ಜಮ್ಮು-ಕಾಶ್ಮೀರ: ನೆಲಬಾಂಬ್ ಸ್ಫೋಟದಲ್ಲಿ ಇಬ್ಬರು ಸೈನಿಕರು ಹುತಾತ್ಮ

ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ ನೌಶೇರಾ-ಸುಂದರ್‌ಬಾನಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಬಳಿ ನಡೆದ ನೆಲಬಾಂಬ್ ಸ್ಫೋಟದಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಹಾಗೂ ಮೂವರು ಗಾಯಗೊಂಡಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ಎಲ್‌ಒಸಿ ಬಳಿ ಗಸ್ತು ನಿರತ ಯೋಧರು ನೆಲ ಬಾಂಬಿನ ಮೇಲೆ ಕಾಲಿಟ್ಟಿದ್ದರು. ಪರಿಣಾಮವಾಗಿ ಓರ್ವ ಅಧಿಕಾರಿ, ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಘಟನೆಯಲ್ಲಿ ಗಾಯಗೊಂಡವರನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
"ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ndtv ವರದಿ ಮಾಡಿದೆ.
Next Story





