Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಸರಾ ಮಹೋತ್ಸವಕ್ಕೆ 5.42ಕೋಟಿ ರೂ....

ದಸರಾ ಮಹೋತ್ಸವಕ್ಕೆ 5.42ಕೋಟಿ ರೂ. ವೆಚ್ಚ: ಎರಡನೇ ಬಾರಿ ಮಾಹಿತಿ ಬಿಡುಗಡೆ ಮಾಡಿದ ಸಚಿವ ಎಸ್.ಟಿ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ1 Nov 2021 1:54 PM IST
share
ದಸರಾ ಮಹೋತ್ಸವಕ್ಕೆ 5.42ಕೋಟಿ ರೂ. ವೆಚ್ಚ: ಎರಡನೇ ಬಾರಿ ಮಾಹಿತಿ ಬಿಡುಗಡೆ ಮಾಡಿದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು : 2021ರ ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು 57 ಲಕ್ಷ ರೂ.ಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಖರ್ಚುವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.

ನಾಡಹಬ್ಭ ಮೈಸೂರು ದಸರಾ ಮಹೋತ್ಸವದ ಇತಿಹಾಸದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಖರ್ಚುವೆಚ್ಚಗಳ ಸಂಪೂರ್ಣ ಮಾಹಿತಿಯನ್ನು  ಅರಮನೆ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದರು.‍‌‌

ಮೈಸೂರು ದಸರಾಗೆ 4,22,07,679 ರೂ., ಖರ್ಚಾಗಿದೆ. ಶ್ರೀರಂಗಪಟ್ಟಣ, ಚಾಮರಾಜನಗರ ದಸರಾ ಆಚರಣೆಗೆ ತಲಾ 50 ಲಕ್ಷ ರೂ., ಅರಕಲಗೂಡು ದಸರಾಗೆ 20 ಲಕ್ಷ ರೂ. ಬಿಡುಗಡೆ ಮಾಡಿದ್ದು ಒಟ್ಡು 5,42,07,679 ರೂ. ಹಣ ಖರ್ಚಾಗಿದೆ ಎಂದು  ವಿವರಿಸಿದರು.

ಮೈಸೂರು ದಸರಾ ಆಮಂತ್ರಣ ಪತ್ರಿಕೆ, ಮುದ್ರಣ ಇತ್ಯಾದಿಗಳಿಗೆ 5,91,960 ರೂ. ಖರ್ಚಾಗಿದ್ದರೆ,  ಗಣ್ಯರು ಮತ್ತು ಕಲಾವಿದರ ಸಾರಿಗೆ ವ್ಯವಸ್ಥೆಗೆ 29,16,416 ರೂ. ಖರ್ಚಾಗಿದೆ. ಜಂಬೂಸವಾರಿ ಮೆರವಣಿಗೆಗೆ 37,50,772 ರೂ., ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕಲಾವಿದರ ಸಂಭಾವನೆಗೆ 1,03,64,272 ರೂ. ಖರ್ಚಾಗಿದೆ. ಸ್ತಬ್ಧ ಚಿತ್ರ ನಿರ್ಮಾಣಕ್ಕೆ 18,85,102 ರೂ., ಆನೆಗಳ‌ ನಿರ್ವಹಣೆಗೆ 50 ಲಕ್ಷ ರೂ., ದಸರಾ ಕಾರ್ಯಕ್ರಮಗಳ ವೇದಿಕೆ ಮತ್ತು ವಿದ್ಯುತ್ ಕಾಮಗಾರಿಗಳ ವ್ಯವಸ್ಥೆಗಾಗಿ 93,80,000 ರೂ., ವೆಬ್ ಕ್ಯಾಸ್ಟಿಂಗ್ ಗೆ 11,09,200 ರೂ. ವೆಚ್ಚವಾಗಿದೆ. ಅರಮನೆಗೆ ಗೌರವ ಸಂಭಾವನೆಯಾಗಿ 40 ಲಕ್ಷ ರೂ., ದೂರದರ್ಶನದಲ್ಲಿ ಜಂಬೂಸವಾರಿ ನೇರಪ್ರಸಾರ ಮಾಡಿದ್ದಕ್ಕೆ 6,22,513 ರೂ., ದಸರಾ ಆನೆಗಳು ಹಾಗೂ ಕಾವಾಡಿಗರ ವಿಮೆಗೆ 24 ಸಾವಿರ ರೂ. ಭರಿಸಲಾಗಿದೆ.

ದಸರಾ ಸಂಬಂಧ ಉಪ ಸಮಿತಿ ಸಭೆಗೆ ಲೇಖನ ಸಾಮಾಗ್ರಿಗೆ 3245 ರೂ., ಉನ್ನತ ಮಟ್ಟದ ಸಮಿತಿ ಸಭೆ ಶಿಷ್ಟಾಚಾರಕ್ಕೆ ಹೋಟೆಲ್ ಮತ್ತು ಇತರೆ ವೆಚ್ಚಗಳಿಗೆ 47250 ರೂ., ದಸರಾ ಸಂಬಂಧ ನಡೆದ ವಿವಿಧ ಸಭೆಗಳಿಗೆ ಕಾಫಿ, ಟೀ, ಸ್ಮ್ಯಾಕ್ಸ್ ಗೆ 40,878 ರೂ., ಬಿಎಸ್ ಎನ್ ಎಲ್ ಗೆ 78,668 ರೂ., ಉನ್ನತ ಮಟ್ಟದ ಸಭೆಗೆ ಮತ್ತು ವಿಶೇಷಾಧಿಕಾರಿಗಳ ಕಚೇರಿಗೆ ಲೇಖನ ಸಾಮಾಗ್ರಿ ಖರೀದಿಗೆ 90,919 ರೂ., ಜಂಬೂ ಸವಾರಿ ನೇರ ವೀಕ್ಷಣೆ ವಿವರಣೆ ಬಿತ್ತರಿಸಲು ಆಕಾಶವಾಣಿಗೆ 67 ಸಾವಿರ ರೂ. ಪಾವತಿಸಲಾಗಿದೆ.

ದಸರಾ ಕಾರ್ಯಕ್ರಮಗಳ ಫೋಟೋ, ವೀಡಿಯೋಗ್ರಾಫಿಗೆ 95 ಸಾವಿರ ರೂ., ಸ್ವಚ್ಛತೆ ನಿರ್ವಹಣೆಗೆ 10,76,072 ರೂ., ವಾರ್ತಾ ಇಲಾಖೆಗೆ 64,412 ರೂ., ದಸರಾ ರಂಗೋತ್ಸವ ಕಾರ್ಯಕ್ರಮಕ್ಕೆ  ಅಂದಾಜು 10 ಲಕ್ಷ ರೂ.  ವೆಚ್ಚವಾಗಿದೆ ಎಂದು ಸಚಿವರು ಮಾಹಿತಿ ಬಿಡುಗಡೆ ಮಾಡಿದರು.

ಮಳೆಹಾನಿ ಕುರಿತು ನೀಲನಕ್ಷೆ

ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಲಾವಿದರಿಗೆ ವೇದಿಕೆ ಮೇಲೆಯೇ ಸನ್ಮಾನಿಸಿ ನೇರವಾಗಿ ಚೆಕ್ ವಿತರಣೆ ಮಾಡಲಾಗಿದೆ. ಶಾಶ್ವತ ದೀಪಾಲಂಕಾರ ಪ್ರದರ್ಶನ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಈ ಕುರಿತು ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಆಗಿರುವ ಹಾನಿ, ಅನಾಹುತಗಳ ಬಗ್ಗೆ ಮುಖ್ಯಮಂತ್ರಿಗಳ‌ ಗಮನಕ್ಕೆ ತರಲಾಗುವುದು. ಈ ಕುರಿತು ನೀಲನಕ್ಷೆ ತಯಾರಿಸಲಾಗಿದ್ದು ಅದನ್ನು ಸಿಎಂಗೆ ನೀಡಲಾಗುವುದು ಎಂದು ಹೇಳಿದರು.

ಹಾಲಿಗೆ ನೀರು ಬೆರೆಸಿದ ಪ್ರಕರಣ ತನಿಖೆ ಹೊಣೆಯನ್ನು ಸಿಒಡಿಗೆ ವಹಿಸಲಾಗಿದೆ. ಮೂರ್ನಾಲ್ಕು ದಿನದಲ್ಲಿ ಸಿಒಡಿ ವರದಿ ಸಲ್ಲಿಕೆಯಾಗಲಿದೆ. ಇದರ ಜೊತೆಗೆ ಸಹಕಾರಿ ಇಲಾಖೆ ಕೂಡ ವರದಿ ಸಿದ್ಧಪಡಿಸಿದ್ದು ಎರಡನ್ನು ಪರಾಮರ್ಶಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ನಾಗೇಂದ್ರ, ಮೂಡಾ ಅಧ್ಯಕ್ಷ ರಾಜೀವ್, ಮೇಯರ್ ಸುನಂದಾ ಪಾಲನೇತ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೊಲೀಸ್ ಆಯುಕ್ತ ಚಂದ್ರಗುಪ್ತ, ಎಸ್ ಪಿ ಆರ್.ಚೇತನ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಪಂ ಸಿಇಓ ಯೋಗೇಶ್ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X