ಮಂಚಿಕೋಡಿ: ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ

ಉಡುಪಿ, ನ.1: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರ ಪುಣ್ಯತಿಥಿ ಯನ್ನು ಅ.31ರಂದು ಮಂಚಿಕೋಡಿಯ ಮಂಜುಶ್ರೀ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕೊರಗ ಸಮುದಾಯದ ಹಿರಿಯರಾದ ಅಪ್ಪಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಶಲ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ, ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ.ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ ಮಾತನಾಡಿದರು. ಅಧ್ಯಕ್ಷತೆಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯ ರಮೇಶ್ ಕಾಂಚನ್ ವಹಿಸಿದ್ದರು.
ಕೊರಗ ಸಮುದಾಯದ ಮುಖಂಡ ಸುಂದರ್, ನಗರಸಭಾ ಮಾಜಿ ಸದಸ್ಯ ರಾದ ವಿಜಯ್ ಜತ್ತನ, ಲತಾ ಆನಂದ್ ಶೇರಿಗಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಹಮ್ಮಾದ್, ಕಾಂಗ್ರೆಸ್ ಮುಖಂಡ ರಮೇಶ್ ಮಲ್ಪೆ, ಕಾರ್ಯಕರ್ತ ಸಂಜಯ್ ಆಚಾರ್ಯ, ಸ್ಥಳೀಯ ಮುಖಂಡರಾದ ರಾಘವೇಂದ್ರ ನಾಯ್ಕ್, ಶೈಲೇಶ್ ರೈ, ಕರುಣಾಕರ ಪೂಜಾರಿ, ಸುರೇಶ್ ನಾಯ್ಕ್, ವಿಜಯ್ ಮಂಜುಶ್ರೀ ನಗರ, ವೆಂಕಟಪ್ಪ ನಾಯ್ಕ್, ವಿಜಯ್ ಪುತ್ರನ್, ಸಂಜೀವಿ ಉಪಸ್ಥಿತರಿದ್ದರು.
ಸಭೆಯಲ್ಲಿ ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಿಠಲ್ ನಾಯ್ಕ್ ಮಂಚಿ ಇವರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.







