ನರಿಮೊಗರು; ರಸ್ತೆ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಪುತ್ತೂರು: ಕಾರು ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಪುತ್ತೂರು- ಸುಬ್ರಹಣ್ಯ ರಸ್ತೆಯ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ಸೋಮವಾರ ನಡೆದಿದೆ.
ಬಂಟ್ವಾಳ ತಾಲೂಕಿನ ಪೇರಮೊಗರು ನಿವಾಸಿ ಸೋಮಶೇಖರ್ ರೈ ಮೃತರು ಎಂದು ಗುರುತಿಸಲಾಗಿದೆ.
ಸವಣೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಗೆ ಸಾಗುತ್ತಿದ್ದ ಆಕ್ಟೀವಾ ನಡುವೆ ಢಿಕ್ಕಿ ಸಂಭವಿಸಿತ್ತು. ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಸೋಮಶೇಖರ್ ರೈ ಅವರನ್ನು ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ತಮ್ಮ ಕಾರಿನಲ್ಲಿ ಮುಕ್ವೆಯ ತನಕ ಕರೆತಂದು ಅಲ್ಲಿ ಆ್ಯಂಬುಲೆನ್ಸ್ ಗೆ ಶಿಫ್ಟ್ ಮಾಡಿದ್ದರು. ಬಳಿಕ ಪುತ್ತೂರಿನ ಆಸ್ಪತ್ರೆಗೆ ತರುತ್ತಿದ್ದ ವೇಳೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story





