Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಖರದಿಂದ ಸಾಗರದವರೆಗೆ ಐವರು ಯುವತಿಯರ...

ಶಿಖರದಿಂದ ಸಾಗರದವರೆಗೆ ಐವರು ಯುವತಿಯರ ಸಾಹಸ ಯಾತ್ರೆ; 300ಕಿ.ಮೀ. ಕಯಾಕಿಂಗ್ ಯಾನ ಹೊರಟ ತಂಡಕ್ಕೆ ಮಲ್ಪೆಯಲ್ಲಿ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ28 Oct 2021 10:03 PM IST
share
ಶಿಖರದಿಂದ ಸಾಗರದವರೆಗೆ ಐವರು ಯುವತಿಯರ ಸಾಹಸ ಯಾತ್ರೆ; 300ಕಿ.ಮೀ. ಕಯಾಕಿಂಗ್ ಯಾನ ಹೊರಟ ತಂಡಕ್ಕೆ ಮಲ್ಪೆಯಲ್ಲಿ ಸ್ವಾಗತ

ಉಡುಪಿ, ಅ.28: ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಶಿಖರದಿಂದ ಸಾಗರ ಐತಿಹಾಸಿಕ ಯಾನ ದಲ್ಲಿ ಭಾಗಿಯಾಗಿರುವ ಕರ್ನಾಟಕದ ಕರಾವಳಿ ಕಾರವಾರದಿಂದ 300ಕಿ.ಮೀ ಸಮುದ್ರದಲ್ಲಿ ಕಯಾಕಿಂಗ್ ಯಾನ ಮಾಡುತ್ತಿರುವ ಐವರು ಕರ್ನಾಟಕ ರಾಜ್ಯದ ಯುವತಿಯರ ತಂಡ ಇಂದು ಮಲ್ಪೆ ಸಮುದ್ರ ತೀರಕ್ಕೆ ಆಗಮಿಸಿತು.

ಕಾಶ್ಮೀರದಲ್ಲಿ ಕೊಲ್ಲೋಹಿ (5425 ಮೀ) ಶಿಖರವನ್ನು ಯಸ್ವಿಯಾಗಿ ಏರಿ, ನಂತರ ಲಡಾಖ್‌ನಿಂದ 3,000 ಕಿ.ಮೀ ಸೈಕಲ್ ಯಾನ ಮಾಡಿ, ಕಾರವಾರ ತಲುಪಿರುವ ಈ ತಂಡ, ಇದೀಗ ಕಯಾ ಕಿಂಗ್ ಯಾನ ಹೊರಟಿದೆ. ಈ ಐತಿಹಾಸಿಕ ಯಾನದಲ್ಲಿರುವ ಶಿವಮೊಗ್ಗದ ಐಶ್ವರ್ಯ ವಿ., ಧನಲಕ್ಷ್ಮೀ, ಬೆಂಗಳೂರಿನ ಆಶಾ, ಮಡಿಕೇರಿಯ ಪುಪ್ಪ, ಮೈಸೂರಿನ ಬಿಂದು ಅವರನ್ನು ಮಲ್ಪೆ ಸಮದ್ರ ತೀರದಲ್ಲಿ ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಲಾಯಿತು.

ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ತಂಡವನ್ನು ಸ್ವಾಗತಿಸಿ ಮಾತನಾಡಿ, ಯುವತಿಯರು ಸಾಹಸ ಕ್ರೀಡೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸುವುದರ ಜೊತೆಗೆ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತು ಓಲಂಪಿಕ್‌ನಲ್ಲಿ ಉತ್ತಮ ಸಾಧನೆಯನ್ನು ಮಾಡುವ ದಿಟ್ಟ ನಿರ್ಧಾರ ಮಾಡಬೇಕು. ಇವರ ಸಾಹಸ ಗುಣಗಳು, ಛಲ ರಾಜ್ಯದ ಎಲ್ಲಾ ಯುವತಿಯರು ಮತ್ತು ಮಹಿಳೆಯರಿಗೂ ಮಾದರಿಯಾಗಬೇಕು ಎಂದರು.

ತಮ್ಮ ಈ ಸಾಹಸ ಯಾತ್ರೆಯ ಅನುಭವ ಹಂಚಿಕೊಂಡ ಯುವತಿಯರು, ಶಿಖರವೇರುವ ಸಂದರ್ಭದಲ್ಲಿ 25 ಕೆಜಿಗೂ ಅಧಿಕ ಬಾರದ ಬ್ಯಾಗ್‌ಗಳನ್ನು ಹೊತ್ತುಕೊಂಡು, ಜೀವವನ್ನು ಪಟಕ್ಕಿಟ್ಟು ಸಾಹಸ ಮಾಡಿದ್ದೇವೆ. ಯಾನದಲ್ಲಿ ತಮ್ಮ ಎಲ್ಲಾ ಅಗತ್ಯತೆಗಳಿಗೆ ಯಾರನ್ನೂ ಅವಲಂಬಿಸದೇ ತಾವೇ ಸ್ವತ: ಅಡುಗೆ ಮಾಡುವುದು ಸೇರಿದಂತೆ ಟೆಂಟ್‌ಗಳನ್ನು ಹಾಕುವ ಕೆಲಸಗಳನ್ನು ಮಾಡಿದ್ದೇವೆ. ಶಿಖರವನ್ನು ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಏರಿ ಸಾಧನೆ ಮಾಡಿದ್ದೇವೆ ಎಂದರು.

ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಪರ್ಡ್ ಲೋಬೋ, ಸಾಹಸ ಯಾತ್ರೆಯ ಮಾರ್ಗದರ್ಶಕ ಶಬ್ಬೀರ್ ಮೊದಲಾದವರು ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್‌ಕುಮಾರ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.

ಭಾರತೀಯ ಪರ್ವತರೋಹಣ ಸಂಸ್ಥೆಯ ದಕ್ಷಿಣ ವಲಯ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಸಹಯೋಗದೊಂದಿಗೆ ನಡೆಸುತ್ತಿರುವ ಈ ಯಾನವನ್ನು ಆ.16ರಂದು ಧ್ವಜಾರೋಹಣ ಮಾಡಿದ್ದು, ಕಯಾ ಕಿಂಗ್ ಯಾನದ ಮೂಲಕ ಮಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ.

ಉಡುಪಿ ಜಿಲ್ಲೆಯಲ್ಲಿಯೂ ಕೂಡ ಸಾಹಸ ಕಾರ್ಯಕ್ರಮಗಳ ತರಬೇತಿಗೆ ಈಗಾಗಲೇ ಪಡುಕೆರೆಯೆಲ್ಲಿ ಸ್ಥಳ ಗುರುತಿಸಲಾಗಿದ್ದು, ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿಯ ಮೂಲಕ ಇಲ್ಲೂ ಸಹ ಸಾಹಸ ಕ್ರೀಡೆಗಳ ತರಬೇತಿ ಕೇಂದ್ರ ಆರಂಭವಾಗಲಿದೆ. ಜಿಲ್ಲೆಯ ಯುವ ಜನತೆಯ ಈ ಕೇಂದ್ರದ ಪ್ರಯೋಜನ ಪಡೆಯಬೇಕು.

-ಡಾ.ನವೀನ್ ಭಟ್, ಸಿಇಓ, ಜಿಪಂ

ಲಡಾಖ್‌ನಿಂದ ನಡೆಸಿದ ಸೈಕ್ಲಿಂಗ್ ಪ್ರಯಾಣದಲ್ಲಿ ಕಂಡು ಬಂದ ವಿವಿಧ ಪ್ರದೇಶದಲ್ಲಿನ ಯುವತಿಯರು ಮತ್ತು ಮಹಿಳೆಯರ ಸಮಸ್ಯೆಗಳನ್ನು ಕಂಡಿದ್ದು, ಮಹಿಳೆಯರು ಮನೆಯಿಂದ ಹೊರಬಂದು ಸಾಹಸಿಗಳಾಗಬೇಕು ಎನ್ನುವ ಉದ್ದೇಶದಿಂದ ಮುಂದಿನ ದಿನದಲ್ಲಿ ಅರಿವು ಕಾರ್ಯಕ್ರಮಗಳನ್ನು ಮಾಡುವ ಉದ್ದೇಶ ಇದೆ.

-ಸಾಹಸಿ ಯುವತಿಯರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X