‘ಪರಿಸ್ಥಿತಿ ಬಹಳ ಗಂಭೀರ…’: ಪುನೀತ್ ರಾಜ್ ಕುಮಾರ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ವಿಕ್ರಂ ಆಸ್ಪತ್ರೆಯ ವೈದ್ಯರು

ಬೆಂಗಳೂರು: ಇಂದು ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿಯ ಬಗ್ಗೆ ವಿಕ್ರಂ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ವೈದ್ಯರು, "11:30ಗಂಟೆಗೆ ಪುನೀತ್ ಆಸ್ಪತ್ರೆಗೆ ಆಗಮಿಸಿದ್ದರು. ಎದೆನೋನಿಂದ ಬಳಲುತ್ತಿದ್ದ ಅವರು ಬೇರೊಂದು ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿದ್ದರು. ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಬರುವಾಗಲೇ ಪರಿಸ್ಥಿತಿ ಗಂಭೀರವಾಗಿತ್ತು. ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದೇವೆ. ಚಿಕಿತ್ಸೆ ನಡೆಯುತ್ತಿದೆ. ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ, ಪುನೀತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ" ಎಂದಿದ್ದಾರೆ.
Next Story





