ಉಡುಪಿ: ಬಹುಮಾನ ನಂಬಿ ಲಕ್ಷಾಂತರ ರೂ. ಹಣ ಕಳೆದುಕೊಂಡ ವ್ಯಕ್ತಿ!

ಉಡುಪಿ, ಅ.30: ಬಹುಮಾನ ಸಿಕ್ಕಿರುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿವಾಕರ್ ಎಂಬವರ ವಾಟ್ಸಾಪ್ ನಂಬರಿಗೆ ಅಪರಿಚಿತ ವ್ಯಕ್ತಿಗಳು ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ತಿಳಿಸಿದರು. ಈ ಬಗ್ಗೆ ದಾಖಲಾತಿಗಳನ್ನು ವಾಟ್ಸಾಪ್‌ಗೆ ಕಳುಹಿಸಿ ದಿವಾಕರ್ ಅವರನ್ನು ನಂಬಿಸಿದರು. ನಂತರ ದೂರವಾಣಿ ಕರೆ ಮಾಡಿ, ವಿವಿಧ ಇಲಾಖೆಯ ಅಧಿಕಾರಿಗಳೆಂದು ನಂಬಿಸಿ ಬಹುಮಾನದ ಮೊತ್ತಕ್ಕೆ ಡಿಪಾಸಿಟ್ ಹಣವನ್ನು ಕಟ್ಟುವಂತೆ ತಿಳಿಸಿದರು. ಅದರಂತೆ ದಿವಾಕರ್, ಒಟ್ಟು 5,63,150ರೂ. ಹಣವನ್ನು ಡಿಪಾಸಿಟ್ ಮಾಡಿದರು. ಆದರೆ ಆ ವ್ಯಕ್ತಿಗಳು ದಿವಾಕರ್‌ಗೆ ಬಹುಮಾನದ ಹಣವನ್ನು ನೀಡದೆ, ಡಿಪಾಸಿಟ್ ಮಾಡಿಸಿಕೊಂಡ ಹಣವನ್ನು ಕೂಡ ವಾಪಾಸ್ಸು ನೀಡದೆ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
Next Story





