Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ

ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ

ವಾರ್ತಾಭಾರತಿವಾರ್ತಾಭಾರತಿ29 Oct 2021 2:27 PM IST
share
ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ

ಬೆಂಗಳೂರು, ಅ.29: ಕನ್ನಡ ಚಿತ್ರರಂಗದಲ್ಲಿ ಪವರ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ  ಪುನೀತ್ ರಾಜ್ ಕುಮಾರ್(46) ಹೃದಯಾಘಾತದಿಂದ ಇಂದು ಮಧ್ಯಾಹ್ನ ನಗರದ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ ಇಂದು ಪೂರ್ವಾಹ್ನ 11 ಗಂಟೆ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಇಸಿಜಿ ಮಾಡಿಸಿದಾಗ ಹೃದಯಾಘಾತ ಸಂಭವಿಸಿರುವುದು ದೃಢಪಟ್ಟಿತ್ತು. ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ವಿಕ್ರಂ ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಚಿತ್ರರಂಗದ ದಂಡೇ ಆಸ್ಪತ್ರೆಗೆ ಆಗಮಿಸಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಥಳಕ್ಕಾಗಮಿಸಿದ್ದು, ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಶಾಲೆ- ಕಾಲೇಜುಗಳಿಗೆ ಅರ್ಧದಿನ ರಜೆ

ಪುನೀತ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಬಹುತೇಕ ಶಾಲೆ- ಕಾಲೇಜುಗಳಿಗೆ ಅರ್ಧದಿನ ರಜೆ ಘೋಷಿಸಲಾಗಿದೆ.

ಕನ್ನಡ ಚಿತ್ರರಂಗದ 'ಪವರ್ ಸ್ಟಾರ್'

ಕನ್ನಡ ಚಿತ್ರರಂಗದಲ್ಲಿ 'ಪವರ್ ಸ್ಟಾರ್' ಎಂದೇ ಗುರುತಿಸಿಕೊಂಡಿದ್ದ ಪುನೀತ್, ಬಾಲನಟರಾಗಿ ಚಲನಚಿತ್ರ ಪ್ರವೇಶಿಸಿದ್ದರು. 'ಬೆಟ್ಟದ ಹೂ' ಚಿತ್ರದ ಅಭಿನಯಕ್ಕಾಗಿ ಅವರಿಗೆ ಅತ್ಯುತ್ತಮ ಬಾಲನಟ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. 2002ರಲ್ಲಿ ಅಪ್ಪು ಚಿತ್ರದ ಮೂಲಕ ನಾಯಕ ನಟರಾದ ಪುನೀತ್ ಮೊದಲ ಚಿತ್ರವೇ ಸೂಪರ್ ಹಿಟ್ ಆಗಿತ್ತು. ಬಳಿಕ ಹಿಂದಿರುಗಿ ನೋಡದ ಅವರು ಅನೇಕ ಹಿಟ್ ಚಿತ್ರಗಳ ಮೂಲಕ ಪವರ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದರು.

ಡಾ.ರಾಜಕುಮಾರ್ ಮತ್ತು ಪಾರ್ವತಮ್ಮ ದಂಪತಿಯ ಕಿರಿ ಪುತ್ರನಾಗಿ 1975, ಮಾರ್ಚ್ 17ರಂದು ಜನಿಸಿದ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟರಲ್ಲಿ ಒಬ್ಬರಾಗಿದ್ದರು. ಅಭಿಮಾನಿಗಳಿಂದ 'ಅಪ್ಪು' ಎಂದೇ ಕರೆಯಿಸಿಕೊಳ್ಳುವ ಪುನೀತ್ ನಟನೆಯಲ್ಲದೇ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು. ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಮತ್ತು ನಾಯಕನಾಗಿ 29ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಇವರು ರಾಜ್ ದಂಪತಿಯ ಕಿರಿಯ ಮಗುವಾಗಿದ್ದರಿಂದ ಬಹು ಅಕ್ಕರೆಯಲ್ಲಿ ಬೆಳೆದಿದ್ದರು. ಪುನೀತ್ ಮತ್ತು ಸಹೋದರಿ ಪೂರ್ಣಿಮಾರನ್ನು, ರಾಜ್ ಕುಮಾರ್ ತಮ್ಮ ಬಹುತೇಕ ಚಿತ್ರಗಳ ಶೂಟಿಂಗ್‌ಗೆ ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಹೀಗಾಗಿ ಬಾಲ್ಯದಿಂದಲೇ ಕಲೆಯ ಜೊತೆಗಿನ ನಂಟು ಆರಂಭವಾಗಿತ್ತು.

ಪುನೀತ್ ಆರು ತಿಂಗಳು ಮಗುವಿದ್ದಾಗ 1976 ರಲ್ಲಿ ತೆರೆಕಂಡ `ಪ್ರೇಮದ ಕಾಣಿಕೆ' ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ನಂತರ ಬಂದ `ಸನಾದಿ ಅಪ್ಪಣ್ಣ',`ತಾಯಿಗೆ ತಕ್ಕ ಮಗ',`ವಸಂತ ಗೀತ',`ಭೂಮಿಗೆ ಬಂದ ಭಗವಂತ',`ಭಾಗ್ಯವಂತರು' ಮುಂತಾದ ಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯ ಪ್ರೌಡಿಮೆ ಮೆರೆದಿದ್ದರು.

ಭಾಗ್ಯವಂತ ಚಿತ್ರದ `ಬಾನ ದಾರಿಯಲ್ಲಿ ಸೂರ್ಯ', ಚಲಿಸುವ ಮೋಡಗಳು ಚಿತ್ರದ `ಕಾಣದಂತೆ ಮಾಯವಾದನೋ',ಯಾರಿವನು ಚಿತ್ರದ `ಕಣ್ಣಿಗೆ ಕಾಣುವ ದೇವರು' ಮುಂತಾದ ಗೀತೆಗಳನ್ನು ಹಾಡಿ ಹಿನ್ನೆಲೆ ಗಾಯಕರಾಗಿಯೂ ಪ್ರಶಂಸೆ ಪಡೆದರು. `ಚಲಿಸುವ ಮೋಡಗಳು' ಮತ್ತು `ಎರಡು ನಕ್ಷತ್ರಗಳು' ಚಿತ್ರದ ಅಭಿನಯಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದಿದ್ದರು.

ಬಾಲ ಕಲಾವಿದನಾಗಿ ಪುನೀತ್ ಅಭಿನಯಿಸಿದ ಉತ್ಕೃಷ್ಟ ಚಿತ್ರ `ಬೆಟ್ಟದ ಹೂ'. 1984 ರಲ್ಲಿ ತೆರೆಕಂಡ ಎನ್. ಲಕ್ಷ್ಮಿ ನಾರಾಯಣ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್ ಬಾಲಕ ರಾಮು ಆಗಿ ನಟಿಸಿದ್ದರು. ಶಾಲೆಗೆ ಹೋಗುವ ಬಡ ಬಾಲಕನೊಬ್ಬನ ತಳಮಳಗಳನ್ನು ಚಿತ್ರ ಚೆನ್ನಾಗಿ ಬಿಂಬಿಸಿತು. ಈ ಚಿತ್ರ ಇಂಗ್ಲಿಷ್ ಕಾದಂಬರಿ `ವಾಟ್ ದೆನ್ ರಾಮನ್' ಆಧಾರಿತವಾಗಿತ್ತು. ಈ ಚಿತ್ರದ ಅಭಿನಯಕ್ಕಾಗಿ ಪುನೀತ್‌ಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು.

2002 ರಲ್ಲಿ ತೆರೆಕಂಡ ಪುರಿ ಜಗನ್ನಾಥ ನಿರ್ದೇಶನದ `ಅಪ್ಪು' ಚಿತ್ರದಿಂದ ನಾಯಕನಟನಾಗಿ ಕನ್ನಡ ಚಿತ್ರರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದರು. ಈ ಚಿತ್ರ ಅದ್ಧೂರಿ ಯಶಸ್ಸು ಕಂಡಿತ್ತು. ನಂತರ ತೆರೆಗೆ ಬಂದ ಅಭಿ, ವೀರ ಕನ್ನಡಿಗ, ಮೌರ್ಯ, ಆಕಾಶ್, ನಮ್ಮ ಬಸವ, ಅಜಯ್ ಮುಂತಾದ ಚಿತ್ರಗಳು ಬಾಕ್ಸಾಫೀಸಿನಲ್ಲಿ ಒಳ್ಳೆ ದಾಖಲೆ ಮಾಡಿ ಅದ್ದೂರಿ ಪ್ರದರ್ಶನ ಕಂಡಿದ್ದವು. ಇವರು ನಾಯಕನಾಗಿ ನಟಿಸಿದ ಮೊದಲ ಹತ್ತು ಚಿತ್ರಗಳು ಶತದಿನ ಪೂರೈಸಿದ್ದು ದಾಖಲೆ. ನಾಯಕನಾಗಿ ಎರಡು ರಾಜ್ಯ ಪ್ರಶಸ್ತಿ, ನಾಲ್ಕು ಫಿಲ್ಮಫೇರ್, ಎರಡು ಸೈಮಾ ಹೀಗೆ ಹತ್ತು ಹಲವು ಪ್ರಶಸ್ತಿ ಪಡೆದಿದ್ದಾರೆ.

ಗಾಯಕನಾಗಿ ಸುಮಾರು ಐವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಡಿರುವ ಪುನೀತ್, ಗಾಯನದಿಂದ ಬರುವ ಸಂಪೂರ್ಣ ಹಣವನ್ನು ಸಮಾಜಸೇವೆಗೆ ವಿನಿಯೋಗಿಸುತ್ತಿದ್ದರು. ಕಿರುತೆರೆಯಲ್ಲಿ ನಿರೂಪಕರಾಗಿ ಕನ್ನಡದ ಕೋಟ್ಯಧಿಪತಿಯ ಎರಡು ಸೀಸನ್‌ಗಳನ್ನು ಮತ್ತು ಫ್ಯಾಮಿಲಿ ಪವರ್ ಎಂಬ ರಿಯಾಲಿಟಿ ಶೋಗಳನ್ನು ನಿರೂಪಿಸಿದ್ದಾರೆ. ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಮೊಟ್ಟಮೊದಲ ಅತಿಥಿಯಾಗಿ ಭಾಗವಹಿಸಿದ್ದು ವಿಶೇಷ.

ಚಿತ್ರ ನಿರ್ಮಾಪಕರಾಗಿ `ಕವುಲುದಾರಿ', `ಮಯಾಬಜಾರ್' ಎಂಬ ಚಿತ್ರಗಳನ್ನು ತಮ್ಮ ಹೋಂ ಬ್ಯಾನರ್‌ನಲ್ಲಿಯೇ ನಿರ್ಮಿಸಿರುವ ಪುನೀತ್ ತಮ್ಮ ಪ್ರೋಡಕ್ಸನ್ ಹೌಸ್ ಮೂಲಕ ಕಿರುತೆರೆ ಧಾರಾವಾಹಿ ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಅರ್.ಕೆ ' ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಮೈಸೂರಿನ ಶಕ್ತಿ ಧಾಮ ಆಶ್ರಮದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಪುನೀತ್ `ಬೆಂಗಳೂರು ಪ್ರೀಮಿಯರ್ ಫುಟ್ಬಾಲ್ ತಂಡದ ಒಡೆತನವನ್ನು ಹೊಂದಿದ್ದರು. ಕರ್ನಾಟಕ ಸರ್ಕಾರದ ನಂದಿನಿ ಹಾಲು ಉತ್ಪನ್ನಗಳು ಮತ್ತು LED ಬಲ್ಬ್‌ಗಳ ರಾಯಭಾರಿಯಾಗಿ ಕೂಡ ಪ್ರಸ್ತುತರು. ಒಂದು ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿದ್ದರು.

1999ರಲ್ಲಿ ಚಿಕ್ಕಮಗಳೂರಿನವರಾದ ಅಶ್ವಿನಿಯವರನ್ನು ವಿವಾಹವಾಗಿದ್ದು, ಈ ದಂಪತಿಗೆ ಧೃತಿ ಮತ್ತು ವಂದಿತಾ ಎಂಬ ಪುತ್ರಿಯರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X