Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ...

ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ ಸ್ಪೂರ್ತಿ ಇರಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ1 Nov 2021 7:53 PM IST
share
ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ ಸ್ಪೂರ್ತಿ ಇರಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ನ.1: ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ ಸ್ಪೂರ್ತಿ ಕನ್ನಡಿಗರಿಗಿರಲಿ. ಕನ್ನಡವನ್ನು ಬೆಳೆಸಿ ಕರ್ನಾಟಕವನ್ನು ಉಳಿಸಬೇಕು. ಕನ್ನಡಿಗರು ಈ ಕೆಲಸ ಮಾಡಬೇಕು. ಕನ್ನಡ ಬಳಕೆ, ಇತರರಿಗೆ ಕಲಿಸುವುದು, ಸಾಹಿತ್ಯ, ಸಂಸ್ಕøತಿಯಲ್ಲಿ ನಿರಂತರವಾಗಿ ಬೆಳೆಸಲು ಪರಿಶ್ರಮ ಅಗತ್ಯ. ಕನ್ನಡಕ್ಕೆ ಆಡಳಿತದಲ್ಲಿ ಹಾಗೂ ಬದುಕಿನಲ್ಲಿ ಅಗ್ರಮಾನ್ಯ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಸೋಮವಾರ ನಗರದ ಮೈಸೂರು ಬ್ಯಾಂಕ್ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಉತ್ಸವ ಹಾಗೂ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕದ ಏಕೀಕರಣ: ಸ್ವಾತಂತ್ರ್ಯ ನಂತರ ಕರ್ನಾಟಕದ ಏಕೀಕರಣಕ್ಕಾಗಿ ದೊಡ್ಡ ಹೋರಾಟ ನಡೆದು, ಹರಿದು ಹಂಚಿಹೋಗಿದ್ದ ಪ್ರಾಂತ್ಯಗಳು ಒಂದಾದವು. ಹಳೆ ಕರ್ನಾಟಕ, ಹೊಸ ಕರ್ನಾಟಕ ಸೇರಿ 1956ರಲ್ಲಿ ವಿಶಾಲ ಕರ್ನಾಟಕದ ಉದಾಯವಾಯಿತು. ನಿಜಲಿಂಗಪ್ಪ, ದೊಡ್ಡಮೇಟಿ, ಕಡಿದಾಳ್ ಮಂಜಪ್ಪ, ಕೆಂಗಲ್ ಹನುಮಂತಯ್ಯ, ಕುವೆಂಪು ಅವರ ಚಿಂತನೆ ಪರಿಶ್ರಮದಿಂದ ಕರ್ನಾಟಕದ ಏಕೀಕರಣವಾಯಿತು ಎಂದು ಅವರು ತಿಳಿಸಿದರು.

ಕನ್ನಡದ ಅಭಿಮಾನ ಮತ್ತು ಸ್ವಾಭಿಮಾನದ ಸಂಗಮ ವಾಟಾಳ್ ನಾಗರಾಜ್: ವಾಟಾಳ್ ನಾಗರಾಜ್ ಕನ್ನಡದ ಅಭಿಮಾನವಿರುವ ಯುವಕರಾಗಿದ್ದರು. ಹಿರಿಯರ ಕಷ್ಟವನ್ನು ಕಣ್ಣಾರೆ ಕಂಡವರು. ಕನ್ನಡದ ಅಭಿಮಾನ ಮತ್ತು ಸ್ವಾಭಿಮಾನದ ಸಂಗಮ ವಾಟಾಳ್ ನಾಗರಾಜ್. ಕರ್ನಾಟಕದ ಏಕೀಕರಣವನ್ನು ಅವರು ಹತ್ತಿರದಿಂದ ನೋಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸ್ವಾಭಿಮಾನ, ಅಭಿಮಾನ ಗುಣಧರ್ಮಗಳನ್ನು ಕನ್ನಡಕ್ಕೆ ತುಂಬದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟ ಎಂದು ತಿಳಿದು, ಬೆಂಗಳೂರಿನಲ್ಲಿ ಕನ್ನಡದ ಪ್ರಾಬಲ್ಯತೆ ತರಲು ಸಂಘಟನೆ ಮಾಡಿ, ದನಿ ಎತ್ತಿ ಕನ್ನಡವನ್ನು ಅಸ್ತಿತ್ವಕ್ಕೆ ತಂದರು. ರಾಜ್ಯದ ರಾಜಧಾನಿಯಲ್ಲಿ ಕನ್ನಡ ಪ್ರಾಬಲ್ಯವಾದರೆ ಇಡೀ ರಾಜ್ಯದಲ್ಲಿ ಕನ್ನಡ ಅಸ್ತಿತ್ವಕ್ಕೆ ಬರುವಂತೆ ಮಾಡಿದರು. ಸರಕಾರ ಅಧಿಕೃತವಾಗಿ ರಾಜ್ಯೋತ್ಸವ ಆಚರಿಸುವ ಮುನ್ನವೇ 1962 ರಿಂದ ನಿರಂತರವಾಗಿ ರಾಜ್ಯೋತ್ಸವವನ್ನು ವಾಟಾಳ್ ನಾಗರಾಜ್ ಆಚರಿಸಿಕೊಂಡು ಬಂದಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡದ ಬಗ್ಗೆ ದೂರದೃಷ್ಟಿ ಇಟ್ಟುಕೊಂಡು ಕನ್ನಡ ಏಕೀಕರಣ, ಕನ್ನಡ ನಾಡನ್ನು ಕಟ್ಟುವ ಕಾಯಕವನ್ನು ಚಿರಸ್ಮರಣೀಯವಾಗಿ ನಡೆಸಿಕೊಂಡು ಬಂದಿದ್ದಾರೆ. ವಾಟಾಳ್ ನಾಗರಾಜ್ ಅವರ ಬದುಕು, ದನಿ, ಸ್ವಾಭಿಮಾನ, ಸಂಘಟನೆ, ಹೋರಾಟ, ಬದುಕಿನ ಪ್ರತೀಕ. ಅವರ ಅನುಭವ, ಹೋರಾಟದ ದೃಷ್ಟಿಯಿಂದ ಹಿರಿಯರು. ಅವರ ಕ್ರಿಯಾಶೀಲತೆ ಉತ್ಸಾಹ, ನೋಡಿದರೆ ಯುವಕರಂತೆ ಕೆಲಸ ಮಾಡುತ್ತಾರೆ ಎಂದು ಬಸವರಾಜ ಬೊಮ್ಮಾಯಿ ಪ್ರಶಂಸಿದರು.

ಶಿಕ್ಷಣದಿಂದ ಉದ್ಯೋಗದವರೆಗೆ ಕನ್ನಡಿಗರಿಗೆ ಆದ್ಯತೆ: ಯುವಕರಿಗೆ ಸಮಕಾಲೀನ ಸಮಸ್ಯೆಗಳನ್ನು ಎದುರಿಸಲು ಉದ್ಯೋಗ ಅಗತ್ಯ. ಸ್ಥಿರವಾದ ಆರ್ಥಿಕ ಬದುಕು ಕೊಟ್ಟಾಗ ಮಾತ್ರ ಸಮೃದ್ಧ ಕರ್ನಾಟಕ ಕಟ್ಟಲು ಸಾಧ್ಯ. ಉನ್ನತ ಶಿಕ್ಷಣದಲ್ಲಿ ಕನ್ನಡಕ್ಕೆ ಸ್ಥಾನ ನೀಡಲಾಗಿದೆ. ದೇಶದಲ್ಲಿಯೇ ಅತ್ಯಂತ ಉನ್ನತ ಐ.ಟಿ.ಐ ಗಳು ಕರ್ನಾಟಕದಲ್ಲಿದೆ. ತಾಂತ್ರಿಕ ವಿದ್ಯೆ, ಕೌಶಲ್ಯಾಭರಿತ ತರಬೇತಿ ನೀಡಿ ಯುವಕರಿಗೆ ಉದ್ಯೋಗ ನೀಡುತ್ತದೆ. ಶಿಕ್ಷಣದಿಂದ ಹಿಡಿದು ಉದ್ಯೋಗದವರೆಗೆ ಕನ್ನಡ ಹಾಗೂ ಕನ್ನಡಿಗರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ನೆಲ, ಜಲ, ದನಿಯನ್ನು ರಕ್ಷಣೆ, ನೈಸರ್ಗಿಕ ಸಂಪತ್ತು ಉಳಿಸುವ ಸಂಕಲ್ಪವನ್ನು ಸರಕಾರ ಮಾಡುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X