ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 32,55,330 ರೂ. ಮೌಲ್ಯದ ಚಿನ್ನ ವಶ

ಮಂಗಳೂರು, ಅ.29:ದುಬೈಯಿಂದ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗುಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಯಾಣಿಕರೋರ್ವ ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು.
ತಪಾಸಣೆ ವೇಳೆ ಈತನ ಬಳಿ 32,55,330 ರೂ. ಮೌಲ್ಯದ 663 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story