Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಲ್ಲಪೆರಿಯಾರ್ ಅಣೆಕಟ್ಟು...

ಮುಲ್ಲಪೆರಿಯಾರ್ ಅಣೆಕಟ್ಟು ಶಿಥಿಲಗೊಂಡಿದೆ, ಹೊಸದರ ನಿರ್ಮಾಣ ಅಗತ್ಯ: ಸುಪ್ರೀಂ ಕೋರ್ಟ್ ನಲ್ಲಿ ಕೇರಳದ ಮೊರೆ

ವಾರ್ತಾಭಾರತಿವಾರ್ತಾಭಾರತಿ28 Oct 2021 8:16 PM IST
share
ಮುಲ್ಲಪೆರಿಯಾರ್ ಅಣೆಕಟ್ಟು ಶಿಥಿಲಗೊಂಡಿದೆ, ಹೊಸದರ ನಿರ್ಮಾಣ ಅಗತ್ಯ: ಸುಪ್ರೀಂ ಕೋರ್ಟ್ ನಲ್ಲಿ ಕೇರಳದ ಮೊರೆ

ಹೊಸದಿಲ್ಲಿ,ಅ.28: ಮುಲ್ಲಪೆರಿಯಾರ್ ಅಣೆಕಟ್ಟು ಅತ್ಯಂತ ದುರ್ಬಲಗೊಂಡಿರುವುದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕು ಮತ್ತು ಅದರ ಸ್ಥಾನದಲ್ಲಿ ಹೊಸ ಅಣೆಕಟ್ಟು ನಿರ್ಮಿಸಬೇಕು ಎಂದು ಕೇರಳ ಸರಕಾರವು ಸರ್ವೋಚ್ಚ ನ್ಯಾಯಾಲಯದಲ್ಲಿ ಹೇಳಿದೆ.

126 ವರ್ಷಗಳಷ್ಟು ಹಳೆಯದಾದ ಮುಲ್ಲಪೆರಿಯಾರ್ ಅಣೆಕಟ್ಟು ಕೇರಳದ ಇಡುಕ್ಕಿ ಜಿಲ್ಲೆಯಲ್ಲಿದ್ದು,ಅದನ್ನು ತಮಿಳುನಾಡು ಸರಕಾರವು ನಿರ್ವಹಿಸುತ್ತಿದೆ. ಅಕ್ಟೋಬರ್‌ನಲ್ಲಿ ಕೇರಳದಲ್ಲಿ ಭಾರೀ ಮಳೆಯ ಬಳಿಕ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

ಅಣೆಕಟ್ಟಿನಲ್ಲಿಯ ನೀರಿನ ಮಟ್ಟ 139 ಅಡಿಗಳನ್ನು ದಾಟಲು ಅವಕಾಶ ನೀಡಬಾರದು ಎಂದು ಕೋರಿ ಕೇರಳ ಸರಕಾರವು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ನಡೆಸುತ್ತಿದೆ. ಸರ್ವೋಚ್ಚ ನ್ಯಾಯಾಲಯವು 2014ರಲ್ಲಿ ಅಣೆಕಟ್ಟಿನಲ್ಲಿಯ ನೀರಿನ ಮಟ್ಟಕ್ಕೆ 142 ಅಡಿಗಳ ಮಿತಿಯನ್ನು ನಿಗದಿಗೊಳಿಸಿತ್ತು. ಜಲಾಶಯದಲ್ಲಿ ಉಳಿಸಿಕೊಳ್ಳಬಹುದಾದ ನೀರಿನ ಗರಿಷ್ಠ ಮಟ್ಟವನ್ನು ನಿರ್ಧರಿಸಲು ಉಸ್ತುವಾರಿ ಸಮಿತಿಯೊಂದನ್ನೂ ಅದು ನೇಮಕಗೊಳಿಸಿತ್ತು.

ಬುಧವಾರ ವಿಚಾರಣೆ ಸಂದರ್ಭದಲ್ಲಿ ಅಣೆಕಟ್ಟಿನ ನೀರಿನ ಮಟ್ಟದಲ್ಲಿ ಯಾವುದೇ ಬದಲಾವಣೆ ಅಗತ್ಯವಿಲ್ಲ ಎಂದು ಉಸ್ತುವಾರಿ ಸಮಿತಿಯು ತಿಳಿಸಿತು. ಇದನ್ನು ವಿರೋಧಿಸಿದ ಕೇರಳ,ಈ ವಾರ ಆರಂಭವಾಗಲಿರುವ ಮಳೆಯು ಅಣೆಕಟ್ಟಿನಲ್ಲಿ ನೀರಿನ ಒಳಹರಿವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಹೀಗಾಗಿ ಅಣೆಕಟ್ಟಿನಿಂದ ಗರಿಷ್ಠ ಸಾಧ್ಯ ಮಟ್ಟದಲ್ಲಿ ನೀರನ್ನು ಹೊರಬಿಡಬೇಕು ಎಂಬ ತನ್ನ ನಿಲುವನ್ನು ಪುನರುಚ್ಚರಿಸಿತು.

ವಿಶಾಲ ಜಲಾನಯನ ಪ್ರದೇಶ ಮತ್ತು ಸೀಮಿತ ದಾಸ್ತಾನು ಸಾಮರ್ಥ್ಯದಿಂದಾಗಿ ಅಣೆಕಟ್ಟು ಅತ್ಯಂತ ಸುಲಭಭೇದ್ಯವಾಗಿದೆ. ಅಣೆಕಟ್ಟು ಒಡೆದರೆ ಮಾನವ ಪರಿಹಾರಕ್ಕೆ ಮೀರಿದ ವಿನಾಶಗಳನ್ನು ಎದುರಿಸಬೇಕಾಗುತ್ತದೆ. ಅಣೆಕಟ್ಟಿನ ಕೆಳಪಾತ್ರದಲ್ಲಿಯ ಐದು ಜಿಲ್ಲೆಗಳ 30 ಲಕ್ಷಕ್ಕೂ ಅಧಿಕ ಜನರ ಜೀವ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ತನ್ನ ಕಳವಳಗಳಿಗೆ ಸೂಕ್ತ ಮಹತ್ವ ಮತ್ತು ಪರಿಗಣನೆಯನ್ನು ನೀಡಬೇಕು ಎಂದು ಹೇಳಿದ ಕೇರಳ ಸರಕಾರವು,ತಮಿಳುನಾಡಿಗೆ ನೀರು ಪೂರೈಕೆ ಮತ್ತು ಕೆಳಪಾತ್ರಗಳಲ್ಲಿಯ ಜನರ ಸುರಕ್ಷತೆಯನ್ನು ಖಚಿತಪಡಿಸಲು ಈಗಿರುವ ಅಣೆಕಟ್ಟಿನ ಬದಲಿಗೆ ಹೊಸದನ್ನು ನಿರ್ಮಿಸುವುದು ತಾರ್ಕಿಕವಾದ ಮುಂದಿನ ಹೆಜ್ಜೆಯಾಗಿದೆ ಎಂದು ತಿಳಿಸಿತು.

ಅಣೆಕಟ್ಟಿನಿಂದ ನೀರನ್ನು ಹೊರಕ್ಕೆ ಬಿಡುವಂತೆ ಕೇರಳದ ಮುಖ್ಯಮಂತ್ರಿ ಪಿ.ವಿಜಯನ್ ಅವರು ರವಿವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಆಗ್ರಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X