Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯೋತ್ಸವ, ದೀಪಾವಳಿಗೆ ಮಾರ್ಗಸೂಚಿ...

ರಾಜ್ಯೋತ್ಸವ, ದೀಪಾವಳಿಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಹಸಿರು ಪಟಾಕಿಗೆ ಮಾತ್ರ ಅವಕಾಶ

ವಾರ್ತಾಭಾರತಿವಾರ್ತಾಭಾರತಿ30 Oct 2021 3:18 PM IST
share
ರಾಜ್ಯೋತ್ಸವ, ದೀಪಾವಳಿಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು: ಕೊರೋನ ಹಿನ್ನೆಲೆ ದೀಪಾವಳಿ, ಕನ್ನಡ ರಾಜ್ಯೋತ್ಸವ ಆಚರಣೆಗೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. 

ಕೋವಿಡ್ ಸಂಭವನೀಯ ಮೂರನೇ ಅಲೆ ಮತ್ತು ರೂಪಾಂತರ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಬೇಕು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಅನುಮತಿಸಿರುವ ‘ಹಸಿರು ಪಟಾಕಿ'ಗಳನ್ನು ಬಿಟ್ಟು ಉಳಿದ ಇತರೆ ಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ ಮತ್ತು ಹಚ್ಚತಕ್ಕದ್ದಲ್ಲ. ಹಬ್ಬದ ಸಂದರ್ಭದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು. ಸಂಬಂಧಪಟ್ಟ ಇಲಾಖೆ ಮತ್ತು ಪ್ರಾಧಿಕಾರದಿಂದ ಪರವಾನಿಗೆ ಪಡೆದಿರುವ ವ್ಯಾಪಾರಿಗಳು ‘ಹಸಿರು ಪಟಾಕಿ'ಗಳನ್ನು ಮಾತ್ರ ಮಾರಾಟ ಮಾಡತಕ್ಕದ್ದು ಎಂದು ನಿರ್ದೇಶಿಸಲಾಗಿದೆ.

ನವೆಂಬರ್ 1ರಿಂದ 10ರವರೆಗೂ ಮಾತ್ರ ‘ಹಸಿರು ಪಟಾಕಿ'ಗಳ ಮಳಿಗೆಗಳನ್ನು ತೆರೆಯತಕ್ಕದ್ದು. ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಿಗೆಯಲ್ಲಿ ಉಲ್ಲೇಖಿಸಿದ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಹಸಿರು ಪಟಾಕಿ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳಗಳಲ್ಲಿ ಹಾಗೂ ದಿನಾಂಕಗಳಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯುವಂತಿಲ್ಲ.

ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಹಾಗೂ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯುವುದಕ್ಕೆ ಮಾತ್ರ ಸಂಬಂಧಿತ ಅಧಿಕಾರಿಗಳು ಹಾಗೂ ಪ್ರಾಧಿಕಾರಗಳು ಅನುಮತಿ ನೀಡಬೇಕು. ಪಟಾಕಿ ಮಳಿಗೆಗಳಲ್ಲಿ ಎರಡೂ ಕಡೆಗಳಿಂದ ಸರಾಗವಾಗಿ ಗಾಳಿ ಆಡುವಂತಿರಬೇಕು. ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಯ ನಡುವೆ ಕನಿಷ್ಠ 6 ಮೀಟರ್ ಅಂತರವಿರಬೇಕು. ಪ್ರತಿಯೊಂದು ಮಳಿಗೆಯಲ್ಲಿ ಸಂಬಂಧಿಸಿದ ಇಲಾಖೆ ಅಥವಾ ಪ್ರಾಧಿಕಾರವು ನೀಡಿರುವ ಪರವಾನಿಗೆ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಪರವಾನಿಗೆ ಪಡೆದವರು ಕಡ್ಡಾಯವಾಗಿ ಮಳಿಗೆಯಲ್ಲಿ ಹಾಜರಿರಬೇಕು.

‘ಹಸಿರು ಪಟಾಕಿ' ಮಾರಾಟ ಮಾಡುವ ಪ್ರತಿಯೊಂದು ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ಅಂತರವನ್ನು ಗುರುತು ಮಾಡುವುದು. ಅಂತರ ನಿಯಮ ಪಾಲನೆ ಆಗುವಂತೆ ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕು.

ಪಟಾಕಿ ಮಾರಾಟ ಮಾಡುವ ವ್ಯಾಪಾರಸ್ಥರು ಹಾಗೂ ಖರೀದಿಗೆ ಆಗಮಿಸುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ‘ಹಸಿರು ಪಟಾಕಿ' ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು. ಹಸಿರು ಪಟಾಕಿ ಕುರಿತು ಸರಕಾರದ ಆದೇಶ ಸಂಖ್ಯೆ ಆರ್‍ಡಿ 465 ಟಿಎನ್‍ಆರ್ 2020, 2020ರ ನವೆಂಬರ್ 11ರಂದು ನೀಡಲಾದ ವಿವರಣೆಯನ್ನು ಅನುಸರಿಸುವುದು.

ನಾಡ ಹಬ್ಬ ಕನ್ನಡ ರಾಜ್ಯೋತ್ಸವಕ್ಕೆ ಮಾರ್ಗಸೂಚಿ

ರಾಜ್ಯೋತ್ಸವ ಅವಧಿಯಲ್ಲಿ ಜನ ಸಂಚಾರ ಮತ್ತು ಜನರ ಒಗ್ಗೂಡುವಿಕೆ ಮತ್ತು ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು, ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುತ್ತದೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ವರ್ಷದ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಮತ್ತು ಗೌರವಪೂರ್ವಕವಾಗಿ ಆಚರಿಸುವುದು. ಕನ್ನಡ ರಾಜ್ಯೋತ್ಸವ ಸಮಾರಂಭದ ಆಚರಣೆಯ ವೇಳೆ ರಾಜ್ಯಾದ್ಯಂತ ಧ್ವಜಾರೋಹಣ ಸ್ಥಳದಲ್ಲಿ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಬಳಕೆ ಮತ್ತು ಸ್ಪ್ಯಾನಿಟೈಸರ್‍ಗಳನ್ನು ಬಳಸುವ ಷರತ್ತಿಗೆ ಒಳಪಟ್ಟು ಗರಿಷ್ಠ 500 ಜನರು ಸೇರಲು ಮಾತ್ರ ಅನುಮತಿಸಿದೆ.

ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ರಾಜ್ಯೋತ್ಸವ ಆಚರಣೆಯು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗೌರವಪೂರ್ವಕವಾಗಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.

ರಾಜ್ಯದಲ್ಲಿನ ಸಂಘ-ಸಂಸ್ಥೆಗಳು ರಾಜ್ಯೋತ್ಸವ ಆಚರಣೆಗೆ ಪೊಲೀಸ್/ಮಹಾನಗರ ಪಾಲಿಕೆ/ಸ್ಥಳೀಯ ಸಂಸ್ಥೆ/ವಿದ್ಯುತ್ ಇಲಾಖೆ/ಆರೋಗ್ಯ ಇಲಾಖೆ/ಅಗ್ನಿಶಾಮಕ ಇಲಾಖೆ/ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಇತರೆ ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಸಾಂಸ್ಕೃತಿಕ/ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕನಿಷ್ಠ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸಣ್ಣ ಮಕ್ಕಳು, ಹಿರಿಯ ನಾಗರಿಕರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ರಾಜ್ಯೋತ್ಸವದಲ್ಲಿ ಭಾಗವಹಿಸದಂತೆ ಎಚ್ಚರವಹಿಸಬೇಕು. ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು, ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೆ, ಜನರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ, ಪೊಲೀಸ್, ಮಹಾನಗರ ಪಾಲಿಕೆ, ಅಗ್ನಿಶಾಮಕ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಕೃತಿ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲ್ಲ ಆದೇಶ/ ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಿ.ರವಿಕುಮಾರ್ ತಮ್ಮ ಆದೇಶದಲ್ಲಿ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X