Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ಉರೂಸ್ : ಬಾಕಿ ಕಾಮಗಾರಿ ಶೀಘ್ರ...

ಉಳ್ಳಾಲ ಉರೂಸ್ : ಬಾಕಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 Oct 2021 10:44 PM IST
share
ಉಳ್ಳಾಲ ಉರೂಸ್ : ಬಾಕಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಉಳ್ಳಾಲ, ಅ.27: ಉಳ್ಳಾಲ ದರ್ಗಾ ಉರೂಸ್ ಡಿಸೆಂಬರ್‌ನಲ್ಲಿ ನಡೆಯಲಿರುವುದರಿಂದ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದ.ಕ. ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೂಚಿಸಿದ್ದಾರೆ.

ಉಳ್ಳಾಲ ದರ್ಗಾ ಉರೂಸ್ ಪ್ರಯುಕ್ತ ಬುಧವಾರ ದರ್ಗಾಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ದರ್ಗಾದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೊರೋನ ನಿಯಂತ್ರಣ, ಜಾಗೃತಿ ನಮ್ಮ ಜವಾಬ್ದಾರಿ. ಕೋವಿಡ್ ನಿಯಮ ಪಾಲನೆ ಮಾಡಿ ಕಾರ್ಯಕ್ರಮ ನಡೆಸಬೇಕು. ಈ ವಿಚಾರದಲ್ಲಿ ದರ್ಗಾ ಆಡಳಿತ ಸಮಿತಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಣೆ ಮಾಡಬೇಕು. ಕೋವಿಡ್ ಡೋಸ್ ತೆಗೆಯದವರು ಶೀಘ್ರ ಡೋಸ್ ಹಾಕಿಸುವ ವ್ಯವಸ್ಥೆ ಆಗಬೇಕು. ಇದಕ್ಕಾಗಿ ದರ್ಗಾದಲ್ಲಿ ಖಾಯಂ ಕೋವಿಡ್ ಸೆಂಟರ್ ತೆರೆಯಬೇಕು. ಕೋವಿಡ್ ಡೋಸ್ ಆಗದ ಭಕ್ತಾದಿಗಳಿಗೆ ದರ್ಗಾ ವಠಾದಲ್ಲಿಯೇ ಡೋಸ್ ನೀಡುವ ವ್ಯವಸ್ಥೆ ಆಗಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ನಿಗಾ ಇಟ್ಟುಕೊಂಡು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ವಿಚಾರದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೈಜೋಡಿಸಬೇಕು ಎಂದು ಹೇಳಿದರು.

ಉಳ್ಳಾಲ ಉರೂಸ್ ಪ್ರಯುಕ್ತ 1.25 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ತಯಾರಿಸಿದ ಕ್ರಿಯಾ ಯೋಜನೆ ಪಟ್ಟಿ ಬಗ್ಗೆ ಶೀಘ್ರ ಪರಿಶೀಲನೆ ನಡೆಸಲಾಗುವುದು. ಈ ಯೊಜನೆ ಪ್ರಕಾರ ಕಾಮಗಾರಿ ಡಿಸೆಂಬರ್ ತಿಂಗಳೊಳಗೆ ಮಾಡಲಾಗುತ್ತದೆಯೇ ಎಂಬುದು ಮುಖ್ಯವಾಗಿರುತ್ತದೆ. ಕಾಮಗಾರಿ ಆಗುತ್ತದೆ ಎಂದಾದರೆ ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಜತೆಗೆ ಉರೂಸ್ ಪ್ರಯುಕ್ತ ದರ್ಗಾಗೆ ಬರುವ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ವಿಶೇಷ ಅನುದಾನದ ಬಗೆ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ಪ್ರವಾಸೋದ್ಯಮ ಇಲಾಖೆ ವತಿಯಿಂದ ಉಳ್ಳಾಲದಲ್ಲಿ ನಿರ್ಮಾಣ ಆಗುವ ಯಾತ್ರೀ ನಿವಾಸ್ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ನಿರ್ಮಿಸಿದ ಕಟ್ಟಡ ಜನರ ಪ್ರಯೋಜನಕ್ಕೆ ಬರಬೇಕು. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗೆ ಸೂಚಿಸಿದರು.

ನಗರ ಸಭಾ ಪೌರಾಯುಕ್ತ ರಾಯಪ್ಪ, ಅಧ್ಯಕ್ಷ ಚಿತ್ರಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಸ್ಥಾಯಿ ಸಮಿತಿ ಅಧ್ಯಕ್ಷ ಝರೀನ ರವೂಫ್, ಕಂದಾಯ ನಿರೀಕ್ಷಕ ಪ್ರಸಾದ್, ಗ್ರಾಮಕರಣಿಕ ಪ್ರಮೋದ್, ನವನೀತ್, ಉಪ ತಹಶೀಲ್ದಾರ್ ವಿನಯಾ, ವಕ್ಫ್ ಅಧಿಕಾರಿ ಅಬೂಬಕರ್, ಮೆಸ್ಕಾಂ ಎ.ಇ.ದಯಾನಂದ್ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು, ದರ್ಗಾದ ಉಪಾಧ್ಯಕ್ಷ ಮೋನು ಇಸ್ಮಾಯೀಲ್, ಬಾವ ಮುಹಮ್ಮದ್, ಪ್ರ.ಕಾರ್ಯದರ್ಶಿ ತ್ವಾಹಾ ಹಾಜಿ, ಜೊತೆ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಲೆಕ್ಕ ಪರಿಶೋಧಕ ಯು.ಟಿ.ಇಲ್ಯಾಸ್ ಹಾಗೂ ದರ್ಗಾ ಮೇಲ್ವಿಚಾರಣೆ ಮತ್ತು ಉರೂಸ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ಸ್ವಾಗತಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X