Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುನೀತ್ ಕಣ್ಣುಗಳು ಯಶಸ್ವಿ ಜೋಡಣೆ: ಯುವತಿ...

ಪುನೀತ್ ಕಣ್ಣುಗಳು ಯಶಸ್ವಿ ಜೋಡಣೆ: ಯುವತಿ ಸೇರಿ ನಾಲ್ವರಿಗೆ ದೃಷ್ಟಿ ಭಾಗ್ಯ

ವಾರ್ತಾಭಾರತಿವಾರ್ತಾಭಾರತಿ1 Nov 2021 6:49 PM IST
share
ಪುನೀತ್ ಕಣ್ಣುಗಳು ಯಶಸ್ವಿ ಜೋಡಣೆ: ಯುವತಿ ಸೇರಿ ನಾಲ್ವರಿಗೆ ದೃಷ್ಟಿ ಭಾಗ್ಯ

ಬೆಂಗಳೂರು, ನ.1: ನಟ ಪುನೀತ್ ರಾಜ್‍ಕುಮಾರ್ ಅವರ ಕಣ್ಣುಗಳನ್ನು ಯುವತಿ ಸೇರಿ ನಾಲ್ವರಿಗೆ ಜೋಡಿಸಲಾಗಿದ್ದು, ಇದರಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ ನೇತ್ರಾಲಯದ ಡಾ.ಭುಜಂಗ ಶೆಟ್ಟಿ ತಿಳಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಒಂದೇ ದಿನ ಒಬ್ಬರ ಕಣ್ಣನ್ನು ನಾಲ್ವರಿಗೆ ಕಸಿ ಮಾಡಿರುವುದು ರಾಜ್ಯದಲ್ಲಿ ಇದೇ ಮೊದಲು. ಕಣ್ಣಿನ ಕಾರ್ನಿಯಾದ ಮುಂದಿನ ಮತ್ತು ಹಿಂದಿನ ಪದರಗಳನ್ನು ಬೇರ್ಪಡಿಸುವ (ಸೀಳುವ) ಮೂಲಕ ಪ್ರತಿ ಕಣ್ಣಿನಿಂದ ತಲಾ ಇಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡಲು ನಾವು ಬಳಸಿದ್ದೇವೆ ಎಂದರು.

ಕಣ್ಣಿನ ಮೇಲ್ಪದರದ ಕಾರ್ನಿಯಲ್ ಕಾಯಿಲೆ ಇರುವ ಇಬ್ಬರು ರೋಗಿಗಳಿಗೆ ಮೇಲ್ಪದರವನ್ನು ಕಸಿ ಮಾಡಲಾಗಿದೆ. ಆಳವಾದ ಪದರವನ್ನು ಮಾತ್ರ ಎಂಡೋಥೀಲಿಯಲ್ ಅಥವಾ ಆಳವಾದ ಕಾರ್ನಿಯಲ್ ಪದರದ ಕಾಯಿಲೆ ಇರುವ ರೋಗಿಗಳಿಗೆ ಕಸಿ ಮಾಡಲಾಗಿದೆ. ಆದ್ದರಿಂದ, ನಾಲ್ಕು ವಿಭಿನ್ನ ರೋಗಿಗಳಿಗೆ ದೃಷ್ಟಿ ಪುನಃಸ್ಥಾಪಿಸಲು ನಾವು ಎರಡು ಕಾರ್ನಿಯಾಗಳಿಂದ ನಾಲ್ಕು ವಿಭಿನ್ನ ಕಸಿಗಳನ್ನು ಮಾಡಿದ್ದೇವೆ ಎಂದು ವಿವರಿಸಿದರು.

ಓರ್ವ ಯುವತಿ ಮತ್ತು ಮೂವರು ಯುವಕರಿಗೆ ಅಪ್ಪು ಅವರ ಕಣ್ಣುಗಳನ್ನು ಜೋಡಿಸಲಾಗಿದೆ. ಸದ್ಯ ನಾಲ್ವರು ಆರೋಗ್ಯವಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕಸಿ ಮಾಡಲು ಬಳಸದ ಲಿಂಬಲ್ ರಿಮ್ (ಕಾರ್ನಿಯಾದ ಸುತ್ತಳತೆಯ ಬಳಿ ಕಣ್ಣಿನ ಬಿಳಿ ಭಾಗ) ಅನ್ನು ಲಿಂಬಾಲ್ ಸ್ಟೆಮ್ ಸೆಲ್ ಹೊಂದಿರುವ ರೋಗಿಗಳಲ್ಲಿ ಬಳಕೆಗಾಗಿ ಇಂಡ್ಯೂಸ್ಡ್ ಪ್ಲುರಿಪೊಟೆಂಟ್ ಸ್ಟೆಮ್ ಸೆಲ್‍ಗಳನ್ನು ಉತ್ಪಾದಿಸಲು ನಮ್ಮ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದ ಅವರು, ರಾಸಾಯನಿಕ ಗಾಯಗಳು ಆಸಿಡ್ ಗಾಯಗಳು ಮತ್ತು ಇತರ ಗಂಭೀರ ಸಮಸ್ಯೆಗಳ ಸಂದರ್ಭ ಇದನ್ನು ಬಳಕೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.

ಡಾ.ರೋಹಿತ್ ಶೆಟ್ಟಿ ಅವರ ನೇತೃತ್ವದಲ್ಲಿ ಡಾ.ಯತೀಶ್ ಶಿವಣ್ಣ, ಡಾ.ಶರೋನ್ ಡಿಸೋಜಾ, ಪ್ರಾರ್ಥನಾ ಭಂಡಾರಿ ಮತ್ತು ಡಾ.ಹರ್ಷ ನಾಗರಾಜ್ ಅವರು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದಾರೆ. ಕಾರ್ನಿಯಾ ತಂಡದ ಡಾ.ಗೈರಿಕ್‍ಕುಂದು ಮತ್ತು ವೀರೇಶ್ ನೆರವು ನೀಡಿದ್ದಾರೆ ಎಂದರು.

165 ಮಂದಿ ನೇತ್ರದಾನ

ಪುನೀತ್ ರಾಜ್‍ಕುಮಾರ್ ಅವರ ದೇಹಾಂತ್ಯದ ಬಳಿಕವೂ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಇದರಿಂದ ಪ್ರೇರಣೆ ಪಡೆದ ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಸೇರಿದಂತೆ 165 ಮಂದಿ ನೇತ್ರದಾನ ಮಾಡಲು ಸಹಿ ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X