪ್ಪಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. 

ಬಳ್ಳಾರಿ ತೋರಣಗಲ್ ನಿವಾಸಿ ಮುಂಬೈನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿಘ್ನೇಶ್ವರಿ ಈಶ್ವರನ್(24) ಎಂಬವರೇ ಮೃತಪಟ್ಟ ಯುವತಿಯಾಗಿದ್ದಾಳೆ. 

ನಗರದ ಅಗ್ನಿ ಶಾಮಕ ದಳದ ಕಚೇರಿ ಬಳಿ ಇರುವ ಹೋಂಸ್ಟೇಯಲ್ಲಿ ಈ ಘಟನೆ ನಡೆದಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಗ್ಯಾಸ್ ಗೀಸರ್ ನಿಂದ ಕಾರ್ಬನ್ ಸೋರಿಕೆಯಾಗಿ ಈ ಘಟನೆ ಸಂಭವಿಸಿರಬಹುದೆಂದು ಅಂದಾಜಿಸಲಾಗಿದ್ದು, ಆ ಬಗ್ಗೆಯೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಳ್ಳಾರಿ ಮೂಲದ ಯುವತಿ ವಿಘ್ನೇಶ್ವರಿ ಈಶ್ವರನ್ ಎಂ.ಬಿ.ಎ ಪೂರೈಸಿದ್ದು, 9 ತಿಂಗಳಿಂದ ಮುಂಬೈ ಮೂಲದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು.

‘ವರ್ಕ್ ಫ್ರಂ ಹೋಂ’ ಮುಂದುವರೆದಿರುವ ಕಾರಣ ಆನ್‍ಲೈನ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ವಿಘ್ನೇಶ್ವರಿ ಮುಂಬೈನಿಂದ ಹೊರಟು ಬೆಂಗಳೂರಿಗೆ ಆಗಮಿಸಿ ಅಲ್ಲಿ ಕೆಲಸದಲ್ಲಿದ್ದ ಇತರ 4 ಮಂದಿ ಗೆಳತಿಯರ ಜೊತೆ ಶನಿವಾರ ಬೆಳಗೆ ಮಡಿಕೇರಿಗೆ ಆಗಮಿಸಿದ್ದರು. ಮಡಿಕೇರಿಗೆ ಆಗಮಿಸುವ ಮೊದಲ ಇಲ್ಲಿ ಉಳಿದುಕೊಳ್ಳಲು ನಗರದ ಅಗ್ನಿ ಶಾಮಕ ದಳದ ಕಚೇರಿ ಬಳಿ ಇರುವ ಹೋಂ ಸ್ಟೇ ಒಂದನ್ನು ಆನ್‍ಲೈನ್ ಮೂಲಕ ಬುಕ್ ಮಾಡಿದ್ದರು. ನಗರಕ್ಕೆ ಆಗಮಿಸಿದ 5 ಮಂದಿ ಯುವತಿಯರು ಹೋಂ ಸ್ಟೇ ಅಲ್ಲಿ ತಂಗಿದ್ದರಲ್ಲದೇ, ಶನಿವಾರ ಮತ್ತು ರವಿವಾರ ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಈ ಯುವತಿಯರ ಬಳಗ ಸೋಮವಾರ ಬೆಳಗ್ಗೆ ಹೋಂಸ್ಟೇಯನ್ನು ಖಾಲಿ ಮಾಡಿ ಜೀಪ್‍ನಲ್ಲಿ ಮಾಂದಲ್ ಪಟ್ಟಿಗೆ ತೆರಳುವ ಸಿದ್ಧತೆಯಲ್ಲಿದ್ದರು ಎನ್ನಲಾಗಿದೆ.

ರವಿವಾರ ರಾತ್ರಿ 9 ಗಂಟೆಯ ವೇಳೆಗೆ ವಿಘ್ನೇಶ್ವರಿ ಅವರು ಸ್ನಾನ ಮಾಡಲೆಂದು ಬಾತ್ ರೂಂಗೆ ತೆರಳಿದ್ದರು. ಸಮಯ ಕಳೆದರು ಆಕೆ ಹೊರ ಬಾರದನ್ನು ಗಮನಿಸಿದ ಇತರ ಯುವತಿಯರು ಬಾತ್ ರೂಂಗೆ ತೆರಳಿದಾಗ ವಿಘ್ನೇಶ್ವರಿ ಕುಸಿದು ಬಿದ್ದಿರುವುದು ಕಂಡು ಬಂದಿದೆ. ತಕ್ಷಣವೇ ಪಕ್ಕದ ಮನೆಯವರಿಗೆ ಮಾಹಿತಿ ನೀಡಿ ಆಕೆಯನ್ನು ವಾಹನದಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. 

ನಗರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಹಜರು ನಡೆಸಿ ಬಳಿಕ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿದರು. ಮೃತ ಯುವತಿಯ ತಂದೆ ಈಶ್ವರನ್ ಅವರು ಸೋಮವಾರ ಬೆಳಗ್ಗೆ ಮಡಿಕೇರಿಗೆ ಆಗಮಿಸಿ, ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇಲ್ನೋಟಕ್ಕೆ ಗ್ಯಾಸ್ ಗೀಸರ್‍ನಿಂದ ಕಾರ್ಬನ್ ಸೋರಿಕೆಯಾಗಿ ಈ ದುರಂತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

'ಮಗಳು ಆರೋಗ್ಯವಾಗಿದ್ದಳು'

ನನ್ನ ಮಗಳು ದೈಹಿಕವಾಗಿ ಆರೋಗ್ಯವಂತಳಾಗಿದ್ದು, ಯಾವುದೇ ರೀತಿಯ ಸಮಸ್ಯೆ ಆಕೆಗೆ ಇರಲಿಲ್ಲ. ಕೊಡಗಿನ ಕಡೆ ಸ್ನೇಹಿತೆಯರ ಜೊತೆ ಪ್ರವಾಸ ಹೋಗುತ್ತಿರುವ ವಿಚಾರವನ್ನು ನಮಗೆ ಮಾಹಿತಿ ನೀಡಿದ್ದಳು. ಹೋಂಸ್ಟೇಯಲ್ಲಿರುವ ಗ್ಯಾಸ್ ಗೀಸರ್ ಸಮಸ್ಯೆಯಿಂದ ಮಗಳು ಮೃತಪಟ್ಟಿರುವ ಸಾಧ್ಯತೆ ಇದೆ.

- ಈಶ್ವರನ್, ಮೃತಳ ತಂದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X