ವಿಜ್ಞಾನ, ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ಅಳವಡಿಕೆ ಅಗತ್ಯ: ಎಸಿ ರಾಜು

ಕುಂದಾಪುರ ನ.1: ಕನ್ನಡ ನಾಡು- ನುಡಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ವಿಜ್ಞಾನ ತಂತ್ರಜ್ಞಾನ ವೈದ್ಯಕೀಯ ಕ್ಷೇತ್ರಗಳಲ್ಲಿ ಕನ್ನಡ ಭಾಷೆಯನ್ನು ಅಳವಡಿ ಸಲು, ಪೂರಕ ಸಾಹಿತ್ಯ ಸಂಪನ್ಮೂಲ ಒದಗಿಸಲು ಪ್ರಯತ್ನಶೀಲರಾಗಬೇಕಾಗಿದೆ. ಕನಸು ಭಾವನೆ ಹಾಗೂ ಜೀವನದ ಭಾಷೆ ನಮ್ಮ ಕನ್ನಡ ಎಂದು ಕುಂದಾಪುರ ಉಪ ವಿಭಾಗದ ಸಹಾುಕ ಆಯುಕ್ತ ರಾಜು ಕೆ. ಹೇಳಿದ್ದಾರೆ.
ಕುಂದಾಪುರ ತಾಲೂಕು ಆಡಳಿತದ ವತಿಯಿಂದ ಸೋಮವಾರ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತಿದ್ದರು.
ವಚನ, ಗಾಯನದಂತೆ ಯಕ್ಷಗಾನವು ಕನ್ನಡ ನುಡಿ ಸೇವೆಗೆ ಮಹತ್ತರ ಕೊಡುಗೆ ನೀಡಿದೆ. ಇದರೊಂದಿಗೆ ತಂತ್ರಜ್ಞಾನ ಭಾಷೆಯೂ ಕನ್ನಡವಾಗಬೇಕು ಎನ್ನುವ ಆಶಯ ನಮ್ಮದು. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ಸಾಹಿತ್ಯ, ವಾಸ್ತುಶಿಲ್ಪ, ಭಾವ್ಯತೆಯ ಪರಂಪರೆಯನ್ನು ಮುಂದು ವರೆಸಿಕೊಂಡು ಬಂದಿರುವ ಶ್ರೇಷ್ಠತೆ ನಮ್ಮದು ಎಂದರು.
ಅಧ್ಯಕ್ಷತೆಯನ್ನು ಕುಂದಾಪುರ ಪುರಸಭಾಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ವಹಿಸಿದ್ದರು. ಈ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕ್ಷ ಸಂದೀಪ್ ಖಾರ್ವಿ, ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಸದಸ್ಯರಾದ ದೇವಕಿ ಸಣ್ಣಯ್ಯ, ಪ್ರಭಾಕರ್ ವಿ., ಸಂತೊಷ್ ಶೆಟ್ಟಿ, ಕಮಲ ಮಂಜುನಾಥ್ ಪೂಜಾರಿ, ಪುಷ್ಪಾ ಶೇಟ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್.ಪೂಜಾರಿ, ಕುಂದಾಪುರ ಡಿವೈಎಸ್ಪಿಶ್ರೀಕಾಂತ್ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ ಮೊದಲಾ ದವರು ಉಪಸ್ಥಿತರಿದ್ದರು.
ಕುಂದಾಪುರದ ನಗರ ಪೋಲೀಸ್ ಠಾಣಾಧಿಕಾರಿ ಸದಾಶಿವ ಗವರೋಜಿ ನೇತೃತ್ವದಲ್ಲಿ ಪೋಲೀಸ್ ಇಲಾಖೆಯಿಂದ ಧ್ವಜವಂದನೆ ನಡೆಯಿತು. ಶಿಕ್ಷಕ ಪ್ರಕಾಶ್ ನೇತೃತ್ವದಲ್ಲಿ ಕನ್ನಡ ಗೀತೆಗಳ ಗಾಯನ ನಡೆಯಿತು. ಕುಂದಾಪುರ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಸ್ವಾಗತಿಸಿದರು. ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ್ ಶೆಟ್ಟಿ ವಂದಿಸಿದರು. ಶಿಕ್ಷಕ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.







