Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಜನಸೇವಕ’ ಯೋಜನೆ: ಜನವರಿ 26ರಿಂದ ...

'ಜನಸೇವಕ’ ಯೋಜನೆ: ಜನವರಿ 26ರಿಂದ ಗ್ರಾಮೀಣ ಭಾಗಕ್ಕೂ ವಿಸ್ತರಣೆ; ಸಿಎಂ ಬೊಮ್ಮಾಯಿ

8 ಇಲಾಖೆಗಳ 58 ಸೇವೆಗಳು ಲಭ್ಯ, 115 ರೂ.ಶುಲ್ಕ ನಿಗದಿ

ವಾರ್ತಾಭಾರತಿವಾರ್ತಾಭಾರತಿ1 Nov 2021 9:09 PM IST
share
ಜನಸೇವಕ’ ಯೋಜನೆ: ಜನವರಿ 26ರಿಂದ  ಗ್ರಾಮೀಣ ಭಾಗಕ್ಕೂ ವಿಸ್ತರಣೆ; ಸಿಎಂ ಬೊಮ್ಮಾಯಿ

ಬೆಂಗಳೂರು, ನ. 1: `ಆಧಾರ್ ಕಾರ್ಡ್, ವಿಧವಾ ಪಿಂಚಣಿ, ವೃದ್ಧಾಪ್ಯ ವೇತನ ಸೇರಿದಂತೆ ರಾಜ್ಯ ಸರಕಾರದ ವಿವಿಧ ಇಲಾಖೆಗಳ 58 ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ `ಜನಸೇವಕ’ ನೂತನ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಲ್ಲೇಶ್ವರನಲ್ಲಿ ಚಾಲನೆ ನೀಡಿದರು.

ಸೋಮವಾರ ಇಲ್ಲಿನ ಪ್ಯಾಲೇಸ್ ಗುಟ್ಟಹಳ್ಳಿಯ 4 ಮತ್ತು 5ನೆ ಅಡ್ಡರಸ್ತೆಗಳಲ್ಲಿರುವ ಆಯ್ದ 10 ಮನೆಗಳಿಗೆ ಸ್ಥಳೀಯ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಜತೆ ತೆರಳಿದ ಸಿಎಂ ಬೊಮ್ಮಾಯಿ ಅವರು ವಿವಿಧ ಸೇವೆಗಳನ್ನು ಸಂಬಂಧಪಟ್ಟ ಫಲಾನುಭವಿಗಳ ಮನೆಯೊಳಗೆ ಹೋಗಿ ತಲುಪಿಸಿದರು. ಇದರಿಂದ ಸ್ಥಳೀಯ ಜನರು ಹರ್ಷಚಿತ್ತರಾದರು. ಸಿಎಂ ಮತ್ತು ಸಚಿವರಿಗೆ ಪುಷ್ಪವೃಷ್ಟಿ ಮಾಡಿ ಸಂಭ್ರಮಿಸಿದರು.

ಪ್ರತಿ ಮನೆಯ ಒಳಗೆ ಹೋಗಿ, ಅವರಿಗೆ ಆಧಾರ್ ಕಾರ್ಡ್, ಆರೋಗ್ಯ ಕಾರ್ಡ್, ಎಪಿಎಲ್ ಕಾರ್ಡ್ ನೀಡಿದರು. ನಿರ್ಮಾಣ ಹಂತದ ಕಟ್ಟಡದೊಳಗೆ ಹೋಗಿ ಅಲ್ಲಿದ್ದ ಕೂಲಿ ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್ ನೀಡಿದರು. ತಳ್ಳುವ ಗಾಡಿಯಲ್ಲಿ ಹೂವು ಮಾರಾಟ ಮಾಡುತ್ತಿದ್ದ ಮಹಿಳೆಗೆ ಆರೋಗ್ಯ ಕಾರ್ಡ್ ನೀಡಿದರು. ಮುಖ್ಯಮಂತ್ರಿಯೇ ಬಂದು ಈ ರೀತಿ ಸೇವೆ ಒದಗಿಸಿದ್ದು ನಿಜಕ್ಕೂ ಸಂತಸ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಯೋಜನೆಯನ್ನು ಇಡೀ ಬೆಂಗಳೂರು ನಗರದ 28 ಕ್ಷೇತ್ರಗಳನ್ನು ಅನುಷ್ಠಾನ ಮಾಡುತ್ತಿದ್ದು, ಅದರ ಸಾಂಕೇತಿಕ ಉದ್ಘಾಟನೆ ಮಲ್ಲೇಶ್ವರದಲ್ಲಿ ಆಗಿದೆ. 2022ರ ಜನವರಿ 26ರಿಂದ ರಾಜ್ಯದ ಗ್ರಾಮೀಣ ಭಾಗಕ್ಕೂ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಘೋಷಿಸಿ ಬಸವರಾಜ ಬೊಮ್ಮಾಯಿ, ಜನರ ಮನೆ ಬಾಗಿಲಿಗೆ ಸರಕಾರಿ ಸೇವೆ ಒದಗಿಸುವುದರ ಜತೆಗೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಆಲಿಸಲು ಕಾಲ್ ಸೆಂಟರ್ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಪಡಿತರ ನೇರವಾಗಿ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ನಡೆದುಕೊಂಡೇ ಹೋದ ಸಿಎಂ: ಜನಪ್ರತಿನಿಧಿಗಳು, ತಮ್ಮನ್ನು ಆರಿಸಿದ ಜನರ ಬಳಿಗೆ ತಾವೇ ಹೋಗಬೇಕೆನ್ನುವುದು ಸರಕಾರದ ಆಶಯವಾಗಿದೆ. ಈ ಆಶಯಕ್ಕೆ ಅನುಗುಣವಾಗಿ `ಜನಸೇವಕ’ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದ ಅವರು, ಜನಸೇವಕರಂತೆ ಸ್ಕೂಟರಿನಲ್ಲಿ ಹೋಗಿಯೇ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸಬೇಕಿತ್ತು. ಆದರೆ, ಕಾರ್ಯಕ್ರಮಕ್ಕೆ ಭಾರೀ ಜನ ಸೇರಿದ್ದ ಕಾರಣ, ಸಿಎಂ, ಸಚಿವ ಅಶ್ವತ್ಥನಾರಾಯಣ ಅವರೊಂದಿಗೆ ನಡೆದುಕೊಂಡು ಹೋಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

58 ಸೇವೆಗಳು ಲಭ್ಯ: `ಜನಸೇವಕ’ ಯೋಜನೆಯಡಿ ಸದ್ಯಕ್ಕೆ ರಾಜ್ಯ ಸರಕಾರದ 8 ಇಲಾಖೆಗಳ 58 ಸೇವೆಗಳು ಮನೆ ಬಾಗಿಲಿಗೇ ಬರಲಿವೆ. ಈ ಇಲಾಖೆಗಳಲ್ಲಿ ಕಂದಾಯ, ಆರೋಗ್ಯ, ಪೊಲೀಸ್, ವಸತಿ, ಶಿಕ್ಷಣ, ಜಲಮಂಡಲಿ, ಇಂಧನ, ಸಾರಿಗೆ, ಆಹಾರ ಇಲಾಖೆ ಸೇರಿವೆ. ಇದರ ವ್ಯಾಪ್ತಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಇಲಾಖೆಯ ಸೇವೆಗಳನ್ನು ಸೇರಿಸಲಾಗುವುದು. ವಿವರಗಳಿಗೆ www.janasevakakarnataka.gov.in ನೋಡಬಹುದು. ಅಥವಾ ದೂರವಾಣಿ ಸಂಖ್ಯೆ- 080-44554455ನ್ನು ಸಂಪರ್ಕಿಸಬಹುದು. ಮಲ್ಲೇಶ್ವರಂ ಕ್ಷೇತ್ರದ ನಾಗರಿಕರು ಸಂಪರ್ಕಿಸಬಹುದಾದ ಸಂಖ್ಯೆ 080-23563943. 

`ಜನಸೇವಕ’ ಯೋಜನೆಯಡಿ ಸದ್ಯಕ್ಕೆ ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ವಿಧವಾ ವೇತನ, ವೃದ್ಧಾಪ್ಯ ವೇತನ, ಬಿಬಿಎಂಪಿ ಖಾತಾ ಸೇವೆಗಳು, ಹಿರಿಯ ನಾಗರಿಕರ ಕಾರ್ಡ್, ಆಧಾರ್ ಕಾರ್ಡ್, ಆಯುಷ್ಮಾನ್ ಭಾರತ-ಆರೋಗ್ಯ, ಕರ್ನಾಟಕ ಐಡಿ ಕಾರ್ಡ್(ಹೆಲ್ತ್ ಕಾರ್ಡ್), ಮತದಾರರ ಗುರುತಿನ ಚೀಟಿಗಳು ಕೋರಿಕೆಯ ಮೇರೆಗೆ ಕ್ಷಿಪ್ರ ಗತಿಯಲ್ಲಿ ಮನೆ ಬಾಗಿಲಿಗೇ ತಲುಪಲಿವೆ. ಈ ಕೆಲಸವನ್ನು ನಿರ್ದಿಷ್ಟ ವಿನ್ಯಾಸದ ಟೀ-ಶರ್ಟ್‍ಧಾರಿಗಳಾಗಿ ಸ್ಕೂಟರಿನಲ್ಲಿ ಬರುವ ಜನಸೇವಕರ ಪಡೆ ಮಾಡಲಿದೆ. 

`ಜನಸೇವಕ’ ಯೋಜನೆಯಡಿ ಸಾರ್ವಜನಿಕರು ನಿಶ್ಚಿಂತೆಯಿಂದ ಇರಬಹುದು. ಅಂದರೆ, ಆಗಬೇಕಾದ ಕೆಲಸಗಳಿಗಾಗಿ ಹತ್ತಾರು ಸಲ ಸುತ್ತುವುದು, ಟ್ರಾಫಿಕ್ ಜಾಮ್‍ನ ಕಿರಿಕಿರಿ, ವ್ಯರ್ಥ ಕಾಲಹರಣ ಏನೂ ಇಲ್ಲ. ಸರಕಾರವು ಇದರಡಿಯಲ್ಲಿ ಕೇವಲ 115 ರೂ.ಶುಲ್ಕ ನಿಗದಿಪಡಿಸಿದ್ದು, ಇದರ ಮೇಲೊಂದಿಷ್ಟು ಸೇವಾಶುಲ್ಕ ಸೇರಿಸಲಾಗಿದೆ ಅಷ್ಟೇ. 

ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ, ಬಿಬಿಎಂಪಿ ಪಶ್ಚಿಮ ವಲಯದ ಆಯುಕ್ತ ಬಸವರಾಜು, ಇಡಿಸಿಎಸ್ ನಿರ್ದೇಶಕಿ ದೀಪ್ತಿ ಕಾನಡೆ, ಜನಸೇವಕ ಯೋಜನೆಯ ನಿರ್ದೇಶಕ ವರಪ್ರಸಾದ್ ರೆಡ್ಡಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ರಸ್ತೆ ಗುಂಡಿ ಮುಚ್ಚಲು ವಾರದ ಗಡುವು: `ನಿರಂತರ ಮಳೆಯಿಂದ ರಸ್ತೆ ಗುಂಡಿ ಮುಚ್ಚಲಾಗುತ್ತಿಲ್ಲ. ಇದಕ್ಕೆ ಒಂದು ವಾರದ ಗಡುವು ನೀಡಲಾಗಿದೆ. ಈ ಸಂಬಂಧ ವರದಿಯನ್ನೂ ತರಿಸಿಕೊಳ್ಳಲಾಗಿದೆ. ನಂತರ ನಾನೇ ಖುದ್ದಾಗಿ ವೀಕ್ಷಣೆಗೆ ತೆರಳಲಿದ್ದೇನೆ. ಮಳೆ ಬಿಡುವು ನೀಡಿದರೆ ಒಂದು ವಾರದಲ್ಲಿ ರಸ್ತೆ ಗುಂಡಿ ಮುಚ್ಚಲು ಕ್ರಮ ವಹಿಸಲಾಗುವುದು'

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

`ಜನಸೇವಕ ಯೋಜನೆಗೆ ನನ್ನ ಮಲ್ಲೇಶ್ವರ ಕ್ಷೇತ್ರದ ಮೂಲಕ ಉದ್ಘಾಟಿಸಿದ್ದು ಸಂತಸ ತಂದಿದೆ. ಇಂದಿನಿಂದಲೆ ಸರಕಾರಿ ಸೇವೆ ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಲಾಗುವುದು. ಈ ವಿಷಯದಲ್ಲಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ಮುಂಚೂಣಿಯಲ್ಲಿ ಇರುತ್ತೆ ಎನ್ನುವ ವಿಶ್ವಾಸ ಇದೆ'

-ಡಾ.ಸಿ.ಎನ್.ಆಶ್ವತ್ಥನಾರಾಯಣಉನ್ನತ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X