Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ...

ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ ಕನ್ನಡ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ1 Nov 2021 5:12 PM IST
share
ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ ಕನ್ನಡ: ಕುಮಾರಸ್ವಾಮಿ

ಬೆಂಗಳೂರು, ನ. 1: ‘ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ‘1,500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ  ಜೀವಭಾಷೆ' ಎಂದು ಬಣ್ಣಿಸಿದ್ದಾರೆ.

‘ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್ ರಾಜಕುಮಾರ್ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ' ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

‘ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X