ನಟ ಪುನೀತ್ ರಾಜ್‍ಕುಮಾರ್ ನಿಧನ: ಅ.31ರವರೆಗೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ

ಬೆಂಗಳೂರು, ಅ.29: ನಟ ಪುನೀತ್‍ರಾಜ್‍ಕುಮಾರ್ ಅವರ ಅಗಲಿಕೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನಲ್ಲಿ ಅ.29ರ ಮಧ್ಯಾಹ್ನ 3ಗಂಟೆಯಿಂದ ಅ.31ರ ಮಧ್ಯರಾತ್ರಿ 12ಗಂಟೆವರೆಗೆ ಮದ್ಯ ಮಾರಾಟ ನಿμÉೀಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, ನಟ ಪುನೀತ್ ರಾಜ್‍ಕುಮಾರ್ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಅ.29ರಿಂದ ಅ.31ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್‍ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.
ಮದ್ಯದಂಗಡಿಗಳನ್ನು ಮುಚ್ಚುವಂತೆ ಅಬಕಾರಿ ಆಯುಕ್ತರು ಆದೇಶ: ಅ.29ರ ಮಧ್ಯಾಹ್ನ 3 ಗಂಟೆಯಿಂದ ಅ.31ರ ಮಧ್ಯರಾತ್ರಿಯವರಿಗೆ ಬಾರ್ ಅಂಡ್ ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಅಬಕಾರಿ ಆಯುಕ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.





