ಇಂಗ್ಲೆಂಡ್ ತಂಡಕ್ಕೆ ಬೆನ್ ಸ್ಟೋಕ್ಸ್ ಸೇರ್ಪಡೆ
ಆ್ಯಶಸ್ ಸರಣಿ

ಲಂಡನ್, ಅ. 25: ಈ ವರ್ಷದ ಕೊನೆಯಲ್ಲಿ ಆ್ಯಶಸ್ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ತೆರಳಲಿರುವ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಆಲ್‌ರೌಂಡರ್ ಬೆನ್‌ಸ್ಟೋಕ್ಸ್ ರನ್ನು ಸೇರ್ಪಡೆಗೊಳಿಸಲಾಗಿದೆ. ಮಾನಸಿಕ ಆರೋಗ್ಯ ಸುಧಾರಣೆಗಾಗಿ ಮತ್ತು ಗಾಯಗೊಂಡಿರುವ ತೋರು ಬೆರಳಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ 30 ವರ್ಷದ ಸ್ಟೋಕ್ಸ್ ಕ್ರೀಡೆಯಿಂದ ದೀರ್ಘ ವಿಶ್ರಾಂತಿ ತೆಗೆದು ಕೊಂಡಿದ್ದರು.
ಇದೀಗ ತಾನು ಚೇತರಿಸಿ ಕೊಂಡಿರುವುದಾಗಿ ಅವರು ಹೇಳಿದ್ದಾರೆ. ‘‘ನನ್ನ ಮಾನಸಿಕ ಆರೋಗ್ಯ ಸುಧಾರಣೆಗಾಗಿ ನಾನು ವಿಶ್ರಾಂತಿ ತೆಗೆದುಕೊಳ್ಳಬೇಕಾಗಿತ್ತು. ಈ ಅವಧಿಯಲ್ಲಿ ನಾನು ತೋರು ಬೆರಳಿಗೆ ಆಗಿರುವ ಗಾಯಕ್ಕಾಗಿ ಎರಡು ಶಸ್ತ್ರಚಿಕಿತ್ಸೆಗಳನ್ನು ಮಾಡಿಸಿಕೊಂಡಿದ್ದೇನೆ’’ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಸೋಮವಾರ ಬಿಡುಗಡೆಗೊಳಿಸಿರುವ ಹೇಳಿಕೆಯೊಂದರಲ್ಲಿ ಸ್ಟೋಕ್ಸ್ ಹೇಳಿದ್ದಾರೆ.
ಅವರು ಜುಲೈಯಿಂದ ಕ್ರಿಕೆಟ್‌ನಿಂದ ಹೊರಗಿದ್ದರು.
Next Story