Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ...

ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ 2021-22ನೆ ಸಾಲಿನ 194 ಕಾಮಗಾರಿಗಳಲ್ಲಿ 24 ಪೂರ್ಣ: ರತ್ನಾಕರ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ30 Oct 2021 6:00 PM IST
share
ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ 2021-22ನೆ ಸಾಲಿನ 194 ಕಾಮಗಾರಿಗಳಲ್ಲಿ 24 ಪೂರ್ಣ: ರತ್ನಾಕರ ಹೆಗ್ಡೆ

ಮಂಗಳೂರು, ಅ.30: ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ 2021-22ನೇ ಸಾಲಿನಲ್ಲಿ ವಾರ್ಷಿಕ ನಿಗದಿತ 194 ಕಾಮಗಾರಿಗಳಲ್ಲಿ 24 ಪೂರ್ಣಗೊಂಡಿದ್ದು, 170 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು.

ಕಾಮಗಾರಿಗಳ ಪೈಕಿ 35 ಕಾಲುಸಂಕ, 11 ಮೀನು ಮಾರುಕಟ್ಟೆ, 2 ಅಂಗನವಾಡಿ, 92 ರಸ್ತೆ ನಿರ್ಮಾಣ, 13 ತಡೆಗೋಡೆ, ಆವರಣ ಗೋಡೆ, 6 ಸಮುದಾಯ/ ಸಭಾಭವನ, ಯಾತ್ರಿ ನಿವಾಸ, 4 ಬಸ್ ನಿಲ್ದಾಣ, 3 ಸ್ಮಶಾನ, 2 ಶಾಲಾ ಕೊಠಡಿ, 7 ವಾಣಿಜ್ಯ ಸಂಕೀರ್ಣ/ ಥೀಂ ಪಾರ್ಕ್, ರಂಗಮಂದಿರ, 1 ತೂಗುಸೇತುವೆ, 17 ಚಂರಂಡಿ, ಕೆರೆ, ಇಂಟರ್‌ಲಾಕ್, ಶೌಚಾಲಯ, 1 ಹೈಮಾಸ್ಕ್ ಲೈಟ್ ಕಾಮಗಾರಿ ಒಳಗೊಂಡಿದೆ. ಇದರಲ್ಲಿ ನಾಲ್ಕು ಮೀನು ಮಾರುಕಟ್ಟೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

2021-22ನೇ ಸಾಲಿಗೆ ಹೆಚ್ಚುವರಿ ಕಾಮಗಾರಿಗಳಿಗಾಗಿ 150 ಕೋಟಿ ರೂ. ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ ಒಣಮೀನು ಸಂಸ್ಕರಣಾ ಘಟಕ, ಕಾಪು ದೀಪಸ್ತಂಭ ಅಭಿವೃದ್ಧಿ, ಡಿಜಿಟಲ್ ಸೈನೇಜ್ ಬೋರ್ಡ್ ಅಳವಡಿಕೆ, ಬಹು ಹಂತಗಳ ಕಾರ್ ಪಾರ್ಕಿಂಗ್ ನಿರ್ಮಾಣ ಮುಂತಾದ ವಿನೂತನ ಯೋಜನೆಗಳ ಪ್ರಾಸ್ತಾಪವಿದೆ. ಗೋವಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ ಮೂಲಕ ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಮುದ್ರ ನೀರಿನ ಗುಣಮಟ್ಟದ ವಿಶ್ಲೇಷಣೆ ನಡೆಸಲು ಯೋಜಿಸಲಾಗಿದೆ. ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಲಾಗಿದೆ. ಈ ಯೋಜನೆ ಪ್ರಾಥಮಿಕ ಹಂತದಲ್ಲಿದೆ. ಕರಾವಳಿ ಕರ್ನಾಟಕದಲ್ಲಿ ಕೈಗಾರಿಕೆಗಳು ಮತ್ತು ಹೂಡಿಕೆಗಳನ್ನು ಆಕರ್ಷಿಸಲು ಹೂಡಿಕೆದಾರರ ಸಭೆ ನಡೆಸುವ ಪ್ರಸ್ತಾವನೆಯಿದೆ ಎಂದು ವಿವರಿಸಿದರು.

ಕೇಂದ್ರ ಸರಕಾರದ ಆತ್ಮನಿರ್ಭರ ಭಾರತ್ ಯೋಜನೆಯಡಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ದಗೊಳಿಸುವ ಯೋಜನೆಯಡಿ ‘ಒಂದು ಜಿಲ್ಲೆ ಒಂದು ಉತ್ಪನ್ನ’ ವಿಧಾನ ಅಳವಡಿಸಲಾಗಿದೆ. ಇದರಂತೆ ದ.ಕ. ಮತ್ತು ಉಡುಪಿ ಜಿಲ್ಲೆಗೆ ಸಮುದ್ರ ಆಹಾರ ಮತ್ತು ಸಾಗರ ಉತ್ಪನ್ನ, ಉತ್ತರ ಕನ್ನಡ ಜಿಲ್ಲೆಗೆ ಸಾಂಬಾರು ಪದಾರ್ಥಗಳನ್ನು ಗುರುತಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿ ಪ್ರಾದಿಕಾರವು ಕೃಷಿ ಇಲಾಖೆ, ತೋಟಗಾರಿಕೆ ಹಾಗೂ ಮೀನುಗಾರಿಕಾ ಇಲಾಖೆ ಜತೆ ಕೈಜೋಡಿಸಿದೆ ಎಂದರು.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಆಧುನಿಕ ಕರಾವಳಿ ಮೀನುಗಾರಿಕಾ ಗ್ರಾಮ ನಿರ್ಮಿಸಲು ಮಂಗಳೂರಿನ ಸಸಿಹಿತ್ಲುವಿನಲ್ಲಿ ಮತ್ಸ್ಯ ಗ್ರಾಮ ನಿರ್ಮಾಣ ಯೋಜನೆಗೆ ಕ್ರಮ ಕೈಗೊಳ್ಳಲಾಗಿದೆ. ಯೋಜನೆಗೆ 7.50 ಕೋಟಿ ರೂ. ಮೊತ್ತ ನಿಗದಿಪಡಿಸಲಾಗಿದೆ. 3 ಕೋಟಿ ರೂ. ಮೊತ್ತವನ್ನು ರಾಜ್ಯ ಸರಕಾರ ಭರಿಸಬೇಕಿದೆ. ಮುಂದಿನ ಹಂತದಲ್ಲಿ ಉಡುಪಿಯ ಮಲ್ಪೆ, ಉತ್ತರ ಕನ್ನಡದ ಹೊನ್ನಾವರದಲ್ಲಿ ಮತ್ಸ್ಯ ಗ್ರಾಮ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ವಿವಿಧ ಯೋಜನೆ ಕೈಗೆತ್ತಿಕೊಳ್ಳಲು ಚಿಂತನೆ ನಡೆಸಿದೆ. ಈ ಪೈಕಿ ಕೃಷಿ ಇಲಾಖೆ ಜತೆಗೂಡಿ ಕರಾವಳಿಯ ಕುಚ್ಚಲಕ್ಕಿಗೆ ಜಿಯೋ ಟ್ಯಾಗಿಂಗ್ ಕೂಡಾ ಸೇರಿದೆ. ಬೆಟ್ಟಂಪಾಡಿಯಲ್ಲಿ 30 ಲಕ್ಷ ವೆಚ್ಚದಲ್ಲಿ ತೂಗುಸೇತುವೆ, ಮಲ್ಪೆಯಲ್ಲಿ ಸೋಲಾರ್ ವ್ಯವಸ್ಥೆಯಲ್ಲಿ ಮೀನು ಒಣಗಿಸುವ ಯೋಜನೆ, ಮಿಯಾವಾಕಿ ಮಾದರಿಯ ನಗರ ಅರಣ್ಯ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದರು.

ಪ್ರಾಧಿಕಾರದ ಸದಸ್ಯೆಯಾದ ಕೇಸರಿ ಯುವರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X