Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಾಮಾಣಿಕತೆ, ಸಮಯಪ್ರಜ್ಞೆಯಿಂದ ಕರ್ತವ್ಯ...

ಪ್ರಾಮಾಣಿಕತೆ, ಸಮಯಪ್ರಜ್ಞೆಯಿಂದ ಕರ್ತವ್ಯ ನಿರ್ವಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕಿವಿ ಮಾತು

ವಾರ್ತಾಭಾರತಿವಾರ್ತಾಭಾರತಿ31 Oct 2021 9:35 PM IST
share
ಪ್ರಾಮಾಣಿಕತೆ, ಸಮಯಪ್ರಜ್ಞೆಯಿಂದ ಕರ್ತವ್ಯ ನಿರ್ವಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕಿವಿ ಮಾತು

ಬೆಂಗಳೂರು, ಅ. 31: ‘ಜನರಿಗೆ ಒಳಿತಾಗುವ ಕೆಲಸವನ್ನು ದಕ್ಷತೆ, ಪ್ರಾಮಾಣಿಕತೆ, ನಿಗದಿತ ಸಮಯದಲ್ಲಿ ಸ್ಥಿತಪ್ರಜ್ಞೆ ಮತ್ತು ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ರವಿವಾರ ವಿಧಾನಸೌಧದಲ್ಲಿ ‘ರಾಷ್ಟ್ರೀಯ ಏಕತಾ ದಿವಸ'ದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ  ಮಾತನಾಡಿದ ಅವರು, ‘ವಿಧಾನಸೌಧ ಒಂದು ಶಕ್ತಿ ಕೇಂದ್ರ. ನಾವೆಲ್ಲರೂ ಸರಕಾರದ ಒಂದು ಭಾಗವಾಗಿದ್ದೇವೆ' ಎಂದರು.

‘ಜನತಂತ್ರದ ಮುಖಾಂತರ ಜನರ ಶ್ರೇಯೋಭಿವೃದ್ಧಿಗೆ ನಾವೆಲ್ಲರೂ ದುಡಿಯಬೇಕಿದೆ. ನಮ್ಮೆಲ್ಲರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಜನರ ಏಳಿಗೆಗಾಗಿ ದುಡಿದಾಗ ಮಾತ್ರ ಸರಕಾರಿ ಕೆಲಸ, ದೇವರ ಕೆಲಸ ಎಂಬುದು ಸಾರ್ಥಕವಾಗುತ್ತದೆ. ಹೀಗಾಗಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸಲಹೆ ಮಾಡಿದರು.

ಪಟೇಲ್ ದಿಟ್ಟ ಧೀಮಂತ ಮತ್ತು ದಕ್ಷ ನಾಯಕ: ‘ವಿವಿಧ ಭಾಷೆ ಪ್ರಾಂತ್ಯಗಳಲ್ಲಿ ಹಂಚಿ ಹೋಗಿದ್ದ ಈ ದೇಶವನ್ನು ಒಗ್ಗೂಡಿಸಿ ಗಣರಾಜ್ಯವನ್ನಾಗಿಸಿ, ಜನತಾಂತ್ರಿಕ ವ್ಯವಸ್ಥೆಯನ್ನು ತರುವಲ್ಲಿ ಪಟೇಲರ ಪಾತ್ರ ಬಹಳ ಹಿರಿದಾಗಿದೆ. ಇಡೀ ದೇಶದ ರೈತ ಭಾಂಧವರು ಮತ್ತು ಕಾರ್ಮಿಕ ವರ್ಗದವರಲ್ಲಿ ಜಾಗೃತಗೊಂಡು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸುವಲ್ಲಿ ಪಟೇಲರು ಪ್ರಮುಖ ಪಾತ್ರ ವಹಿಸಿದ್ದಾರೆ.

ಗುಜರಾತ್‍ನ ಬಾರ್ಡೋಲಿ ರೈತ ಸತ್ಯಾಗ್ರಹ ಹಾಗೂ ಬಿಹಾರದ ಚಂಪಾರಣ್ ಪ್ಲಾಂಟೇಷನ್ ಕಾರ್ಮಿಕರ ಸತ್ಯಾಗ್ರಹದ ನೇತೃತ್ವವನ್ನು ವಹಿಸಿದ ಪಟೇಲರು ಬ್ರಿಟೀಷರು ಈ ದೇಶವನ್ನು ಬಿಟ್ಟುತೊಲಗುವಂತೆ ಮಾಡಿದರು. ಪಟೇಲರ ಸಂಘತನಾತ್ಮಕ ಶಕ್ತಿಯನ್ನು ಈ ದೇಶ ಗುರುತಿಸುತ್ತಿದೆ ಎಂದ ಅವರು, ದೇಶದಲ್ಲಿ ವಿವಿಧ ಭಾಷೆ, ಭೌಗೋಳಿಕವಾಗಿ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ವಿವಿಧ ರಾಜ್ಯಗಳಾಗಿದ್ದರೂ, ಇಡೀ ದೇಶ ಏಕತೆ ಮತ್ತು ಅಖಂಡತೆಯಿಂದಿರುವುದು ಬಹಳ ಮುಖ್ಯ. ಈ ದೇಶದ ಗಡಿಗಳಲ್ಲಿನ ಸವಾಲುಗಳನ್ನು ಎದುರಿಸಬೇಕಾದರೆ ಆಂತರಿಕವಾಗಿ ಏಕತೆ, ಅಖಂಡತೆಯನ್ನು ಮತ್ತು ಭದ್ರತೆ ಇರುವುದು ಬಹಳ ಅವಶ್ಯಕ. ಆ ನಿಟ್ಟಿನಲ್ಲಿ ಪಟೇಲರ ಕಾರ್ಯವನ್ನು ಸ್ಮರಿಸುತ್ತೇವೆ ಎಂದು ನೆನಪು ಮಾಡಿಕೊಂಡರು.

ಸ್ವಾವಲಂಬಿ ಭಾರತ: ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ನಡೆದ ಪ್ರಮುಖ ಘಟನಾವಳಿಗಳಲ್ಲಿ ಹಸಿರು ಕ್ರಾಂತಿ ಪ್ರಮುಖವಾದದ್ದು. ದೇಶದಲ್ಲಿ 30 ಕೋಟಿ ಇದ್ದ ಜನಸಂಖ್ಯೆ 130 ಕೋಟಿ ಆದರೂ ಎಲ್ಲರಿಗೂ ಅನ್ನ ಬೆಳೆದು ಸ್ವತಂತ್ರ, ಸ್ವಾಭಿಮಾನಿ ಹಾಗೂ ಸ್ವಾವಲಂಬಿ ದೇಶವಾಗಿದೆ. ಇಂದು ರಾಷ್ಟ್ರೀಯ ಏಕತಾ ದಿನದಂದು ಸ್ಮರಿಸಿಕೊಂಡು ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರು ನಡೆಯಬೇಕಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X