Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ.11ವರೆಗೆ ಮುಲ್ಲಪೆರಿಯಾರ್ ಅಣೆಕಟ್ಟಿನ...

ನ.11ವರೆಗೆ ಮುಲ್ಲಪೆರಿಯಾರ್ ಅಣೆಕಟ್ಟಿನ ನೀರಿಮಟ್ಟ 130.5 ಅಡಿಗೆ: ಸುಪ್ರೀಂಕೋರ್ಟ್ ಆದೇಶ‌

ವಾರ್ತಾಭಾರತಿವಾರ್ತಾಭಾರತಿ29 Oct 2021 10:08 PM IST
share
ನ.11ವರೆಗೆ ಮುಲ್ಲಪೆರಿಯಾರ್ ಅಣೆಕಟ್ಟಿನ ನೀರಿಮಟ್ಟ 130.5 ಅಡಿಗೆ: ಸುಪ್ರೀಂಕೋರ್ಟ್ ಆದೇಶ‌

ಹೊಸದಿಲ್ಲಿ, ಅ.29: ಅಣೆಕಟ್ಟು ಮೇಲ್ವಿಚಾರಣಾ ಸಮಿತಿಯ ಶಿಫಾರಸಿನಂತೆ ಮುಲ್ಲಪೆರಿಯಾರ್ ಅಣೆಕಟ್ಟಿನ ನೀರಿನ ಮಟ್ಟವನ್ನು ನವೆಂಬರ್ 11ರವರೆಗೆ 130.5 ಅಡಿವರೆಗೆ ಕಾಪಾಡಿಕೊಳ್ಳುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮುಲ್ಲಪೆರಿಯಾರ್ ಅಣೆಕಟ್ಟಿನ ಸುರಕ್ಷತೆಯ ಬಗ್ಗೆ ಕೇರಳದ ಕೆಲವು ನಿವಾಸಿಗಳು ಸಲ್ಲಿಸಿದ ಅರ್ಜಿಯ ವಿಚಾರಮೆಯನ್ನು ನವೆಂಬರ್ 11ರಂದು ನಡೆಸಲಾಗುವುದು.

ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಣೆಕಟ್ಟಿನ ನೀರು ಅಪಾಯಕಾರಿ ಮಟ್ಟಕ್ಕೆ ಏರುವ ಸಾಧ್ಯತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಕೋತಮಂಗಲಂ ಬ್ಲಾಕ್ ಪಂಚಾಯತ್ನ ಪದಾಧಿಕಾರಿಗಳು ಹಾಗೂ ಜೋ ಜೋಸೆಫ್ ಎಂಬವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯ ಈ ಆದೇಶ ನೀಡಿದೆ.

126 ವರ್ಷಗಳಷ್ಟು ಹಳೆಯದಾದ ಮುಲ್ಲಪೆರಿಯಾರ್ ಅಣೆಕಟ್ಟು ದುರ್ಬಲವಾಗಿರುವುದರಿಂದ ಅದನ್ನು ತೆಗೆದುಹಾಕಿ, ಹೊಸ ಅಣೆಕಟ್ಟನ್ನು ನಿರ್ಮಿಸಬೇಕೆಂದು ಕೇರಳ ಸರಕಾರವು ನ್ಯಾಯಾಲಯಕ್ಕೆ ಟಪ್ಪಣಿ ಪತ್ರವೊಂದನ್ನು ಸಲ್ಲಿಸಿತು.

‘‘ಅಣೆಕಟ್ಟಿನ ಜಲಮಟ್ಟವನ್ನು 139.5 ಅಡಿಯಲ್ಲಿರಿಸಬೇಕೆಂಬ ಅಣೆಕಟ್ಟಿನ ಮೇಲ್ವಿಚಾಣಾ ಸಮಿತಿಯ ಶಿಫಾರಸನ್ನು ನಾವು ಒಪ್ಪಿಕೊಳ್ಳುತ್ತೇವೆ ಹಾಗೂ ಮುಂದಿನ ವಿಚಾರಣೆಯ ದಿನಾಂ(ನ.11)ದವರೆಗೂ ಅದು ಮುಂದುವರಿಯಲಿದೆ’’ ಎಂದು ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವ ನ್ಯಾಯಪೀಠ ತಿಳಿಸಿತು. ವಿವಿಧ ದಿನಾಂಕಗಳಲ್ಲಿ ಕಾಪಾಡಿಕೊಳ್ಳಬೇಕಾದ ನೀರಿನ ಮಟ್ಟವನ್ನು ಸೂಚಿಸುವ ‘ರೂಲ್ ಕರ್ವ್’ ಅನ್ನು ಹಾಗೂ ಸಮಿತಿಯ ವರದಿಯ ಕುರಿತ ಆಕ್ಷೇಪಗಳನ್ನು ಸಲ್ಲಿಸುವಂತೆಯೂ ಅದು ಸೂಚಿಸಿತು.
 
ಕೇರಳ ಸರಕಾರದ ಪರವಾಗಿ ವಾದಿಸಿದ ಹಿರಿಯ ನ್ಯಾಯವಾದಿ ಜೈದೀಪ್ ಗುಪ್ತಾ ಅವರು, ತಮಿಳುನಾಡು ಸರಕಾರದ ಪ್ರಸ್ತಾವನೆ ಮಾಡಿರುವಂತೆ ಮುಲ್ಲಪೆರಿಯಾರ್ ಅಣೆಕಟ್ಟಿನ ನೀರಿನ ಮಟ್ಟವನ್ನು 142 ಅಡಿಯಲ್ಲಿ ಉಳಿಸಿಕೊಳ್ಳುವುದು ಸುರಕ್ಷಿತವಲ್ಲವೆಂದು ಹೇಳಿದರು. ಮುಂದಿನ ವಿಚಾರಣೆಯವರೆಗೆ ನೀರಿನ ಮಟ್ಟವನ್ನು 139 ಅಡಿಗೆ ಉಳಿಸಿಕೊಳ್ಳಬೇಕೆಂದು ಅವರು ಆಗ್ರಹಿಸಿದರು.

ಆಗ್ನೇಯ ಮುಂಗಾರು ಮಾರುತವು ನಿರ್ಗಮಿಸಿದೆಯಾದರೂ,ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಈಶಾನ್ಯ ಮುಂಗಾರು ಮಳೆಯಾಗುತ್ತಿದ್ದು, ಅದು ನವೆಂಬರ್ ತಿಂಗಳ ಅಂತ್ಯದವರೆಗೂ ಮುಂದುವರಿಯಲಿದೆ ಎಂದರು. ಒಂದು ವೇಳೆ ನೀರಿನ ಮಟ್ಟವು ಈಗಾಗಲೇ 142 ಅಡಿಗಳಾಗಿದ್ದಲ್ಲಿ ಜಲಾಶಯಕ್ಕೆ ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಾಗದು ಮತ್ತು ಅಣೆಕಟ್ಟಿನ ಗೇಟುಗಳನ್ನು ತೆರೆಯೇಕಾದೀತು ಎಂದರು.

ತಮಿಳುನಾಡು ಸರಕಾರದ ಪರವಾಗಿ ವಾದಿಸಿದ ಹಿರಿಯ ನ್ಯಾಯವಾದಿ ಶೇಖರ ನಫಾಡೆ ಅವರು ಕೇರಳವು ನವೆಂಬರ್ 10ರವರೆಗೆ ನೀರಿನ ಮಟ್ಟವನ್ನು 139.5 ಅಡಿಯವರೆಗೆ ಕಾಪಾಡಿಕೊಳ್ಳಲು ಶಕ್ತವಾಗಲಿದೆ ಎಂದರು. ಪ್ರತಿ ವರ್ಷವೂ ಕೇರಳವು ನೀರಿನ ಮಟ್ಟವನ್ನು 142 ಅಡಿಗಿಂತ ಕೆಳಗಿರಿಸಲು ಪ್ರಯತ್ನಿಸುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X