ಫಲಾಹ್ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

ತಲಪಾಡಿ: ವಿದ್ಯಾನಗರದ ಫಲಾಹ್ ವಿದ್ಯಾಸಂಸ್ಥೆಯಲ್ಲಿ 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ವೇದಿಕೆಯಲ್ಲಿ ಫಲಾಹ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಯು. ಮೊಹಮ್ಮದ್ ಹಾಜಿ , ಕೋಶಾಧಿಕಾರಿ ಅಬ್ಬಾಸ್ ಮಜಲ್ , ಮಾಜಿ ಕಾರ್ಯದರ್ಶಿ ಟಿ.ಎಂ. ಬಶೀರ್ ಹಾಗೂ ಸದಸ್ಯರಾದ ಇಸ್ಮಾಯಿಲ್ ಟಿ., ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್ , ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಆಯಿಶಾ ಸಬೀನಾ ಕೈಸಿರಾನ್ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾ ಡಿ ಸೋಜ , ಅನುದಾನಿತ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಮಹಮ್ಮದ್ ರಫೀಕ್ ಉಪಸ್ಥಿತರಿದ್ದರು.
ಸಂಸ್ಥೆಯ ಆಡಳಿತಾಧಿಕಾರಿ ಮಹಮ್ಮದ್ ಹನೀಫ್ ಸ್ವಾಗತಿಸಿದರು. ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಲತಾ ಪಿ ಕಾರ್ಯಕ್ರಮ ನಿರೂಪಿಸಿದರು.
Next Story





