ಪುನೀತ್ ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ವ್ಯವಸ್ಥೆ

ಬೆಂಗಳೂರು, ಅ.29: ಇಂದು ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.
ಹೊರಾಂಗಣ ಕ್ರೀಡಾಂಗಣದಲ್ಲಿ ಪೆಂಡಾಲ್ ಹಾಕಲಾಗಿದೆ. ಅಭಿಮಾನಿಗಳನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಯಾವುದೇ ಅಹಿತಕರ ಘಟನೆ ನಡೆಯಂತೆ ತಡೆಯುವ ಸಲುವಾಗಿ ಕ್ರೀಡಾಂಗಣದ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಪೂರ್ವಾಹ್ನ 11 ಗಂಟೆ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಇಸಿಜಿ ಮಾಡಿಸಿದಾಗ ಹೃದಯಾಘಾತ ಸಂಭವಿಸಿರುವುದು ದೃಢಪಟ್ಟಿತ್ತು. ಕೂಡಲೇ ಅವರನ್ನು ವಿಕ್ರಂ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
Next Story





