ಉಡುಪಿ ಜಿಲ್ಲಾಸ್ಪತ್ರೆ ವಾರ್ಡ್ನಲ್ಲಿಯೇ ರೋಗಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಉಡುಪಿ, ಅ.29: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ರೋಗಿಯೊಬ್ಬರು ವಾರ್ಡಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.28ರಂದು ಬೆಳಗ್ಗೆ 6ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಮಂಗಳೂರು ಜೋಕಟ್ಟೆಯ ಮೈಂದಗುರಿ ನಿವಾಸಿ ಯೋಗೀಶ್ ಕೋಟ್ಯಾನ್(55) ಎಂದು ಗುರುತಿಸಲಾಗಿದೆ. ವಿಪರೀತ ಕುಡಿತದ ಚಟದಿಂದ ಮನೆ ಬಿಟ್ಟು ತಿರುಗಾಡುತ್ತಿದ್ದ ಇವರು, ಕ್ಷಯರೋಗಕ್ಕೆ ತುತ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಟಿ.ಬಿ. ವಾರ್ಡಿನ ಬಾಗಿಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ . ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





