ಕೃಷಿ ಕಾಯ್ದೆ ನ.26ರೊಳಗೆ ಹಿಂಪಡೆಯದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು:ಟಿಕಾಯತ್ ಎಚ್ಚರಿಕೆ

ಹೊಸದಿಲ್ಲಿ: ಕೇಂದ್ರ ಸರಕಾರವು ವಿವಾದಾತ್ಮಕ ಕೃಷಿ ಕಾನೂನನ್ನು ನವೆಂಬರ್ 26 ರೊಳಗೆ ಹಿಂತೆಗೆದುಕೊಳ್ಳದಿದ್ದರೆ ದಿಲ್ಲಿ ಗಡಿಯಲ್ಲಿ ಪ್ರತಿಭಟನೆಯನ್ನು ತೀವ್ರ ಗೊಳಿಸಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸೋಮವಾರ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮೂರು ಕೃಷಿ ಕಾನೂನುಗಳ ವಿರುದ್ಧ ಕೃಷಿ ಆಂದೋಲನ ಆರಂಭವಾಗಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥರು ಹೊಸ ಎಚ್ಚರಿಕೆ ನೀಡಿದ್ದಾರೆ.
"ಕೇಂದ್ರ ಸರಕಾರಕ್ಕೆ ನವೆಂಬರ್ 26 ರವರೆಗೆ ಸಮಯವಿದೆ., ಅದರ ನಂತರ ನವೆಂಬರ್ 27 ರಿಂದ ರೈತರು ಹಳ್ಳಿಗಳಿಂದ ಟ್ರ್ಯಾಕ್ಟರ್‌ಗಳ ಮೂಲಕ ದಿಲ್ಲಿಯ ಸುತ್ತಲಿನ ಪ್ರತಿಭಟನಾ ಸ್ಥಳಗಳಲ್ಲಿ ತಲುಪುತ್ತಾರೆ ಹಾಗೂ ಘನ ಕೋಟೆಗಳೊಂದಿಗೆ ಪ್ರತಿಭಟನೆಯ ಸ್ಥಳವನ್ನು ಬಲಪಡಿಸುತ್ತಾರೆ" ಎಂದು ಟಿಕಾಯತ್ ಟ್ವೀಟ್ ಮಾಡಿದ್ದಾರೆ.
ಟಿಕಾಯತ್ ಎರಡು ದಿನಗಳಲ್ಲಿ ಇದು ಎರಡನೇ ಬಾರಿ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ. ದಿಲ್ಲಿ ಗಡಿಯಿಂದ ಪ್ರತಿಭಟನಾಕಾರರನ್ನು ಬಲವಂತವಾಗಿ ತೆಗೆದುಹಾಕಲು ಪ್ರಯತ್ನಿಸಿದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಟಿಕಾಯತ್ ರವಿವಾರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು.