Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಭಾವಿಗಳಿದ್ದರೆ ಹೆಸರು ಬಹಿರಂಗಪಡಿಸಲಿ:...

ಪ್ರಭಾವಿಗಳಿದ್ದರೆ ಹೆಸರು ಬಹಿರಂಗಪಡಿಸಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಡ್ರಗ್ಸ್, ಬಿಟ್ ಕಾಯಿನ್ ಹಗರಣದ ಕುರಿತ ಸಿದ್ದರಾಮಯ್ಯರ ಆರೋಪಕ್ಕೆ ಸಿಎಂ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ28 Oct 2021 6:25 PM IST
share
ಪ್ರಭಾವಿಗಳಿದ್ದರೆ ಹೆಸರು ಬಹಿರಂಗಪಡಿಸಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಅ. 28: ‘ಮಾದಕ ವಸ್ತುಗಳ ಕಳ್ಳ ಸಾಗಾಣೆ, ಬಿಟ್ ಕಾಯಿನ್ ಸೇರಿದಂತೆ ಇನ್ನಿತರ ಅಕ್ರಮ ಪ್ರಕರಣದಲ್ಲಿ ಯಾವುದೇ ಪ್ರಭಾವಿ ರಾಜಕಾರಣಿಗಳು ಭಾಗಿಯಾಗಿದ್ದರೆ, ಅವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬಿಟ್ ಕಾಯಿನ್ -ಡ್ರಗ್ಸ್ ಹಗರಣದಲ್ಲಿ ರಾಜಕಾರಣಿಗಳು ಭಾಗಿಯಾಗಿರುವ ಬಗ್ಗೆ ಅಕ್ಟೋಬರ್ 19ರಂದು 'ಸಂಯುಕ್ತ ಕರ್ನಾಟಕ'ದ ಮುಖಪುಟದಲ್ಲಿ ''ಬಿಟ್ ಕಾಯಿನ್ -ಡ್ರಗ್ಸ್ ಹಗರಣ ಜೋಡಿ ನಾಯಕರ ನೆರಳು, ತಲ್ಲಣ ಉಂಟು ಮಾಡಿದೆ ಕೇಂದ್ರ ತನಿಖಾ ಸಂಸ್ಥೆಗಳ ನಡೆ'' ಎಂಬ ಶೀರ್ಷಿಕೆಯಲ್ಲಿ ಶಿವಕುಮಾರ ಮೆಣಸಿನಕಾಯಿ ಅವರ ವಿಶೇಷ ವರದಿ ಪ್ರಕಟವಾಗಿತ್ತು.

ಬಳಿಕ ಈ ಹಗರಣದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅ.27ರಂದು ತನ್ನ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿ,  ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿಗಳಿದ್ದಾರೆ ಎಂಬ ಮಾಹಿತಿ ಇದೆ. ಇದೇ ಕಾರಣಕ್ಕೆ ತನಿಖಾಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂಬ ವರದಿ ಕಳವಳಕಾರಿಯಾದುದು. ಕೇಂದ್ರ ತನಿಖಾ ಸಂಸ್ಥೆಗಳ‌ ಮೇಲೆ ಕೇಂದ್ರ ಬಿಜೆಪಿ ಸರಕಾರ ಪ್ರಭಾವ ಬೀರಿ ತನಿಖೆಯ ಹಾದಿ ತಪ್ಪಿಸದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.'' ಎಂದು ದೂರಿದ್ದರು. 

ಇದೀಗ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯೆ ಸೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ಡ್ರಗ್ಸ್ ಪ್ರಕರಣದ ಬಗ್ಗೆ ರಾಜ್ಯದ ಪೊಲೀಸರು ಹಾಗೂ ತನಿಖಾ ಸಂಸ್ಥೆಗಳು ತನಿಖೆ ಕೈಗೊಂಡಿದೆ. ಇದೇ ವೇಳೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಗೆ ನಾವೇ ವಹಿಸಿದ್ದೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ' ಎಂದು ಸ್ಪಷ್ಟಣೆ ನೀಡಿದರು.

'ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸುಖಾಸುಮ್ಮನೆ ಆರೋಪ ಮಾಡುವುದು ಬೇಡ. ಅವರಿಗೆ ಯಾರಾದಾದರೂ ಹೆಸರುಗಳು ಗೊತ್ತಿದ್ದರೆ ಬಹಿರಂಗಪಡಿಸಲಿ. ಬಿಟ್ ಕಾಯಿನ್ ಹಗರಣವನ್ನು ರಾಜ್ಯಸರಕಾರ ಮುಚ್ಚಿ ಹಾಕಲು ಪ್ರಯತ್ನ ನಡೆಸಿದೆ ಎಂಬ ಆರೋಪ ಮಾಡುವುದು ಸರಿಯಲ್ಲ' ಎಂದು ಅವರು ಆಕ್ಷೇಪಿಸಿದರು.

ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿಗಳಿದ್ದಾರೆ
ಎಂಬ ಮಾಹಿತಿ ಇದೆ.
ಇದೇ ಕಾರಣಕ್ಕೆ ತನಿಖಾಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂಬ ವರದಿ ಕಳವಳಕಾರಿಯಾದುದು. 1/2#DrugsCase

— Siddaramaiah (@siddaramaiah) October 27, 2021

ಕೇಂದ್ರ ತನಿಖಾ ಸಂಸ್ಥೆಗಳ‌ ಮೇಲೆ ಕೇಂದ್ರ @BJP4India ಸರ್ಕಾರ ಪ್ರಭಾವ ಬೀರಿ ತನಿಖೆಯ ಹಾದಿ ತಪ್ಪಿಸದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. 2/2#DrugsCase

— Siddaramaiah (@siddaramaiah) October 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X