Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.1ರಂದು ಕುದ್ರೋಳಿ ಕ್ಷೇತ್ರದಲ್ಲಿ ‘ನಮ್ಮ...

ನ.1ರಂದು ಕುದ್ರೋಳಿ ಕ್ಷೇತ್ರದಲ್ಲಿ ‘ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ’

ವಾರ್ತಾಭಾರತಿವಾರ್ತಾಭಾರತಿ30 Oct 2021 12:51 PM IST
share

ಮಂಗಳೂರು, ಅ.30: ನಮ್ಮ ಕುಡ್ಲ ಕೇಬಲ್ ಚಾನೆಲ್ ವತಿಯಿಂದ ನಡೆಯುವ ಗೂಡುದೀಪ ಸ್ಪರ್ಧೆ ನ.1ರಂದು ಕುದ್ರೋಳಿ ಕ್ಷೇತ್ರದಲ್ಲಿ ನಡೆಯಲಿದೆ ಎಂದು ನಮ್ಮಕುಡ್ಲದ ನಿರ್ದೇಶಕ ಹರೀಶ್ ಬಿ. ಕರ್ಕೇರ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸ್ಪರ್ಧೆಯು ವಯೋಮಾನದ ನಿರ್ಬಂಧವಿಲ್ಲದೆ ಸಾಂಪ್ರದಾಯಿಕ, ಆಧುನಿಕ ಹಾಗೂ ಪ್ರತಿಕೃತಿ ಎಂಬ ಮೂರು ವಿಭಾಗಗಳಲ್ಲಿ ನಡೆಯಲಿದೆ. ಪ್ರತಿಯೊಂದು ವಿಭಾಗದಲ್ಲೂ ಪ್ರಥಮ, ದ್ವಿತೀಯ ಸ್ಥಾನ ಪಡೆಯುವ ಗೂಡುದೀಪಗಳಿಗೆ ಚಿನ್ನದ ಪದಕ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ಬೆಳ್ಳಿಯ ಪದಕ ಹಾಗೂ ನೂರಕ್ಕಿಂತಲೂ ಹೆಚ್ಚು ಮೆಚ್ಚುಗೆ ಪಡೆದ ಸ್ಪರ್ಧಿಗಳಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು ಎಂದವರು ಹೇಳಿದರು.

ಗೂಡುದೀಪ ಸ್ಪರ್ಧೆಯ ವಿವಿಧ ವಿಭಾಗಗಳ ಸಾಧಕರಿಗೆ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗುತ್ತಿದೆ. ತುಳುನಾಡಿನಲ್ಲಿ ಹುಟ್ಟಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯರಿಗಾಗಿ ನೀಡಲಾಗುವ ‘ನಮ್ಮ ತುಳುವರ್’ ಪ್ರಶಸ್ತಿಗೆ ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಎಂಆರ್‌ಜಿ ಗ್ರೂಪ್‌ನ ಅಧ್ಯಕ್ಷ ಭಾರತ್ ಗೌರವ್ ರತ್ನ ಮೊದಲಾದ ಪ್ರಶಸ್ತಿಗಳನ್ನು ಪಡೆದಿರುವ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿಯವರಿಗೆ ನೀಡಲಾಗುತ್ತದೆ. 40 ವರ್ಷಗಳಿಂದ ಭೂತಾರಾಧನೆಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಜತೆಗೆ ಜನಪದ ವಿದ್ವಾಂಸರಾಗಿ ಗುರುತಿಸಿಕೊಂಡಿರುವ ಜನಪದ ಕಲಾಶ್ರೀ ಬಿರುದಾಂಕಿತ ದೇಜಪ್ಪ ಬಾಚಕೆರೆ, ಶೆಫ್ ಟಾಕ್ ಫುಡ್ ಎಂಡ್ ಹಾಸ್ಪಿಟಾಲಿಟಿ ಸಂಸ್ಥೆ ಕಟ್ಟಿ ಉದ್ಯೋಗ ಮಾಣಕ್ಯ ಪ್ರಶಸ್ತಿ ಪಡೆದಿರುವ ಗೋವಿಂದ ಬಾಬು ಪೂಜಾರಿ, ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರಿಗೆ ‘ನಮ್ಮ ಕುಡ್ಲ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕದ್ರಿ ನವನೀತ ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲೆ ಕೊಡಂಕೂರಿನ ನಾಟಿ ವೈದ್ಯ ಶ್ರೀನಿವಾಸ ಪೂಜಾರಿಗೆ ‘ನಮ್ಮ ಕುಡ್ಲ ನಾಟಿ ವೈದ್ಯ’ ಪ್ರಶಸ್ತಿ, ವಿವೇಕ್ ರಾಜ್ ಪೂಜಾರಿಗೆ ‘ನಮ್ಮ ಕುಡ್ಲ ಯುವ ಉದ್ಯಮಿ’ ಪ್ರಶಸ್ತಿ, ವಿಶ್ವ ಹಿಂದೂ ಪರಿಷತ್ ಬಜರಂಗದಳಕ್ಕೆ ‘ಬಿ.ಪಿ. ಕರ್ಕೇರ ಸೇವಾ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಮಾರಂಭ ಅಂದು ಸಂಜೆ 4 ಗಂಟೆಗೆ ಆರಂಭವಾಗಲಿದೆ ಎಂದು ಕದ್ರಿ ನವನೀತ ಶೆಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸುರೇಶ್ ಬಿ. ಕರ್ಕೇರ, ಮೋಹನ್ ಬಿ. ಕರ್ಕೇರ, ಲೀಲಾಕ್ಷ ಬಿ. ಕರ್ಕೇರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X